ಸಾರಾಂಶ
4 ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನ 2,472 ವಿದ್ಯಾರ್ಥಿಗಳು ಹಾಜರು ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಕರ್ನಾಟಕ ಪರೀಕ್ಷಾ ಮಂಡಳಿ ಪಿಯು ವಿಭಾಗ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮಾ. 1 ರಿಂದ ಆರಂಭಿಸಿದ್ದು ತಾಲೂಕಿನಾದ್ಯಂತ ಒಟ್ಟು 4 ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷೆ ಪರೀಕ್ಷೆ ಯಾವುದೇ ಅಡೆತಡೆ ಇಲ್ಲದೆ ಯಶಸ್ವಿಯಾಗಿ ನಡೆದವು.ತಾಲೂಕಿನ 4 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದು, ಒಟ್ಟು 2,555 ವಿದ್ಯಾರ್ಥಿಗಳಲ್ಲಿ 2,472 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 83 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಜಿಲ್ಲಾ ಪಿಯು ಡಿಡಿ ಪುಟ್ಟಸ್ವಾಮಿ ಮಾಹಿತಿ ನೀಡಿ, ಚಳ್ಳಕೆರೆ ತಾಲೂಕಿನ 4 ಪರೀಕ್ಷಾ ಕೇಂದ್ರಗಳಿಗೆ ಆಯಾ ಕಾಲೇಜಿನ ಪ್ರಾಂಶುಪಾಲರೇ ಪರೀಕ್ಷಾ ಮೇಲ್ವಿಚಾರಾಗಿ ಕಾರ್ಯನಿರ್ವಹಿಸಿದ್ದು, ಈ ಬಾರಿ ಜಿಲ್ಲೆಯ ಎಲ್ಲೆಡೆ ಪರೀಕ್ಷಾ ಕೇಂದ್ರಗಳಲ್ಲಿ ನಿರೀಕ್ಷೆಗೂ ಮೀರಿ ಹೆಚ್ಚಿನ ಗಮನಹರಿಸಲಾಗಿತ್ತು. ಪರೀಕ್ಷಾ ಕೇಂದ್ರದ ಪ್ರತಿಯೊಂದು ಕೊಠಡಿ ಹಾಗೂ ಹೊರ ಭಾಗದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿದ ಹಿನ್ನೆಲೆ ಯಾವುದೇ ರೀತಿಯ ನಕಲು ಮಾಡಲು ಅನಗತ್ಯ ವ್ಯಕ್ತಿಗಳು ಪರೀಕ್ಷೆ ಕೇಂದ್ರಕ್ಕೆ ಪ್ರವೇಶಿಸಲು ನಿರ್ಬಂಧ ಹೇರಲಾಗಿತ್ತು. ಪಿಯು ಮಂಡಳಿಯ ನಿಯಮ ಮೀರಿ ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಿದರೆ ಅಂತಹವರ ವಿರುದ್ಧವೂ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿತ್ತು.ಚಳ್ಳಕೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಕೇಂದ್ರದಲ್ಲಿ 1,167 ವಿದ್ಯಾರ್ಥಿಗಳು ಪರೀಕ್ಷೆಗೆ ಆರ್ಹರಿದ್ದು, 1147 ವಿದ್ಯಾರ್ಥಿಗಳು ಹಾಜರಾಗಿ, 20 ವಿದ್ಯಾರ್ಥಿಗಳು ಗೈರಾಗಿದ್ದರು. ಪರಶುರಾಮಪುರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 270 ವಿದ್ಯಾರ್ಥಿಗಳು ಪರೀಕ್ಷೆಗೆ ಆರ್ಹರಿದ್ದು 263 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 7 ವಿದ್ಯಾರ್ಥಿಗಳು ಗೈರಾಗಿದ್ದರು. ಚಳ್ಳಕೆರೆಯ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ 709 ವಿದ್ಯಾರ್ಥಿಗಳು ಆರ್ಹರಿದ್ದು, 682 ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿ 27 ವಿದ್ಯಾರ್ಥಿಗಳು ಗೈರಾಗಿ, ಎಸ್‌ಆರ್‌ಎಸ್ ಕಾಲೇಜಿನಲ್ಲಿ 409 ವಿದ್ಯಾರ್ಥಿಗಳ ಪರೀಕ್ಷೆಗೆ ತೆಗೆದುಕೊಂಡಿದ್ದು, 380 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 29 ವಿದ್ಯಾರ್ಥಿಗಳು ಗೈರಾಗಿದ್ದರು. ತಾಲೂಕಿನಾದ್ಯಂತ 2,555 ವಿದ್ಯಾರ್ಥಿಗಳಲ್ಲಿ 2,473 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 83 ವಿದ್ಯಾರ್ಥಿಗಳು ಗೈರಾಗಿದ್ದರು.