ಸಾರಾಂಶ
ಹಿರೇಕೆರೂರು: ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯಿರಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಅಕ್ಷಯ್ ಶ್ರೀಧರ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.ಯಾವುದೇ ಆಮಿಷಗಳಿಗೆ ಬಲಿಯಾಗದೆ ಮುಕ್ತ ಹಾಗೂ ನ್ಯಾಯಸಮ್ಮತ ಮತದಾನ ಮಾಡಿರಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಚುನಾವಣೆಯಲ್ಲಿ ಅಕ್ರಮಗಳು ಕಂಡು ಬಂದಲ್ಲಿ ಸಿವಿಜಿಲ್ ಅಥವಾ ಫೋನ್ ಮೂಲಕ ಮಾಹಿತಿ ನೀಡಬಹುದು, ಮಾಹಿತಿ ನೀಡಿದವರ ಗುರುತನ್ನು ಗೌಪ್ಯವಾಗಿರಿಸಲಾಗುವುದು ಎಂದರು. ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ನಾಗರಾಜ. ಎಲ್ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಾಚಾರ್ಯ ಡಾ|ಎಸ್.ಪಿ.ಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು.ಮತದಾನದ ಮಹತ್ವ ಕುರಿತು ವಿದ್ಯಾರ್ಥಿನಿ ಶಾಂಭವಿ ತಡಗಣಿ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್.ನಾರಾಯಣ, ಪ್ರವೀಣ ಕಟ್ಟಿ, ಪಪಂ ಮುಖ್ಯಾಧಿಕಾರಿ ಕೋಡಿ ಭೀಮರಾಯ, ಸಹಾಯಕ ನಿರ್ದೇಶಕ ಗುಡಪ್ಪ ನಾಯ್ಕ, ಪ್ರಾಧ್ಯಾಪಕ ಎಂ.ಬಿ. ಬದನಿಕಾಯಿ, ತಾಪಂ ಸಿಬ್ಬಂದಿಯವರಾದ ಚಂದ್ರಯ್ಯ, ಮಲ್ಲಿಕಾರ್ಜುನ, ಚನ್ನಬಸಪ್ಪ ಸಿಂಗ್ರೆರ್, ಜಯಪ್ಪ ಕಾರಗಿ ಶಂಭು ಕಡ್ಲಿಕೊಪ್ಪ ನಂಜುಂಡೇಶ್ವರ ಎನ್., ಸತೀಶ್, ಬಸನಗೌಡ ,ರಾಘವೇಂದ್ರ ಪಾಟೀಲ ಸೇರಿದಂತೆ ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿದ್ದರು.