ಸಾರಾಂಶ
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆದ ಸಮಾರಂಭದಲ್ಲಿ ಪಟ್ಲ ಪೌಂಡೇಷನ್ ನ ಕಿನ್ನಿಗೋಳಿ ಘಟಕದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಫೌಂಡೇಶನ್ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಬಿಡುಗಡೆಗೊಳಿಸಿದರು.
ಕನ್ನಡಪ್ರಭ ವಾರ್ತೆ ಮೂಲ್ಕಿ
ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ನೂತನ ಕಿನ್ನಿಗೋಳಿ ಘಟಕ ಮೇ 9ರಂದು ಉದ್ಘಾಟನೆಗೊಳ್ಳಲಿದೆ.ಸಮಾರಂಭದಲ್ಲಿ ಸಾಧಕ ಕಲಾವಿದರಿಗೆ ಗೌರವಾರ್ಪಣೆ, ಅಶಕ್ತರಿಗೆ ವೈದ್ಯಕೀಯ ನೆರವು ಹಸ್ತಾಂತರ, ಸಾಧಕ ಸಮಾಜ ಸೇವಕರ ಸನ್ಮಾನ, ಯಕ್ಷಗಾನ ಗಾನ ವೈಭವ, ಯಕ್ಷಗಾನ ಪ್ರದರ್ಶನ ಕಾರ್ಯಕ್ರಮಗಳು ನಡೆಯಲಿದೆ ಎಂದು ಪಟ್ಲ ಫೌಂಡೇಶನ್ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದ್ದಾರೆ.
ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆದ ಪಟ್ಲ ಪೌಂಡೇಷನ್ ನ ಕಿನ್ನಿಗೋಳಿ ಘಟಕದ ಉದ್ಘಾಟನಾ ಸಮಾರಂಭದ ಅಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.ಶ್ರೀ ಕ್ಷೇತ್ರ ಬಪ್ಪನಾಡಿನ ಅರ್ಚಕ ಗೋಪಾಲಕೃಷ್ಣ ಉಪಾಧ್ಯಾಯ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು,
ಈ ಸಂದರ್ಭ ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಯಕ್ಷದ್ರುವ ಪಟ್ಲ ಫೌಂಡೇಶನ್ ಕಿನ್ನಿಗೋಳಿ ಘಟಕದ ನೂತನ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಕೋಶಾಧಿಕಾರಿ ಸ್ವರಾಜ್ ಶೆಟ್ಟಿ ಮುಂಡ್ಕೂರು ದೊಡ್ಡಮನೆ, ಸಂಚಾಲಕ ಪೃಥ್ವಿರಾಜ ಆಚಾರ್ಯ ಕಿನ್ನಿಗೋಳಿ, ಪುಷ್ಪರಾಜ ಚೌಟ, ಪ್ರಧಾನ ಕಾರ್ಯದರ್ಶಿ ದಿವಾಕರ ಕರ್ಕೆರ , ಮಾಧ್ಯಮ ಪ್ರಚಾರಕ ಶರತ್ ಶೆಟ್ಟಿ, ನಿಶಾಂತ್ ಶೆಟ್ಟಿ ಕಿಲೆಂಜೂರು ದೇವಿಪ್ರಸಾದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.