ರೋಗಿಗಳೊಂದಿಗೆ ಪ್ರೀತಿ ಹಾಗೂ ವಿಶ್ವಾಸದಿಂದ ನಡೆದುಕೊಂಡು ಅವರಿಗೆ ಆತ್ಮಸ್ಥೈರ್ಯ ತುಂಬುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಹೇಳಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ವಿಜಯ್ ಮಾತನಾಡಿ, ತಾಲೂಕಿನಲ್ಲಿ ಪ್ರಸ್ತುತ 46 ಮಂದಿ ಕ್ಷಯರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಟರಿ ಕ್ಲಬ್ ವತಿಯಿಂದ ಪೌಷ್ಟಿಕ ಆಹಾರದ ಕಿಟ್ ನೀಡುತ್ತಿದ್ದು ಮುಂದಿನ ದಿನದಲ್ಲಿ ತಾಲೂಕಿನ ಎಲ್ಲಾ ಕ್ಷಯ ರೋಗಿಗಳಿಗೆ ನೀಡುವಂತೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಬೇಲೂರು

ಕ್ಷಯರೋಗಿಗಳಿಗೆ ಧೈರ್ಯ ಮತ್ತು ಆತ್ಮವಿಶ್ವಾಸ ತುಂಬುವ ಉದ್ದೇಶದಿಂದ ಪೌಷ್ಟಿಕ ಆಹಾರದ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಶಿವರಾಜು ಹೇಳಿದರು.ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಕ್ಷಯರೋಗಿಗಳಿಗೆ ಉಚಿತ ಪೌಷ್ಟಿಕ ಆಹಾರ ಕಿಟ್‌ಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕ್ಷಯರೋಗಿಗಳಿಗೆ ನೀಡುತ್ತಿರುವ ಪೌಷ್ಟಿಕ ಆಹಾರದ ಕಿಟ್ ಸಣ್ಣ ನೆರವಾಗಿದ್ದರೂ, ಅದರ ಹಿಂದೆ ಇರುವ ಕಾಳಜಿ ಮತ್ತು ಮಾನವೀಯತೆ ಬಹಳ ದೊಡ್ಡದು. ರೋಗಿಗಳೊಂದಿಗೆ ಪ್ರೀತಿ ಹಾಗೂ ವಿಶ್ವಾಸದಿಂದ ನಡೆದುಕೊಂಡು ಅವರಿಗೆ ಆತ್ಮಸ್ಥೈರ್ಯ ತುಂಬುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಹೇಳಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ವಿಜಯ್ ಮಾತನಾಡಿ, ತಾಲೂಕಿನಲ್ಲಿ ಪ್ರಸ್ತುತ 46 ಮಂದಿ ಕ್ಷಯರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಟರಿ ಕ್ಲಬ್ ವತಿಯಿಂದ ಪೌಷ್ಟಿಕ ಆಹಾರದ ಕಿಟ್ ನೀಡುತ್ತಿದ್ದು ಮುಂದಿನ ದಿನದಲ್ಲಿ ತಾಲೂಕಿನ ಎಲ್ಲಾ ಕ್ಷಯ ರೋಗಿಗಳಿಗೆ ನೀಡುವಂತೆ ಮನವಿ ಮಾಡಿದರು.ವೈದ್ಯಾಧಿಕಾರಿ ಡಾ. ಸತೀಶ್ ಮಾತನಾಡಿ, ಕ್ಷಯರೋಗಿಗಳನ್ನು ಗುರುತಿಸಿ ಅವರಿಗೆ ಪೌಷ್ಟಿಕ ಆಹಾರ ಒದಗಿಸುವ ಮೂಲಕ ರೋಟರಿ ಸಂಸ್ಥೆ ತೋರಿಸುತ್ತಿರುವ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ. ಕ್ಷಯರೋಗ ಪತ್ತೆಯಾದವರಿಗೆ ಸರ್ಕಾರದ ವತಿಯಿಂದ ಪರೀಕ್ಷೆ ಮತ್ತು ಚಿಕಿತ್ಸೆ ಸೇರಿದಂತೆ ಅಗತ್ಯ ಸೇವೆಗಳು ಉಚಿತವಾಗಿ ದೊರೆಯುತ್ತಿದ್ದು, ರೋಗಿಗಳು ನಿಯಮಿತವಾಗಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಬೇಕು. ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕ್ಷಯರೋಗಿಗಳನ್ನು ದತ್ತು ಪಡೆದು ಪೌಷ್ಟಿಕ ಆಹಾರ ಒದಗಿಸುವ ಮೂಲಕ ಸಹಕರಿಸಬೇಕು ಎಂದರು.