ಸಾರಾಂಶ
ಸೆ. 2ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಪ್ರಾರಂಭವಾಗಿರುವ ಬಿಜೆಪಿ ಸದಸ್ಯತ್ವ ಅಭಿಯಾನವು ದೇಶದೆಲ್ಲೆಡೆ ಅಭೂತಪೂರ್ವ ಬೆಂಬಲದೊಂದಿಗೆ ಸಂಚಲನ ಸೃಷ್ಟಿಸಿದೆ.
ಮನೆ ಮನೆಗೆ ತೆರಳಿ ಸದಸ್ಯತ್ವ ಅಭಿಯಾನ ನಡೆಸಿದ ಶಾಸಕ
ಕನ್ನಡಪ್ರಭ ವಾರ್ತೆ ಗಂಗಾವತಿಕ್ಷೇತ್ರದಲ್ಲಿ ಸದಸ್ಯತ್ವ ಅಭಿಯಾನ ಮಾಡುತ್ತಿರುವುದರಿಂದ ಪಕ್ಷ ಸಂಘಟನೆಯಾಗುತ್ತದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.ನಗರದ ವಾರ್ಡ್ ನಂ. 29ರ ನೀಲಕಂಠೇಶ್ವರ ಕ್ಯಾಂಪ್‌ನಲ್ಲಿ ಮನೆ ಮನೆಗೆ ತೆರಳಿ ಅಭಿಯಾನ ನಡೆಸಿ ಮಾತನಾಡಿದರು.ಸೆ. 2ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಪ್ರಾರಂಭವಾಗಿರುವ ಬಿಜೆಪಿ ಸದಸ್ಯತ್ವ ಅಭಿಯಾನವು ದೇಶದೆಲ್ಲೆಡೆ ಅಭೂತಪೂರ್ವ ಬೆಂಬಲದೊಂದಿಗೆ ಸಂಚಲನ ಸೃಷ್ಟಿಸಿದೆ. ಈವರೆಗೂ 8 ಕೋಟಿಗೂ ಅಧಿಕ ಬಿಜೆಪಿ ಸದಸ್ಯರಾಗಿ ದೇಶದ ಅಭಿವೃದ್ಧಿ ಪಯಣಕ್ಕೆ ಜೊತೆಯಾಗಿದ್ದಾರೆ. ಈ ಮೂಲಕ ವಿಶ್ವದಲ್ಲಿಯೇ ಬಲಿಷ್ಠ ಪಕ್ಷ ಎಂಬ ಹೆಗ್ಗಳಿಕೆಗೆ ಬಿಜೆಪಿ ಪಾತ್ರವಾಗಿದೆ ಎಂದರು.ಮಾಜಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಕೇಂದ್ರದ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿವೆ. ಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದರು.
ಮಾಜಿ ಸಂಸದ ಶಿವರಾಮಗೌಡರು, ಮಾಜಿ ಜಿಲ್ಲಾಧ್ಯಕ್ಷ ಸಿಂಗನಾಳ ವಿರುಪಾಕ್ಷಪ್ಪ, ಜಿಲ್ಲಾಧ್ಯಕ್ಷ ನವೀನ ಗುಳಗಣ್ಣವರ್, ನಗರಸಭೆ ಸದಸ್ಯರಾದ ವೆಂಕಟರಮಣ, ನವೀನ ಮಾಲಿಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಅರಿಕೇರಿ, ನಗರ ಮಂಡಲ ಅಧ್ಯಕ್ಷ ಕಾಶಿನಾಥ ಚಿತ್ರಗಾರ, ಪ್ರಮುಖರಾದ ಮನೋಹರ ಗೌಡ, ವೀರೇಶ ಬಲಕುಂದಿ, ರಮೇಶ ಹೊಸಮಲಿ, ಸಂಗಯ್ಯ ಸ್ವಾಮಿ, ಶ್ರೀನಿವಾಸ ಧೂಳಾ, ಶಾಮಮೂರ್ತಿ ಸಿರವಾರ, ಪ್ರಭಾಕರ ಗೋಟೂರು ಇತರರಿದ್ದರು.ತಾಳ ಕನಕಪುರ ಗ್ರಾಮದಲ್ಲಿ ಅಭಿಯಾನ:
ಗಂಗಾವತಿ ವಿಧಾನಸಭಾ ಕ್ಷೇತ್ರದ ವಾಪ್ತಿಯ ಇರಕಲ್ ಗಡ ಮಹಾಶಕ್ತಿ ಕೇಂದ್ರದ ತಾಳ ಕನಕಪುರ ಗ್ರಾಮದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಜರುಗಿತು.ಮಾಜಿ ಶಾಸಕ ಪರಣ್ಣ ಮುನವಳ್ಳಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಪ್ರಸ್ತುತ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ದಲಿತ, ಕೃಷಿಕರಿಗೆ, ಮಹಿಳೆಯರಿಗೆ ವಿವಿಧ ಯೋಜನೆ ನೀಡಿದೆ ಎಂದರು. ಈ ವೇಳೆ ಪಕ್ಷದ ಗ್ರಾಮೀಣ ಘಟಕದ ಅಧ್ಯಕ್ಷ ಚೆನ್ನಪ್ಪ ಮಳಗಿ, ಪ್ರಧಾನ ಕಾರ್ಯದರ್ಶಿ ವಿರುಪಾಕ್ಷಿ ಧನಕನ ದೊಡ್ಡಿ, ಪ್ರಶಾಂತ್ ಕುಲಕರ್ಣಿ, ಮುಖಂಡರಾದ ವೀರಬಸಪ್ಪ ಶೆಟ್ಟರ್, ಸಂಗಮೇಶ್ ಬಾದವಾಡಗಿ, ಯಮನೂರಪ್ಪ ಗದಿಗೆರಿ, ಬಸವರಾಜ್ ಪಿನ್ನಿ, ರಾಜೇಶ್, ಸಂಗಯ್ಯ ಸ್ವಾಮಿ, ಶ್ರೀನಿವಾಸ್ ದೂಳ ಇತರರಿದ್ದರು.