ಪಕ್ಷ ಸಂಘಟನೆಗೆ ಕಾರ್ಯಕರ್ತರ ಶ್ರಮ ಅಗತ್ಯ: ಬಸವರಾಜ ದಢೇಸೂಗುರು

| Published : Apr 15 2025, 12:46 AM IST

ಪಕ್ಷ ಸಂಘಟನೆಗೆ ಕಾರ್ಯಕರ್ತರ ಶ್ರಮ ಅಗತ್ಯ: ಬಸವರಾಜ ದಢೇಸೂಗುರು
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಕಾಲಘಟ್ಟದಲ್ಲಿ ಭಾರತ ಅಭಿವೃದ್ಧಿ ಹೊಂದಿ ವಿಶ್ವಗುರು ಆಗುವ ನಿಟ್ಟಿನಲ್ಲಿ ದೃಢ ಹೆಜ್ಜೆ ಇಡುತ್ತಿದೆ. ಅದೆಲ್ಲದಕ್ಕೂ ನಿಸ್ವಾರ್ಥ ಸೇವೆಗೈಯುತ್ತಿರುವ ಕಾರ್ಯಕರ್ತರ ಸಮರ್ಪಣಾ ಮನೋಭಾವವೇ ಕಾರಣ.

ಕೊಪ್ಪಳ:

ಪಕ್ಷ ಸಂಘಟನೆಗೆ ಕಾರ್ಯಕರ್ತರ ಶ್ರಮ ಅಗತ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸೂಗುರು ಹೇಳಿದರು.ಗಂಗಾವತಿ ಬಿಜೆಪಿ ಕಾರ್ಯಾಲಯದಲ್ಲಿ ನಗರ ಹಾಗೂ ಗ್ರಾಮೀಣ ಮಂಡಲದ ವತಿಯಿಂದ ಜರುಗಿದ ಸಕ್ರಿಯ ಸದಸ್ಯರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರ ಪಕ್ಷ. ಕಾರ್ಯಕರ್ತರೇ ಪಕ್ಷಕ್ಕೆ ಜೀವಾಳ. ಪ್ರತಿಯೊಬ್ಬರು ಸಕ್ರಿಯವಾಗಿ ಪಕ್ಷ ಸಂಘಟನೆಗೆ ಶ್ರಮಿಸಬೇಕು ಎಂದರು.

ಮಾಜಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಪಕ್ಷದ ಕಾರ್ಯಗಳನ್ನು ಪ್ರತಿಯೊಬ್ಬರು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪಕ್ಷದ ಬೆನ್ನೆಲುಬು ಕಾರ್ಯಕರ್ತರಾಗಿದ್ದು, ಪಕ್ಷದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕೆಂದು ಕರೆ ನೀಡಿದರು.

ಮಾಜಿ ಸಂಸದ ಶಿವರಾಮಗೌಡ ಮಾತನಾಡಿ, ಬಿಜೆಪಿ ತನ್ನದೆ ಆದ ತತ್ವ, ಸಿದ್ಧಾಂತ ಹೊಂದಿದೆ. ಪಕ್ಷದಲ್ಲಿ ಪ್ರತಿಯೊಬ್ಬ ಕಾರ್ಯಕರ್ತರ ಕಾರ್ಯ ಗುರುತಿಸಿ ಅವರಿಗೆ ಸ್ಥಾನಮಾನ ನೀಡಲಾಗುತ್ತಿದೆ. ಕಾರ್ಯಕರ್ತರಿಗೆ ಸರ್ವ ಹಕ್ಕು ಇದೆ ಎಂದರು.

ನಿಕಟಪೂರ್ವ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣವರ ಮಾತನಾಡಿ, ಪಕ್ಷ ಬೆಳೆದು ಬಂದ ರೀತಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಕಾಲಘಟ್ಟದಲ್ಲಿ ಭಾರತ ಅಭಿವೃದ್ಧಿ ಹೊಂದಿ ವಿಶ್ವಗುರು ಆಗುವ ನಿಟ್ಟಿನಲ್ಲಿ ದೃಢ ಹೆಜ್ಜೆ ಇಡುತ್ತಿದೆ. ಅದೆಲ್ಲದಕ್ಕೂ ನಿಸ್ವಾರ್ಥ ಸೇವೆಗೈಯುತ್ತಿರುವ ಕಾರ್ಯಕರ್ತರ ಸಮರ್ಪಣಾ ಮನೋಭಾವವೇ ಕಾರಣ ಎಂದು ಹೇಳಿದರು.

ನಗರ ಮಂಡಲ ಅಧ್ಯಕ್ಷ ಕಾಶಿನಾಥ ಚಿತ್ರಗಾರ, ಗ್ರಾಮೀಣ ಮಂಡಲ ಅಧ್ಯಕ್ಷ ಚನ್ನಪ್ಪ ಮಳಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಅರಿಕೇರಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರು ಹಾಗೂ ಸಕ್ರಿಯ ಸದಸ್ಯತ್ವ ಅಭಿಯಾನದ ಸಂಚಾಲಕ ಅಶೋಕ ಕಲತಾವರಗೇರಿ, ನಗರಸಭೆ ಉಪಾಧ್ಯಕ್ಷೆ ಪಾರ್ವತಮ್ಮ ದೊಡ್ಡಮನಿ ಹಾಗೂ ಕಾರ್ಯಕರ್ತರಿದ್ದರು.