ಇಲ್ಲಿನ ಜಿಜೆಸಿ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ 14 ರಿಂದ 17 ವರ್ಷದೊಳಗಿನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಕ್ರೀಡಾ ಜ್ಯೋತಿ ಸ್ವೀಕರಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ನೀಡುವ ಪ್ರಾಧಾನ್ಯತೆಯಂತೆಯೇ ಕ್ರೀಡೆಗೂ ಪ್ರಾಧಾನ್ಯತೆ ನೀಡಬೇಕು. ಉತ್ತಮ ಆರೋಗ್ಯ ಹೊಂದಿದ ದೇಹವನ್ನು ಹೊಂದಿದರೆ ಮನಸ್ಸು ಉತ್ತಮವಾಗಿ ಚಿಂತಿಸಲು ಅನುವು ಮಾಡಿಕೊಡುತ್ತದೆ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಸೋತಾಗ ಧೃತಿಗೆಡೆದೆ, ಸೋಲನ್ನೇ ಮೆಟ್ಟಿಲನ್ನಾಗಿಸಿ ಯಶಸ್ಸಿನತ್ತ ಮುಖ ಮಾಡಬೇಕು. ಗೆದ್ದಾಗ ಬೀಗದೇ, ಇನ್ನೂ ಉನ್ನತ ಎತ್ತರಕ್ಕೆ ಬೆಳೆಯುವ ಆಲೋಚನೆ ಬೆಳೆಸಿಕೊಳ್ಳಬೇಕೆಂದು ಹೇಳಿದರು.

ತುರುವೇಕೆರೆ: ಸದೃಢ ದೇಹವಿದ್ದರೆ, ಸದೃಢ ಮನಸ್ಸು ಹೊಂದಲು ಸಾಧ್ಯ. ಹಾಗಾಗಿ ವಿದ್ಯಾರ್ಥಿಗಳು ಸದೃಢ ದೇಹ ಪಡೆಯಲು ಕ್ರೀಡೆಯಲ್ಲಿ ಭಾಗವಹಿಸಬೇಕೆಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಾಪಣ್ಣ ಕರೆ ನೀಡಿದರು.

ಇಲ್ಲಿನ ಜಿಜೆಸಿ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ 14 ರಿಂದ 17 ವರ್ಷದೊಳಗಿನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಕ್ರೀಡಾ ಜ್ಯೋತಿ ಸ್ವೀಕರಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ನೀಡುವ ಪ್ರಾಧಾನ್ಯತೆಯಂತೆಯೇ ಕ್ರೀಡೆಗೂ ಪ್ರಾಧಾನ್ಯತೆ ನೀಡಬೇಕು. ಉತ್ತಮ ಆರೋಗ್ಯ ಹೊಂದಿದ ದೇಹವನ್ನು ಹೊಂದಿದರೆ ಮನಸ್ಸು ಉತ್ತಮವಾಗಿ ಚಿಂತಿಸಲು ಅನುವು ಮಾಡಿಕೊಡುತ್ತದೆ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಸೋತಾಗ ಧೃತಿಗೆಡೆದೆ, ಸೋಲನ್ನೇ ಮೆಟ್ಟಿಲನ್ನಾಗಿಸಿ ಯಶಸ್ಸಿನತ್ತ ಮುಖ ಮಾಡಬೇಕು. ಗೆದ್ದಾಗ ಬೀಗದೇ, ಇನ್ನೂ ಉನ್ನತ ಎತ್ತರಕ್ಕೆ ಬೆಳೆಯುವ ಆಲೋಚನೆ ಬೆಳೆಸಿಕೊಳ್ಳಬೇಕೆಂದು ಹೇಳಿದರು.

ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ, ಆದರ್ಶವಿಲ್ಲದೇ ಬದುಕಿದರೆ ಬದುಕಿಗೆ ಅವಮಾನ. ಹಾಗಾಗಿ ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳಿವೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಪಾಪಣ್ಣ ಹೇಳಿದರು.

ಬಿಇಒ ಸೋಮಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಭವ್ಯ. ಗೌರವಾಧ್ಯಕ್ಷ ಷಣ್ಮುಖಪ್ಪ, ಸಿ.ಎಸ್.ರಾಜಪ್ಪ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಪಿ.ರಾಜು, ಲಯನ್ಸ್ ಕ್ಲಬ್ ಅಧ್ಯಕ್ಷ ಸುನಿಲ್ ಬಾಬು, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಂಜೇಗೌಡ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ದಾಕ್ಷಾಯಣಮ್ಮ,ಗುರುರಾಜ್, ಉಪ ಪ್ರಾಂಶುಪಾಲ ವೆಂಕಟೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.