ರಾಮನಗರ: ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಎ.ಪಿ. ರಂಗನಾಥ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಮನಗರದ ಐಜೂರು ವೃತ್ತದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು

ರಾಮನಗರ: ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಎ.ಪಿ. ರಂಗನಾಥ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಮನಗರದ ಐಜೂರು ವೃತ್ತದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.

ಚುನಾವಣೆಯಲ್ಲಿ ರಂಗನಾಥ್ 10,810 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದರೆ, ಪುಟ್ಟಣ್ಣ 9,902 ಮತಗಳನ್ನು ಗಳಿಸಿದರು. ಈ ಮೂಲಕ ರಂಗನಾಥ್ 908 ಮತಗಳ ಅಂತರದ ಮುನ್ನಡೆ ಸಾಧಿಸಿದರು. ಈ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆ ಐಜೂರು ವೃತ್ತದಲ್ಲಿ ಜಮಾಯಿಸಿದ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಸಂಭ್ರಮ ಆಚರಿಸಿದರು.

ಕಾರ್ಯಕರ್ತರ ವಿಜಯೋತ್ಸವ:

ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ, ಮುಂದಿನ ವಿಧಾನಸಭೆ ಚುನಾವಣೆಗೆ ಈ ಗೆಲುವು ದಿಕ್ಸೂಚಿ ಎಂದು ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.

ಜೆಡಿಎಸ್ ತಾಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಯ್ಯ ಮಾತನಾಡಿ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಈ ಗೆಲುವು 2028ರ ಚುನಾವಣೆಗೆ ದಿಕ್ಸೂಚಿಯಾಗಿದೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗೆ ಪ್ರಬುದ್ಧ ಶಿಕ್ಷಕ ಮತದಾರರು ಆಶೀರ್ವಾದ ಮಾಡಿದ್ದಾರೆ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇರುವುದಕ್ಕೆ ಈ ಫಲಿತಾಂಶ ಸ್ಪಷ್ಟ ನಿದರ್ಶನ. ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಒಗ್ಗಟ್ಟಿನಿಂದ ಶ್ರಮಿಸಿದ್ದರಿಂದ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಸಹಕಾರಿಯಾಗಿದೆ ಎಂದು ತಿಳಿಸಿದರು.

ವಿಜಯೋತ್ಸವದಲ್ಲಿ ನಗರಸಭೆ ಸದಸ್ಯ ಮಂಜುನಾಥ್, ಮಾಜಿ ಸದಸ್ಯ ಬಾಲಗೇರಿ ರವಿ, ಎನ್‌ಡಿಎ ಮುಖಂಡರಾದ ಆರ್.ವಿ.ಸುರೇಶ್, ರಾಮಕೃಷ್ಣಯ್ಯ, ರುದ್ರದೇವರು, ಜಿ.ಟಿ. ಕೃಷ್ಣೇಗೌಡ, ಬಸವನಪುರ ಪ್ರಕಾಶ್, ಅಂಜನಾಪುರ ವಾಸು, ಕೊತ್ತಿಪುರ ಗೋವಿಂದರಾಜು, ಬೋರೇಗೌಡ, ಸಂಜಯ್, ಭಾಸ್ಕರ್, ಗೌರಮ್ಮ, ಪೂರ್ಣಿಮಾ, ಜಯಮ್ಮ, ಆಡಿಟರ್ ಕುಮಾರ್, ಜಯಕುಮಾರ್, ಪ್ರಕಾಶ್, ಸಂಜಯ್‌ ಜೈನ್, ಪ್ರಶಾಂತ್, ಸಂತೋಷ್, ಸಿದ್ದಲಿಂಗಮೂರ್ತಿ, ರವಿ, ವರುಣ್, ಪಾದರಹಳ್ಳಿ ಚಂದ್ರಶೇಖರ್, ಪ್ರವೀಣ್ ಪಾಲ್ಗೊಂಡಿದ್ದರು.

27ಕೆಆರ್ ಎಂಎನ್ 5.ಜೆಪಿಜಿ

ರಾಮನಗರದ ಐಜೂರು ವೃತ್ತದಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.