ಇಲ್ಲಿಯ ಜನರಲ್ಲಿ ಯಾವುದೇ ಬೇಧಭಾವವಿಲ್ಲ. ಪದವೀಧರ ಕ್ಷೇತ್ರ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರಿಗೆ ಅತ್ಯಂತ ಹೆಚ್ಚಿನ ಮತ ಕೊಡಿಸುವ ಮೂಲಕ ಗೆಲ್ಲಿಸಬೇಕಿದೆ.
ಮುಂಡಗೋಡ: ಕಾರ್ಯಕರ್ತರ ಬಲದಿಂದ ಮಾತ್ರ ಪಕ್ಷ ಸಂಘಟನೆ ಸಾಧ್ಯ. ಹೀಗಾಗಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಕಾರ್ಯಕರ್ತರ ಮೂಲಕ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಹೊಸ ಅಧ್ಯಾಯವನ್ನು ಕಾಂಗ್ರೆಸ್ ಆರಂಭಿಸಿದೆ ಎಂದು ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ ಹೇಳಿದರು.
ಶುಕ್ರವಾರ ಇಲ್ಲಿಯ ಮಹಾಗಣಪತಿ ದೇವಾಲಯ ಸಭಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಹಾಗೂ ಸಂಘಟನ್ ಸೃಜನ- ೨ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಇಲ್ಲಿಯ ಜನರಲ್ಲಿ ಯಾವುದೇ ಬೇಧಭಾವವಿಲ್ಲ. ಪದವೀಧರ ಕ್ಷೇತ್ರ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರಿಗೆ ಅತ್ಯಂತ ಹೆಚ್ಚಿನ ಮತ ಕೊಡಿಸುವ ಮೂಲಕ ಗೆಲ್ಲಿಸಬೇಕಿದೆ. ಅಲ್ಲದೇ, ತಾಪಂ ಹಾಗೂ ಜಿಪಂ ಚುನಾವಣೆಗೆ ಮೀಸಲಾತಿ ಕೂಡ ಪ್ರಕಟವಾಗಿದ್ದು, ದಿನಾಂಕ ನಿಗದಿಯಾಗುವುದೊಂದೇ ಬಾಕಿ ಇದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಹೊಣೆಗಾರಿಕೆ ಸ್ಥಳಿಯ ಮುಖಂಡರು ಹಾಗೂ ಕಾರ್ಯಕರ್ತರ ಮೇಲಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ಮಾತನಾಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅವಧಿಯನ್ನು ೫ ವರ್ಷಕ್ಕೆ ವಿಸ್ತರಿಸಿರುವುದರಿಂದ ತಾವು ಕೂಡ ೫ ವರ್ಷಗಳ ಅವಧಿಯಲ್ಲಿ ಪಕ್ಷ ಸಂಘಟನೆ ಮಾಡುವ ಉತ್ಸುಕತೆ ಹೊಂದಿದ್ದು, ಕಾರ್ಯಕರ್ತರ ಸಹಮತವಿದ್ದರೆ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದರು.ವೀಕ್ಷಕರಾದ ಡಾ. ರಾಘವೇಂದ್ರ ಹಾಗೂ ವಿಜಯ ಡಿಸೋಜ ಕಾರ್ಯಕರ್ತರಿಂದ ಮನವಿ ಹಾಗೂ ಅಭಿಪ್ರಾಯ ಸ್ವೀಕರಿಸಿದರು. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎನ್. ದುಂಡಸಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶಾರದಾ ರಾಥೋಡ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎಂ. ನಾಯ್ಕ, ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷ ರವಿಗೌಡ ಪಾಟೀಲ, ಸಾಮಾಜಿಕ ಜಾಲತಾಣ ವಿಭಾಗ ಅಧ್ಯಕ್ಷ ಧರ್ಮರಾಜ ನಡಗೇರ, ಜ್ಞಾನದೇವ ಗುಡಿಯಾಳ, ರಾಮಕೃಷ್ಣ ಮೂಲಿಮನಿ, ದೇವು ಪಾಟೀಲ, ಸಲ್ಮಾ ಶೇರಖಾನೆ, ರಾಜು ಕುಟ್ರಿ, ರಾಜು ಗುಬ್ಬಕ್ಕನವರ ಮುಂತಾದವರು ಉಪಸ್ಥಿತರಿದ್ದರು.