ದೈಹಿಕ ಸದೃಢತೆಗೆ ಕ್ರೀಡೆಯಲ್ಲಿ ಪಾಲ್ಗೊಳ್ಳಿ

| Published : Sep 01 2025, 01:04 AM IST

ಸಾರಾಂಶ

ಮಾನವ ಕೆಲಸದ ಒತ್ತಡದಲ್ಲಿ ಅನಾರೋಗ್ಯಕ್ಕೆ ಈಡಾಗುತ್ತಿದ್ದು ದೈಹಿಕ ಚಟುವಟಿಕೆಗಳ ಮೂಲಕ ಅದನ್ನು ನಿವಾರಿಸಿಕೊಳ್ಳಬೇಕು

ಯಲಬುರ್ಗಾ: ದೈಹಿಕ ಮತ್ತು ಮಾನಸಿಕ ಸದೃಢತೆಗೆ ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಲಕ್ಷ್ಮಣ ಹೇಳಿದರು.

ತಾಲೂಕಿನ ಬೇವೂರು ಗ್ರಾಮದ ಕೂಡಲಸಂಗಮೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ದೈನಂದಿನ ಜೀವನದಲ್ಲಿ ಕ್ರೀಡೆಗೆ ಹೆಚ್ಚು ಮಹತ್ವ ನೀಡಬೇಕು. ಮಾನವ ಕೆಲಸದ ಒತ್ತಡದಲ್ಲಿ ಅನಾರೋಗ್ಯಕ್ಕೆ ಈಡಾಗುತ್ತಿದ್ದು ದೈಹಿಕ ಚಟುವಟಿಕೆಗಳ ಮೂಲಕ ಅದನ್ನು ನಿವಾರಿಸಿಕೊಳ್ಳಬೇಕು ಎಂದರು.

ಕೂಡಲ ಸಂಗಮೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆ ಕಾರ್ಯದರ್ಶಿ ದ್ಯಾಮಣ್ಣ ಗೊಂದಿ ಮಾತನಾಡಿ, ಕ್ರೀಡಾಪಟುಗಳು ಸೋಲು-ಗೆಲುವೆನ್ನದೆ ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ನಿರ್ಣಾಯಕರ ನಿರ್ಣಯಕ್ಕೆ ಬದ್ಧರಾಗಿರಬೇಕು. ಗ್ರಾಮೀಣ ಪ್ರದೇಶದ ಕ್ರೀಡೆಗಳ ಉಳಿವಿಗೆ ಎಲ್ಲರೂ ಪ್ರೋತ್ಸಾಹಿಸಬೇಕು ಎಂದರು.

ಈ ವೇಳೆ ಗ್ರಾಪಂ ಅಧ್ಯಕ್ಷೆ ಅಂದಮ್ಮ ಗವಿಸಿದ್ದಪ್ಪ ಬಳಿಗಾರ, ಗಣ್ಯರಾದ ಯಮನಪ್ಪ ಗಡ್ಡದ, ರುದ್ರಪ್ಪ ಕೊಳಜಿ, ಸಿದ್ದಪ್ಪ ತುಪ್ಪದ, ಲಕ್ಷ್ಮವ್ವ ನೀಲಪ್ಪ ಚುಕ್ಕಾಡಿ, ಮಾನಪ್ಪ ಬಡಿಗೇರ, ಗವಿಸಿದ್ದಯ್ಯ ಹಿರೇಮಠ, ದಿನೇಶ, ಮುತ್ತಣ್ಣ, ಮಹಾಲಕ್ಷ್ಮಿ ಸೇರಿದಂತೆ ಇತರು ಇದ್ದರು.