ಪಾಟೀಲ ಪುಟ್ಟಪ್ಪ ಕನ್ನಡ ನಾಡು ಕಂಡ ಧೀಮಂತ ಸಾಹಿತಿ, ಪತ್ರಕರ್ತರಾಗಿದ್ದರು ಎಂದು ತಾಲೂಕು ಕಸಾಪ ಅಧ್ಯಕ್ಷ ಪ್ರಭಾಕರ ಶಿಗ್ಲಿ ಹೇಳಿದರು.

ರಾಣಿಬೆನ್ನೂರು: ಪಾಟೀಲ ಪುಟ್ಟಪ್ಪ ಕನ್ನಡ ನಾಡು ಕಂಡ ಧೀಮಂತ ಸಾಹಿತಿ, ಪತ್ರಕರ್ತರಾಗಿದ್ದರು ಎಂದು ತಾಲೂಕು ಕಸಾಪ ಅಧ್ಯಕ್ಷ ಪ್ರಭಾಕರ ಶಿಗ್ಲಿ ಹೇಳಿದರು.

ನಗರದ ಮೆಡ್ಲೇರಿ ರಸ್ತೆ ತಾಲೂಕು ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಪಾಟೀಲ ಪುಟ್ಟಪ್ಪ ಜಯಂತಿಯಲ್ಲಿ ಮಾತನಾಡಿದರು.ವಿದ್ಯಾರ್ಥಿಯಾಗಿದ್ದಾಗಲೇ ‘ನಮ್ಮ ನಾಡು’ ಕೈ ಬರಹದ ಪತ್ರಿಕೆಯನ್ನು ಪ್ರಕಟಿಸುತ್ತಿದ್ದ ಅವರು ಪತ್ರಿಕೆಗಳಲ್ಲಿ ಅಂಕಣಕಾರರಾಗಿಯೂ ಗುರುತಿಸಿಕೊಂಡಿದ್ದರು. ಕರ್ನಾಟಕ ಏಕೀಕರಣ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಲ್ಲದೆ 1982ರ ಗೋಕಾಕ ಚಳವಳಿಯಲ್ಲಿ ನಾಯಕತ್ವ ವಹಿಸಿ ರಾಜ್ಯವ್ಯಾಪಿ ಹೋರಾಟ ಮಾಡಿದರು. ಕನ್ನಡ ಕಾವಲು ಹಾಗೂ ಗಡಿ ಸಲಹಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಸ್ಥಳೀಯ ಹಿರಿಯ ಸಾಹಿತಿ ದಿ. ನೀಲಕಂಠಪ್ಪ ಲಿಂಗಪ್ಪ ಶಿಗ್ಲಿ ಅವರ ಜನ್ಮದಿನ ಆಚರಿಸಲಾಯಿತು. ಜಗದೀಶ ಮಳಿಮಠ, ರವಿಕುಮಾರ ಪಾಟೀಲ, ಕೊಟ್ರೇಶಪ್ಪ ಯಮ್ಮಿ, ಚಂದ್ರಶೇಖರ ಮಡಿವಾಳರ, ಪರಶುರಾಮ ಸವಣೂರ, ಶ್ರದ್ಧಾ ಪಾಟೀಲ ಮತ್ತಿತರರಿದ್ದರು.