ಮತದಾನದ ಮೂಲಕ ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಳ್ಳಿ: ಡಾ. ಗೋಪಾಲಕೃಷ್ಣ

| Published : Apr 26 2024, 12:49 AM IST

ಮತದಾನದ ಮೂಲಕ ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಳ್ಳಿ: ಡಾ. ಗೋಪಾಲಕೃಷ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರುಲೋಕಸಭಾ ಸಾರ್ವತ್ರಿಕ ಚುನಾವಣೆ ಮತದಾನ ಶುಕ್ರವಾರ ನಡೆಯಲಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ಪ್ರಜಾ ಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿ ಮತ ಕೇಂದ್ರಗಳಿಗೆ ತೆರಳಿ ಮತ ಹಾಕುವಂತೆ ಜಿಲ್ಲಾ ಸ್ವೀಪ್ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಹೇಳಿದರು.

ನಗರದ ಐಡಿಎಸ್‌ಜಿ ಕಾಲೇಜಿನ ಮಾಸ್ಟರಿಂಗ್ ಕೇಂದ್ರಕ್ಕೆ ಭೇಟಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಲೋಕಸಭಾ ಸಾರ್ವತ್ರಿಕ ಚುನಾವಣೆ ಮತದಾನ ಶುಕ್ರವಾರ ನಡೆಯಲಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ಪ್ರಜಾ ಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿ ಮತ ಕೇಂದ್ರಗಳಿಗೆ ತೆರಳಿ ಮತ ಹಾಕುವಂತೆ ಜಿಲ್ಲಾ ಸ್ವೀಪ್ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಹೇಳಿದರು.ನಗರದ ಐಡಿಎಸ್‌ಜಿ ಕಾಲೇಜಿನ ಮಾಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಮತಯಂತ್ರಗಳ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಉಡುಪಿ- ಚಿಕ್ಕಮಗಳೂರು ಹಾಗೂ ಹಾಸನ ಲೋಕಸಭಾ ಕ್ಷೇತ್ರ ಜಿಲ್ಲೆಯ ವ್ಯಾಪ್ತಿಗೆ ಬರಲಿದ್ದು, ಇಲ್ಲಿ ಅತಿ ಹೆಚ್ಚು ಮತದಾನವಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಈ ನಿಟ್ಟಿನಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ವಿವಿಧ ಬಗೆಯ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಿರುವುದಾಗಿ ಹೇಳಿದರು.ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯ ವ್ಯವಸ್ಥೆ ಮಾಡಿದ್ದು ಕುಡಿಯುವ ನೀರು, ತಾಪಮಾನ ಹೆಚ್ಚಿರುವುದರಿಂದ ಒಆರ್‌ಎಸ್ ಪ್ಯಾಕೆಟ್, ತಂಪು ಬಟ್ಟೆ ಮುಂತಾದವುಗಳ ಜೊತೆಗೆ ಆರೋಗ್ಯ ಕಿಟ್‌ನ್ನು ಒದಗಿಸಲಾಗಿದೆ ಎಂದರು. ಪ್ರತಿ ವಿಧಾನಸಭಾ ಕ್ಷೇತ್ರವಾರು ಸುಸಜ್ಜಿತ ಮತಗಟ್ಟೆಗಳನ್ನು ಸ್ಥಾಪಿಸಿದ್ದು ಸಖಿ ಮತಗಟ್ಟೆ, ಕಾಫಿ ನಾಡಿನ ವೈಶಿಷ್ಟ್ಯ ಸಾರುವ ಮತಗಟ್ಟೆ, ಅಂಗವಿಕಲರಿಗೆ ವಿಶೇಷ ಮತಗಟ್ಟೆ ಸ್ಥಾಪನೆ ಸೇರಿದಂತೆ ಈ ರೀತಿ ಹತ್ತು ಹಲವಾರು ವಿಭಿನ್ನತೆಗಳಿಂದ ಕೂಡಿದ ಮತಗಟ್ಟೆ ಮೂಲಕ ಮತದಾರರ ಸೆಳೆಯುವ ಕೆಲಸ ಮಾಡಿರುವುದಾಗಿ ತಿಳಿಸಿದರು.ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಾಣಿಸಿದರೆ ಮತಗಟ್ಟೆ ಅಧಿಕಾರಿ ದೂರವಾಣಿ ಮೂಲಕ ಮಾಹಿತಿನೀಡಿದ ತಕ್ಷಣ ಪರ್ಯಾಯ ಇವಿಎಂ ಮತಯಂತ್ರ ನೀಡುವ ವ್ಯವಸ್ಥೆ ಕೈಗೊಳ್ಳಲಾಗಿದೆ. ಈ ಬಗ್ಗೆ ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದರು.

25 ಕೆಸಿಕೆಎಂ 3ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಮಾಸ್ಟರಿಂಗ್ ಕೇಂದ್ರಕ್ಕೆ ಜಿಪಂ ಸಿಇಒ ಡಾ. ಗೋಪಾಲಕೃಷ್ಣ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.