ಸಾರಾಂಶ
ಜಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಮಹಾ ಎಡವಟ್ಟು ಆಗಿದ್ದು, ಐಸಿಯು ನಲ್ಲಿದ್ದ ರೋಗಿಯ ಗ್ಲುಕೋಸ್ ಪೈಪ್ ಕಳಚಿ ತೀವ್ರ ರಕ್ತಸ್ರಾವ ಆಗಿರುವ ಘಟನೆ ನಡೆದಿದೆ. ನಂತರ ಚಿಕಿತ್ಸೆ ಫಲಿಸದೆ ರೋಗಿ ಸಾವನ್ನಪ್ಪಿದ್ದಾನೆ.
ಕಲಬುರಗಿ: ಜಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಮಹಾ ಎಡವಟ್ಟು ಆಗಿದ್ದು, ಐಸಿಯು ನಲ್ಲಿದ್ದ ರೋಗಿಯ ಗ್ಲುಕೋಸ್ ಪೈಪ್ ಕಳಚಿ ತೀವ್ರ ರಕ್ತಸ್ರಾವ ಆಗಿರುವ ಘಟನೆ ನಡೆದಿದೆ. ನಂತರ ಚಿಕಿತ್ಸೆ ಫಲಿಸದೆ ರೋಗಿ ಸಾವನ್ನಪ್ಪಿದ್ದಾನೆ.
ಜಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಕಲ್ಬುರ್ಗಿ ತಾಲೂಕಿನ ಮೇಳಕುಂದ ಗ್ರಾಮದ ನಿವಾಸಿ ಸಿದ್ದಣ್ಣ ಎಂಬುವವರು ಚಿಕಿತ್ಸೆ ಪಡೆಯುತ್ತಿದ್ದರು. ಸಿದ್ದಣ್ಣ ವಿಷ ಸೇವಿಸಿದ್ದರಿಂದ ಕಳೆದ ನಾಲ್ಕು ದಿನಗಳ ಹಿಂದೆ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ತಡರಾತ್ರಿ ರಕ್ತಸ್ರಾವ ಆಗಿದ್ದರಿಂದ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಉಂಟಾಗಿದೆ.
ಗುಣಮುಖವಾಗುತ್ತಿದ್ದ ವೇಳೆ ರಕ್ತಸ್ರಾವವಾಗಿ ರೋಗಿಯ ಸ್ಥಿತಿ ಗಂಭೀರವಾಗಿತ್ತು, ಚಿಕಿತ್ಸೆ ಫಲ ನೀಡದೆ ರೋಗಿ ಸಾವನ್ನಪ್ಪಿದ್ದಾನೆ. ಇಂದು ಬೆಳಿಗ್ಗೆ ಹೃದಯಾಘಾತ ಆಗಿದೆ ಎಂದು ವೈದ್ಯರು ಹೇಳಿದ್ದಾರೆ. ಕಲ್ಬುರ್ಗಿಯ ಜಿಮ್ಸ್ ವೈದ್ಯರಿಂದ ಬೇಜವಾಬ್ದಾರಿ ಉತ್ತರ ನೀಡಿದ್ದಾರೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.