ಸಾರಾಂಶ
ಕನ್ನಡಪ್ರಭವಾರ್ತೆ ನಾಗಮಂಗಲ
ಪಟ್ಟಣದಲ್ಲಿ ಭಾನುವಾರ ಸಂಜೆ ವಿಶ್ವಹಿಂದೂ ಪರಿಷತ್, ಬಜರಂಗಳ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರು ವಿಜಯದಶಮಿ ಪಥಸಂಚಲನ ನಡೆಸಿದರು.ಪಟ್ಟಣದ ಶ್ರ ಸೌಮ್ಯಕೇಶವಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸಮವಸ್ತ್ರದೊಂದಿಗೆ ಜಮಾವಣೆಗೊಂಡ ಹಿಂದೂ ಸಂಘಟನೆಗಳ 200ಕ್ಕೂ ಹೆಚ್ಚು ಕಾರ್ಯಕರ್ತರು ಭಾರತಾಂಬೆ ಮತ್ತು ಆರ್‌ಎಸ್‌ಎಸ್ ನಾಯಕರ ಭಾವಚಿತ್ರಗಳನ್ನು ಅಲಂಕರಿಸಿದ ತೆರೆದ ವಾಹನದಲ್ಲಿರಿಸಿ ಪೂಜೆ ಸಲ್ಲಿಸಿದ ಬಳಿಕ ಭುಜದ ಮೇಲೆ ಬೆತ್ತ ಹೊತ್ತು ಪಥಸಂಚನಕ್ಕೆ ಚಾಲನೆ ನೀಡಿದರು.
ದೇವಸ್ಥಾನ ಮುಂಭಾಗದ ಕೆಎಸ್‌ಟಿ ರಸ್ತೆ ಮೂಲಕ ಸಾಗಿದ ಪಥಸಂಚನ ಚಾಮರಾಜನಗರ ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ಹಳೇ ಚೆಕ್‌ಪೋಸ್ಟ್ ಬಳಿ ತಿರುವು ಪಡೆದು ಟಿ.ಮರಿಯಪ್ಪ ಸರ್ಕಲ್, ಮಂಡ್ಯ ಸರ್ಕಲ್ ಮಾರ್ಗವಾಗಿ ಕನ್ನಿಕಾಪರಮೇಶ್ವರಿ ದೇವಸ್ಥಾನದ ರಸ್ತೆ, ಜಾಮಿಯಾ ಮಸೀದಿ ರಸ್ತೆ, ಹುಲ್ಲೆಸೆಳೆ ಆಂಜನೇಯಸ್ವಾಮಿ ದೇವಸ್ಥಾನದ ರಸ್ತೆ ಸೇರಿದಂತೆ ಪಟ್ಟಣದ ಪ್ರಮುಖ ರಾಜ ಬೀದಿಗಳಲ್ಲಿ ಸಾಗಿಬಂದು ಪುನಃ ಸೌಮ್ಯಕೇಶವಸ್ವಾಮಿ ದೇವಸ್ಥಾನದ ಬಳಿ ಕೊನೆಗೊಂಡಿತು.ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್‌ಪಿ ಚಲುವರಾಜು ಮತ್ತು ಸಿಪಿಐ ನಿರಂಜನ್ ನೇತೃತ್ವದ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ಪಥಸಂಚನಕ್ಕೆ ಯಾವುದೇ ಅಡ್ಡಿಯಾಗದಂತೆ ಸೂಕ್ತ ಬಂದೋಬಸ್ತ್ ನೀಡಿದರು.
ಅ.30 ರಂದು ಎಂಎಸ್ಎಂಇ ಔಟ್ ರೀಚ್ ಕಾರ್ಯಕ್ರಮಮಂಡ್ಯ: ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು (RAMP) ಯೋಜನೆಯಡಿಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಸರ್ಕಾರ, ಎಂ.ಎಸ್.ಎಂ.ಇ ಸೌಲಭ್ಯ ಕಚೇರಿ-ಭಾರತ ಸರ್ಕಾರ, ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (ಸಿಡ್ಬಿ), ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ) ಮತ್ತು ಕಾಸಿಯಾ ಸಹಯೋಗದಲ್ಲಿ ಎಂ.ಎಸ್.ಎಂ.ಇ ಔಟ್ ರೀಚ್ ಕಾರ್ಯಕ್ರಮವನ್ನು ಅಕ್ಟೋಬರ್ 30 ರಂದು ಮದ್ಯಾಹ್ನ 3.00 ಗಂಟೆಗೆ ಮಂಡ್ಯ ವಿವಿ ನಗರದ ಹೋಟೆಲ್ ಸುರಭಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಮಂಡ್ಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಡಾ.ಕುಮಾರ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಡ್ಯ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸೀಫ್ ಅವರು ಆಗಮಿಸಲಿದ್ದಾರೆ. ಗೌರವಾನ್ವಿತ ಅತಿಥಿಗಳಾಗಿ ಮಂಡ್ಯ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ. ದಿನೇಶ್, ಮಂಡ್ಯ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ ಕೆ. ಪ್ರಭಾಕರ್, ಮೈಸೂರು ರಫ್ತು ಸೌಲಭ್ಯ ಕೇಂದ್ರದ ಉಪ ನಿರ್ದೇಶಕಿ ಎಲ್. ಮೇಫಲಾ ಅವರು ಆಗಮಿಸಲಿದ್ದಾರೆ. ಕಾಸಿಯಾ ಅಧ್ಯಕ್ಷ ಎಂ.ಜಿ.ರಾಜಗೋಪಾಲ್ ಅವರು ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಲಿದ್ದಾರೆ.