ಕ್ರೀಡಾಕೂಟದಲ್ಲಿ ಸ್ಪರ್ಧಾ ಮನೋಭಾವದಿಂದ ಪಾಲ್ಗೊಳ್ಳಿ: ಇ.ಎಂ.ಮಂಜುನಾಥ್‌ ಸಲಹೆ

| Published : Nov 23 2025, 02:00 AM IST

ಕ್ರೀಡಾಕೂಟದಲ್ಲಿ ಸ್ಪರ್ಧಾ ಮನೋಭಾವದಿಂದ ಪಾಲ್ಗೊಳ್ಳಿ: ಇ.ಎಂ.ಮಂಜುನಾಥ್‌ ಸಲಹೆ
Share this Article
  • FB
  • TW
  • Linkdin
  • Email

ಸಾರಾಂಶ

ಬಿಡುವಿಲ್ಲದೆ ಒತ್ತಡದಲ್ಲೂ ಕೆಲಸ ಮಾಡುವ ಪತ್ರಕರ್ತರು ಬಿಡುವು ಮಾಡಿಕೊಂಡು ಕ್ರೀಡಾಕೂಟದಲ್ಲಿ ಎಲ್ಲರೂ ಸ್ಪರ್ಧಾ ಮನೋಭಾವದಿಂದ ಪಾಲ್ಗೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಾವಣಗೆರೆ ಜಿಲ್ಲಾಧ್ಯಕ್ಷ ಇ.ಎಂ.ಮಂಜುನಾಥ್ ಸಲಹೆ ನೀಡಿದರು.

ದಾವಣಗೆರೆ: ಬಿಡುವಿಲ್ಲದೆ ಒತ್ತಡದಲ್ಲೂ ಕೆಲಸ ಮಾಡುವ ಪತ್ರಕರ್ತರು ಬಿಡುವು ಮಾಡಿಕೊಂಡು ಕ್ರೀಡಾಕೂಟದಲ್ಲಿ ಎಲ್ಲರೂ ಸ್ಪರ್ಧಾ ಮನೋಭಾವದಿಂದ ಪಾಲ್ಗೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಾವಣಗೆರೆ ಜಿಲ್ಲಾಧ್ಯಕ್ಷ ಇ.ಎಂ.ಮಂಜುನಾಥ್ ಸಲಹೆ ನೀಡಿದರು.ನಗರದ ಜಿಲ್ಲಾ ಪೊಲೀಸ್ ಇಲಾಖೆಯ ಡಿಎಅರ್ ಕವಾಯತು ಮೈದಾನದಲ್ಲಿ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮಾಧ್ಯಮ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪತ್ರಕರ್ತರು ಸದಾ ಸುದ್ದಿಗಳನ್ನು ಮಾಡುವಲ್ಲಿ ಮಗ್ನರಾಗಿರುತ್ತಾರೆ. ಇಂತಹ ಸಂದರ್ಭದಲ್ಲಿ ಎಲ್ಲರೂ ಒಂದೆಡೆ ಸೇರಿ ಈ ರೀತಿಯ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಕ್ರೀಡಾ ಮನೋಭಾವ ಪ್ರದರ್ಶಿಸಿದ್ದಾರೆ ಎಂದರು.

ದಾವಣಗೆರೆ ಕನ್ನಡಿಗ ಪತ್ರಿಕೆಯ ಸಂಪಾದಕ ಆರ್.ರವಿ ಮಾತನಾಡಿ, ಪತ್ರಕರ್ತರು ಬೇರೆ ಬೇರೆ ಪತ್ರಿಕೆಗಳಲ್ಲಿ ಇದ್ದರೂ ಎಲ್ಲರೂ ಸಹೋದರ ಮನೋಭಾವದಿಂದ ಇಲ್ಲಿ ಪಾಲ್ಗೊಂಡಿದ್ದಾರೆ. ಇದೇ ರೀತಿ ತಾಲೂಕು, ಜಿಲ್ಲಾ ಮಟ್ಟದಲ್ಲಿ ಕ್ರಿಕೆಟ್ ಸೇರಿದಂತೆ ಇನ್ನಿತರ ಕ್ರೀಡಾಕೂಟಗಳನ್ನು ಅಯೋಜಿಸಲು ಮುಂದಾದರೆ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧ ಎಂದು ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ್ ಎಸ್.ಬಡದಾಳ್ ಮಾತನಾಡಿ, ಮುಂಬರುವ ದಿನಗಳಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ ಆಯೋಜಿಸಲಾಗುವುದು. ಆ ವೇಳೆ ದಾವಣಗೆರೆ ಜಿಲ್ಲೆಯ ಎಲ್ಲಾ ತಾಲೂಕುಗಳ ಪತ್ರಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಈ ವೇಳೆ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪ್ರಧಾನ ಕಾರ್ಯದರ್ಶಿ ಎಂ.ವೈ.ಸತೀಶ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ವಿ.ಬದರಿನಾಥ, ಪ್ರಜಾವಾಣಿ ಪತ್ರಿಕೆಯ ಸ್ಥಾನಿಕ ಸಂಪಾದಕ ಸಿದ್ದಯ್ಯ ಹಿರೇಮಠ, ಹಿರಿಯ ವರದಿಗಾರ ಬಸವರಾಜ್ ದೊಡ್ಮನಿ, ಎನ್.ಆರ್.ರವಿ, ಕೋಚ್ ತಿಮ್ಮೇಶ್ ಇತರರಿದ್ದರು.