ಕ್ಷೇತ್ರದೆಲ್ಲೆಡೆ ಪ್ರವಾಸ ಮಾಡಿದ್ದು, ಪದವೀಧರರು ತಮ್ಮ ಆಯ್ಕೆಗೆ ಉತ್ಸುಕತೆ ತೋರಿದ್ದಾರೆ. ಜತೆಗೆ ಪಶ್ಚಿಮ ಪದವೀಧರ ಕ್ಷೇತ್ರದ ಕಳೆದ ಚುನಾವಣೆಯಲ್ಲಿ ತಮಗಾಗಿರುವ ಅನ್ಯಾಯವನ್ನು ಸರಿಪಡಿಸುವ ಮೂಲಕ ನ್ಯಾಯ ಒದಗಿಸಿಕೊಡಬೇಕು.

ಅಣ್ಣಿಗೇರಿ:

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅನುವು ಮಾಡಿಕೊಡುಬೇಕೆಂದು ಸಿನೆಟ್ ಮಾಜಿ ಸದಸ್ಯ ಶಿವಶಂಕರ ಕಲ್ಲೂರ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿಗೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರಿನ ಜೆ.ಪಿ. ಭವನದಲ್ಲಿ ಜರುಗಿದ ರಾಜ್ಯಮಟ್ಟದ ಪಕ್ಷದ ಸಭೆಯಲ್ಲಿ ತಮ್ಮ ಮನವಿ ನೀಡಿದ್ದಾರೆ. ತಾವು ಈಗಾಗಲೇ ಕ್ಷೇತ್ರದೆಲ್ಲೆಡೆ ಪ್ರವಾಸ ಮಾಡಿದ್ದು, ಪದವೀಧರರು ತಮ್ಮ ಆಯ್ಕೆಗೆ ಉತ್ಸುಕತೆ ತೋರಿದ್ದಾರೆ. ಜತೆಗೆ ಪಶ್ಚಿಮ ಪದವೀಧರ ಕ್ಷೇತ್ರದ ಕಳೆದ ಚುನಾವಣೆಯಲ್ಲಿ ತಮಗಾಗಿರುವ ಅನ್ಯಾಯವನ್ನು ಸರಿಪಡಿಸುವ ಮೂಲಕ ನ್ಯಾಯ ಒದಗಿಸಿಕೊಡುಬೇಕೆಂದು ವಿನಂತಿಸಿದ್ದಾರೆ.

ಈ ವೇಳೆ ಮಾಜಿ ಸಚಿವ ಆಲ್ಕೋಡ ಹನುಮಂತಪ್ಪ, ಕೆ.ಎನ್. ಗಡ್ಡಿ, ಮಾಜಿ ಶಾಸಕ ವೀರಭದ್ರಪ್ಪ ಹಾಲರವಿ, ಜೆಡಿಎಸ್ ಧಾರವಾಡ ಗ್ರಾಮಾಂತರ ಘಟಕದ ಜಿಲ್ಲಾಧ್ಯಕ್ಷ ಬಿ.ಬಿ. ಗಂಗಾಧರಮಠ, ಮಹಾನಗರ ಅಧ್ಯಕ್ಷ ಗುರುರಾಜ ಹುಣಸಿಮರದ, ಹಾವೇರಿ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣವರ, ಗದಗ ಜಿಲ್ಲಾಧ್ಯಕ್ಷ ಮಕ್ತುಮಸಾಬ ಮುಧೋಳ, ಮುಖಂಡರಾದ ಜಿ.ಎನ್. ತೋಟದ, ಪ್ರಕಾಶ ಅಂಗಡಿ, ವೀರೇಶ ಶಾನುಭೋಗರ, ಫಕ್ಕೀರಗೌಡ ದೊಡ್ಡಮನಿ ಮತ್ತಿತರರು ಹಾಜರಿದ್ದರು.