ಕ್ರೀಡೆ, ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿ: ಹರೀಶ್

| Published : Jul 15 2024, 01:53 AM IST

ಕ್ರೀಡೆ, ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿ: ಹರೀಶ್
Share this Article
  • FB
  • TW
  • Linkdin
  • Email

ಸಾರಾಂಶ

ಸ್ಪರ್ಧಾತ್ಮಕ ಜಗತ್ತಿನಲ್ಲಿ ಜ್ಞಾನಾರ್ಜನೆ ಅವಶ್ಯಕವಾಗಿದ್ದು, ಭವಿಷ್ಯದಲ್ಲಿ ವಿದ್ಯಾವಂತರಿಗೆ ಮಾತ್ರ ಹೆಚ್ಚಿನ ಅವಕಾಶಗಳು ದೊರೆಯುತ್ತವೆ ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಹೇಳಿದ್ದಾರೆ.

- ಸರ್ಕಾರಿ ಕಾಲೇಜಿನಲ್ಲಿ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳ ಸಮಾರೋಪ - - - ಕನ್ನಡಪ್ರಭ ವಾರ್ತೆ ಹರಿಹರ

ಸ್ಪರ್ಧಾತ್ಮಕ ಜಗತ್ತಿನಲ್ಲಿ ಜ್ಞಾನಾರ್ಜನೆ ಅವಶ್ಯಕವಾಗಿದ್ದು, ಭವಿಷ್ಯದಲ್ಲಿ ವಿದ್ಯಾವಂತರಿಗೆ ಮಾತ್ರ ಹೆಚ್ಚಿನ ಅವಕಾಶಗಳು ದೊರೆಯುತ್ತವೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಗಿದ್ದ 2023- 2024ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್., ಸ್ಕೌಟ್ ಮತ್ತು ಗೈಡ್ ಹಾಗೂ ರೆಡ್‌ ಕ್ರಾಸ್ ಚಟುವಟಿಕೆಗಳ ಸಮಾರೋಪ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಯುವಕರು ಇಂದಿನ ಬೇಡಿಕೆಗಳಿಗೆ ಅನುಗುಣವಾಗಿ ತಮ್ಮನು ತಾವು ರೂಪಿಸಿಕೊಳ್ಳಬೇಕು. ಆ ಮೂಲಕ ದೇಶದ ಪ್ರಗತಿಯಲ್ಲಿ ಕೈ ಜೋಡಿಸಬೇಕು. ಆದ್ದರಿಂದ ಶಿಕ್ಷಣದೊಂದಿಗೆ ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗಿ ಎಂದರು.

ಸಾಹಿತಿ ಡಾ. ಸಂಗಮನಾಥ ಲೋಕಾಪುರ ಮಾತನಾಡಿ, ವಿದ್ಯಾರ್ಥಿಗಳು ಮುಖ್ಯವಾಗಿ ಶ್ರದ್ಧೆ ಬೆಳೆಸಿಕೊಳ್ಳಬೇಕು. ಅಂಕಗಳ ಜತೆಗೆ ಗುರು-ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಾಲೇಜುಗಳಿಗೆ ಸರ್ಕಾರ ಉತ್ತಮವಾದ ಸೌಲಭ್ಯಗಳನ್ನು ನೀಡುತ್ತಿದೆ. ಅವುಗಳ ಸದ್ಬಳಕೆ ಮಾಡಿಕೊಂಡು ಶ್ರೇಷ್ಠ ನಾಗರೀಕರಾಗಿ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ಎಚ್. ವಿರೂಪಾಕ್ಷಪ್ಪ ವಹಿಸಿದ್ದರು. ೨೦೨೨-೨೩ ನೇ ಶೈಕ್ಷಣಿಕ ಸಾಲಿನಲ್ಲಿ ಕಾಲೇಜಿಗೆ ಅತಿ ಹೆಚ್ಚು ಅಂಕ ಗಳಿಸಿದ ಎಂ.ಸುಷ್ಮಾ, ಅಲಿ ಹಾಗೂ ಬಿ.ಜಿ ಸಂಗೀತಾ ಅವರಿಗೆ ₹10000 ನಗದು ಬಹುಮಾನ ವಿತರಿಸಿ, ಗೌರವಿಸಲಾಯಿತು.

೨೦೨೩-೨೪ನೇ ಸಾಲಿನಲ್ಲಿ ನಡೆಸಿದ ಪಠ್ಯೇತರ ಮತ್ತು ಕ್ರೀಡಾ ಚಟುವಟಿಕೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾಲೇಜಿನ ಐ.ಕ್ಯೂ. ಎಸ್.ಸಿ ಸಂಯೋಜಕ ಜಿ.ಎಸ್. ಸುರೇಶ, ಕಾಲೇಜಿನ ಸಾಂಸ್ಕೃತಿಕ ವಿಭಾಗದ ಸಂಚಾಲಕ ಡಾ. ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಸಿ.ಚಂದ್ರಶೇಖರ್, ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿ ಡಾ. ಬಿ.ಕೆ. ಮಂಜುನಾಥ್, ಯುವ ರೆಡ್ ಕ್ರಾಸ್‌ನ ಸಂಚಾಲಕ ಡಾ. ಎಚ್.ಪಿ. ಅನಂತನಾಗ್ ಹಾಗೂ ಸ್ಕೌಟ್ಸ್ ಅಂಡ್ ಗೈಡ್ಸ್ ವಿಭಾಗದ ಸಂಚಾಲಕರಾದ ಡಾ. ಜಿ.ಎನ್. ದ್ರಾಕ್ಷಾಯಿಣಿ, ಡಾ. ಎಸ್.ಎಂ. ಗೌರಮ್ಮ ಮತ್ತು ಮಂಜುನಾಥ ನರಸಗೊಂಡರ್ ಉಪಸ್ಥಿತರಿದ್ದರು.-------೧೩ಎಚ್‌ಆರ್‌ಆರ್೪:

ಹರಿಹರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡೆ ಚಟುವಟಿಕೆಗಳ ಸಮಾರೋಪ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಶಾಸಕ ಬಿ.ಪಿ. ಹರೀಶ್ ಉದ್ಘಾಟಿಸಿದರು. ಡಾ. ಸಂಗಮನಾಥ ಲೋಕಾಪುರ, ಡಾ. ಎಚ್. ವಿರುಪಾಕ್ಷಪ್ಪ, ಜಿ.ಎಸ್. ಸುರೇಶ ಹಾಗೂ ಇತರರಿದ್ದರು.