ಸಾರಾಂಶ
ತರೀಕೆರೆಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಕನ್ನಡಪ್ರಭ ವಾರ್ತೆ, ತರೀಕೆರೆಲೋಕಸಭಾ ಚುನಾವಣೆ ಸೋಲಿನಿಂದ ಕಾರ್ಯಕರ್ತರು ಧೃತಿಗೆಡ ಬೇಕಾಗಿಲ್ಲ, ಪಕ್ಷದ ಸಂಘಟನೆಯನ್ನು ಬೂತ್ ಮಟ್ಟದಲ್ಲಿ ಪರಿಣಾಮಕಾರಿ ಯಾಗಿ ಮಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ಹೇಳಿದ್ದಾರೆ.ತರೀಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪಟ್ಟಣದ ಅರಣನೆ ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಭ್ರಷ್ಟ ಬಿಜೆಪಿಯಿಂದ ಸುಳ್ಳು ಪ್ರಚಾರ ಮಾಡಿ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿದೆ. ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಕ್ಷ ಬಲಿಷ್ಠವಾಗಲಿದೆ ಎಂದು ತಿಳಿಸಿದರು.
ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ ಮುಂದಿನ ದಿನಗಳಲ್ಲಿ ಬ್ಲಾಕ್ ಅಧ್ಯಕ್ಷರು, ಹೋಬಳಿ ಅಧ್ಯಕ್ಷರ ಮುಖಾಂತರ, ಪಂಚಾಯತ್ ಮಟ್ಟದಲ್ಲಿ ಸಭೆ ನಡೆಸಿ ಪಕ್ಷದ ಸಂಘಟನೆ ಮಾಡುತ್ತೇವೆ ಎಂದು ಹೇಳಿದರು.ಕೆಪಿಸಿಸಿ ಸದಸ್ಯರು ಎಚ್.ವಿಶ್ವನಾಥ್ ನಗರ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ, ಪಕ್ಷದ ಮುಖಂಡರಾದ ಟಿ.ಎಸ್.ಧರ್ಮರಾಜ್, ಬೈಟು ರಮೇಶ್, ಅಣ್ಣಯ್ಯ, ಜಗದೀಶ್, ದರ್ಶನ್, ರವಿಕಿಶೋರ್, ಮಿರ್ಜಾ ಇಸ್ಮಾಯಿಲ್ ಅಬೂಬಕರ್, ರಮೇಶ್, ಎಲ್.ಟಿ.ಹೇಮಣ್ಣ ತರೀಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಯು.ಫಾರೂಕ್ ಪಕ್ಷದ ಸಂಘಟನೆ ಬಲ ಪಡಿಸುವ ಬಗ್ಗೆ ಮಾತನಾಡಿದರು.ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಕಾಡಾ ನೂತನ ಅಧ್ಯಕ್ಷ, ಡಾ.ಆಂಶು ಮಂತ್ ಅವರನ್ನು ಸನ್ಮಾನಿಸಲಾಯಿತು. ಮುಖಂಡರಾದ ಸಮೀವುಲ್ಲಾ ಷರೀಫ್, ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎನ್.ಮಂಜುನಾಥ್ ಲಾಡ್, ಸಂತೋಷ್, ಮಹಿಳಾ ಅಧ್ಯಕ್ಷೆ ಭಾಗ್ಯಲಕ್ಷ್ಮಿ, ಹೇಮಲತಾ, ಪುರಸಭಾ ಸದಸ್ಯರು, ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಯಾನಂದ, ಪ್ರಚಾರ ಸಮಿತಿ ಅಧ್ಯಕ್ಷ ಪರಶುರಾಮ, ಜಿಲ್ಲಾ ಕೆಡಿಪಿ ಸದಸ್ಯ ಎ.ಜಿ.ಸಿರಾಜ್, ಪಕ್ಷದ ವಿವಿಧ ಘಟಕ ಗಳ ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.8ಕೆಟಿಆರ್.ಕೆ.6ಃ ತರೀಕೆರೆಯಲ್ಲಿ ಏರ್ಪಡಿಸಿದ್ದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟನೆಯನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್, ಶಾಸಕ ಜಿ.ಎಚ್.ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಯು.ಫಾರೂಕ್ ನೆರವೇರಿಸಿದರು. ನಗರ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ಮತ್ತಿತರರು ಇದ್ದಾರೆ.