ಸಾರಾಂಶ
ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಅದರ ಕೋಟಾದಲ್ಲಿ ಉನ್ನತ ಶಿಕ್ಷಣಕ್ಕೆ ಸಹಕಾರಿಯಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಭಾಗವಹಿಸಿ ತಾಲೂಕಿನ ಕೀರ್ತಿ ಹೆಚ್ಚಿಸುವಂತೆ ಜಿಲ್ಲೆಯ ಸಹಾಯಕ ರಾಜ್ಯ ಸಂಘಟನಾ ಆಯುಕ್ತ ಡಿ.ಬಿ. ಹೇಳಿದರು.
ಕನ್ನಡಪ್ರಭ ವಾರ್ತೆ ಕಾಗವಾಡ
ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಅದರ ಕೋಟಾದಲ್ಲಿ ಉನ್ನತ ಶಿಕ್ಷಣಕ್ಕೆ ಸಹಕಾರಿಯಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಭಾಗವಹಿಸಿ ತಾಲೂಕಿನ ಕೀರ್ತಿ ಹೆಚ್ಚಿಸುವಂತೆ ಜಿಲ್ಲೆಯ ಸಹಾಯಕ ರಾಜ್ಯ ಸಂಘಟನಾ ಆಯುಕ್ತ ಡಿ.ಬಿ. ಹೇಳಿದರು.ಗುರುವಾರ ಪಟ್ಟಣದ ವಿದ್ಯಾಸಾಗರ ಶಿಕ್ಷಣ ಸಂಸ್ಥೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆಯ ಪೂರ್ವ ಸಿದ್ಧತಾ ಶಿಬಿರ, ಎರಡು ದಿನದ ತರಬೇತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಮಾತನಾಡಿದರು.
ಶಿಕ್ಷಣ ಸಂಯೋಜಕ ಎಸ್.ಆರ್. ಮಾಳಿ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬ ವ್ಯಕ್ತಿ ತಮ್ಮ ಜೀವನದಲ್ಲಿ ಶಿಸ್ತು, ಸಹನೆ, ಸೇವಾ ಮನೋಭಾವ ಮೈಗೂಡಿಸಿಕೊಂಡು, ಸಮಾಜಮುಖಿ ಕಾರ್ಯ ಮಾಡುವುದಕ್ಕೆ ಪ್ರೇರಣೆಯಾಗುತ್ತದೆ ಎಂದರು.ವಿದ್ಯಾಸಾಗರ ಸಂಸ್ಥೆಯ ಉಪಾಧ್ಯಕ್ಷ ವಿಜಯ ಕರೋಲೆ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಎಂ.ಕೆ. ಕಾಂಬಳೆ, ಪ್ರೌಢಶಾಲೆಯ ಮುಖ್ಯಶಿಕ್ಷಕ ಜೆ.ಎನ್. ಮಗದುಮ್ಮ, ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಜೆ.ಜೆ. ನೆಮನ್ನವರ, ನೇತಾಜಿ ತಳವಾರ, ಅರವಿಂದ ಮುಜಾವರ, ಅಜೀತ ಪಣದೆ, ರಾಜಾರಾಮ ಲಂಗೋಟೆ, ಕಾವೇರಿ ಪಾಟೀಲ, ಮುಮ್ತಾಜ್ ಮತವಲ್ಲಿ, ಅನೀತಾ ಚೌಗುಲೆ ಸೇರಿದಂತೆ ಇತರರು ಇದ್ದರು. ರಾಹುಲ್ ಕಟ್ಟಿ ನಿರೂಪಿಸಿದರು. ಜೆ.ಎನ್. ಮಗದುಮ್ಮ ವಂದಿಸಿದರು.