ಸಾರಾಂಶ
ಇಡೀ ಜಿಲ್ಲೆಯಲ್ಲಿ ಇರುವ ಏಕೈಕ ವಸತಿ ಶಾಲೆ ಇದಾಗಿದ್ದು, ಬಡವರ ನಿರ್ಗತಿಕರು, ಮತ್ತು ಅನಾಥ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮುಚ್ಚುವ ಹಂತದಲ್ಲಿದ್ದ ಈ ವಸತಿ ಶಾಲೆಯಲ್ಲಿ ಇಂದು 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆಂದರೆ ಇಲ್ಲಿನ ಶಾಲಾ ಶಿಕ್ಷಕರ ಕಾರ್ಯವೈಖರಿ ಹೇಗಿದೆ ಎಂದು ತಿಳಿಯುತ್ತದೆ.
ಕನ್ನಡಪ್ರಭ ವಾರ್ತೆ ಗೌರಿಬಿದನೂರು
ಸರ್ಕಾರಿ ಶಾಲೆಗಳು ಸದೃಢವಾಗಿ ಸಮಾಜಕ್ಕೆ ಮಾದರಿಯಾಗಿ ಬೆಳೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಉಳಿವಿಗೆ ಖಾಸಗಿ ಸಹಭಾಗಿತ್ವ ಅಗತ್ಯಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದ ರೆಡ್ಡಿ ಹೇಳಿದರು.
ನಗರದ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಈ ಬಗ್ಗೆ ಪೋಷಕರು ಗಮನ ಹರಿಸಬೇಕೆಂದರು.ಜಿಲ್ಲೆಯ ಏಕೈಕ ವಸತಿ ಶಾಲೆ
ಇಡೀ ಜಿಲ್ಲೆಯಲ್ಲಿ ಇರುವ ಏಕೈಕ ವಸತಿ ಶಾಲೆ ಇದಾಗಿದ್ದು, ಬಡವರ ನಿರ್ಗತಿಕರು, ಮತ್ತು ಅನಾಥ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮುಚ್ಚುವ ಹಂತದಲ್ಲಿದ್ದ ಈ ವಸತಿ ಶಾಲೆಯಲ್ಲಿ ಇಂದು 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆಂದರೆ ಇಲ್ಲಿನ ಶಾಲಾ ಶಿಕ್ಷಕರ ಕಾರ್ಯವೈಖರಿ ಹೇಗಿದೆ ಎಂದು ತಿಳಿಯುತ್ತದೆ. ಇಲ್ಲಿನ ನುರಿತ ಶಿಕ್ಷಕರು, ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್ ಕ್ಲಾಸ್ ಸೇರಿದಂತೆ ಅನೇಕ ಅತ್ಯುನ್ನತ ಸೌಲಭ್ಯಗಳನ್ನು ಕಲ್ಪಿಸಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ತಿಳಿಸಿದರು.ಗುಣಮಟ್ಟದ ಶಿಕ್ಷಣ:
ಗುಡಿಬಂಡೆ ಸಹಾಯಕ ನಿರ್ದೇಶಕ ಲಕ್ಷ್ಮೀಪತಿ ರೆಡ್ಡಿ ಮಾತನಾಡಿ, ನಗರದ ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ, ಉತ್ತಮ ಹಾಗೂ ಅತ್ಯಾಧುನಿಕ ಸೌಲಭ್ಯಳನ್ನು ಕಲ್ಪಿಸಿರುವುದರಿಂದ, ರಾಜ್ಯದ ವಿವಿಧ ಭಾಗಗಳಿಂದ ಅನೇಕ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವುದು ಇಲ್ಲಿ ನೀಡುತ್ತಿರುವ ಶಿಕ್ಷಣದ ಗುಣಮಟ್ಟವನ್ನು ತಿಳಿಸುತ್ತದೆ. ಇಲ್ಲಿನ ಶಿಕ್ಷಕರು ಶಾಲಾ ಶಿಕ್ಷಕರ ಶ್ರಮ ಶಾಲೆಯ ಗೌರವವನ್ನು ಹೆಚ್ಚಾಗುವಂತೆ ಮಾಡಿದೆ ಮಾಡಿದೆ ಎಂದರು.ಇದೇ ಸಂದರ್ಭದಲ್ಲಿ,ವ್ಯವಸ್ಥಾಪಕ ಅಂಜಿನಪ್ಪ, ಶಿಕ್ಷಕರಾದ ಲಲಿತ, ಲೀಲಾವತಿ, ನರಸಿಂಹ ಮೂರ್ತಿ, ಮಂಜುಳಾ, ಸೇರಿದಂತೆ ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಪಾಲ್ಗೊಂಡಿದ್ದರು.