ಸಾರಾಂಶ
ಕನ್ನಡಪ್ರಭ ವಾರ್ತೆ ಹಲಗೂರು
ಶಾಲಾ ಕಾಲೇಜು ಹಂತದಲ್ಲಿ ನಡೆಯುವ ಕ್ರೀಡೆಗಳು, ಕಾರಂಜಿಗಳಲ್ಲಿ ವಿದ್ಯಾರ್ಥಿಗಳು ಮುಕ್ತ ಮನಸ್ಸಿನಿಂದ ಭಾಗವಹಿಸಿದರೆ ಮಾತ್ರ ತಮ್ಮಲ್ಲಿನ ಪ್ರತಿಭೆ ಹೊರತರಲು ಸಾಧ್ಯ ಎಂದು ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಂಶುಪಾಲ ಸೋಮಣ್ಣ ಹೇಳಿದರು.ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಕ್ಲಸ್ಟರ್ ಹಂತದ 2024-25ನೇ ಸಾಲಿನ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿ, ಪ್ರತಿಭಾ ಕಾರಂಜಿ ಎಲ್ಲಿದೆ ಎಂದರೆ ಪ್ರಾಥಮಿಕ ಶಾಲೆಯಲ್ಲಿದೆ. ಪ್ರತಿಯೊಬ್ಬರೂ ಭಾಗವಹಿಸಿ ನಿಮ್ಮಲ್ಲಿರುವ ಸೂಕ್ತ ಪ್ರತಿಭೆಯನ್ನು ಬೆಳಕಿಗೆ ತರಲು ಸಹಕರಿಸಬೇಕು ಎಂದರು.
ಪ್ರತಿಭೆ ಮತ್ತು ಕಲೆಯಲ್ಲಿ ಯಾರನ್ನು ಪಾಸು ಮಾಡಲು ಸಾಧ್ಯವಿಲ್ಲ. ವೇದಿಕೆಗಳನ್ನು ಕಲ್ಪಿಸಿದಾಗ ಉತ್ತಮ ಪ್ರದರ್ಶನ ನೀಡಿದರೆ ಮಾತ್ರ ಪ್ರತಿಭೆ ಹೊರ ತರಲು ಸಾಧ್ಯವಿದೆ. ಆದ್ದರಿಂದ ಶಾಲಾ ಕಾಲೇಜು ಹಂತದಲ್ಲಿ ನಡೆಯುವ ಕ್ರೀಡೆಗಳು, ಕಾರಂಜಿಗಳಲ್ಲಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.ಕರ್ನಾಟಕ ಪಬ್ಲಿಕ್ ಶಾಲೆ ಶಿಕ್ಷಕ ಎನ್.ಎಂ.ಪುಟ್ಟಸ್ವಾಮಿ ಮಾತನಾಡಿ, ಪಠ್ಯದ ಜೊತೆಗೆ ಪ್ರತಿಭಾ ಕಾರಂಜಿಯನ್ನು ಆಯೋಜಿಸಿ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಹೊರಹಾಕಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟಗಳಲ್ಲಿ ಶಿಕ್ಷಣದ ಜೊತೆಗೆ ವಿವಿಧ ಕಲೆಗಳನ್ನು ಪ್ರದರ್ಶನ ಮಾಡಲು ವೇದಿಕೆ ಒದಗಿಸಲಾಗಿದೆ ಎಂದರು.
ಮಕ್ಕಳು ಉತ್ಸಾಹದಿಂದ ಕುತೂಹಲದಿಂದ ಭಾಗವಹಿಸಿ ನಿಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರೆ, ತೀರ್ಪುಗಾರರು ಉತ್ತಮ ಪ್ರತಿಭೆಗಳನ್ನು ಆಯ್ಕೆ ಮಾಡಿ ಅವರನ್ನು ಮುಂದಿನ ಹಂತಕ್ಕೆ ಸಜ್ಜುಗೊಳಿಸಲಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಅನುರಾಧ, ಮುಖ್ಯ ಶಿಕ್ಷಕ ಕುಳ್ಳಯ್ಯ, ಶಂಕ್ರೇಗೌಡ, ಜಿ.ಎಸ್.ಕೃಷ್ಣ, ಪುಟ್ಟರಾಜು, ತಿಮ್ಮಯ್ಯ, ಗ್ರಾಪಂ ಸದಸ್ಯ ರವೀಶ, ಪ್ರಮೋದ್, ಸೇರಿದಂತೆ ಇತರರು ಇದ್ದರು. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾ ಕಾರಂಜಿ ಪ್ರೇರಕ ಶಕ್ತಿ: ವಿರೂಪಾಕ್ಷ
ದೇವಲಾಪುರ:ಮಕ್ಕಳಲ್ಲಿ ಅಡಕವಾಗಿರುವ ಪ್ರತಿಭೆ ಪ್ರದರ್ಶನದ ಜೊತೆಗೆ ವ್ಯಕ್ತಿತ್ವದ ಬೆಳವಣಿಗೆಗೆ ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ ಎಂದು ಬಿಆರ್‌ಪಿ ವಿರೂಪಾಕ್ಷ ತಿಳಿಸಿದರು.ಹೋಬಳಿಯ ದೇವರಮಲ್ಲನಾಯಕನಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಸಮಗ್ರವಾದ ವ್ಯಕ್ತಿತ್ವ ವಿಕಸನಕ್ಕೆ ವರದಾನವಾಗಲಿರುವ ಹಾಗೂ ಸಾಮಾನ್ಯ ಜ್ಞಾನದ ಬಗ್ಗೆ ಅರಿವು ಮೂಡಿಸುವ ಜೊತೆಯಲ್ಲಿ ಪಠ್ಯ ಮತ್ತು ಸಾಂಸ್ಕೃತಿಕ ಹೆಜ್ಜೆ ಗುರುತಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದರು.ಕಾರ್ಯಕ್ರಮದಲ್ಲಿ ಗ್ರಾಪಂ ಉಪಾಧ್ಯಕ್ಷ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಸಿಆರ್‌ಪಿಗಳಾದ ಸುರೇಶ್, ಶಿವಸ್ವಾಮಿ, ಬಾಲಗಂಗಾಧರ ಗೌಡ, ಕ್ಲಸ್ಟರ್ ಮಟ್ಟದ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.
ಗ್ರಾಪಂ ಸದಸ್ಯರು, ಎಸ್ ಡಿಎಂಸಿ ಸದಸ್ಯರು ಹಾಗೂ ಮಾದಹಳ್ಳಿ ಬ್ರಿಗೇಡ್ ಟ್ರಸ್ಟ್‌ನ ಪದಾಧಿಕಾರಿಗಳು ಹಾಜರಿದ್ದರು. ಶಿಕ್ಷಣ ಸಂಯೋಜಕ ಉಗ್ರೆಗೌಡ ಸ್ವಾಗತಿಸಿ, ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಅಂದಾನಿ ಗೌಡರು ವಂದಿಸಿದರು.