ಸಾರಾಂಶ
ಕನ್ನಡಪ್ರಭ ವಾರ್ತೆ ನಾಗಮಂಗಲ
ದೂರದೃಷ್ಟಿ ಹಾಗೂ ಒಕ್ಕೂಟ ವ್ಯವಸ್ಥೆಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದೇಶದ ಮಹಾನ್ ನಾಯಕ ಹಾಗೂ ರಾಷ್ಟ್ರ ಪ್ರೇಮಿ ಸರ್ದಾರ್ ವಲ್ಲಭಭಾಯಿ ಪಟೇಲರು ಭಾರತದ ಉಕ್ಕಿನ ಮನುಷ್ಯ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸತ್ಕೀರ್ತಿನಾಥ ಸ್ವಾಮೀಜಿ ಬಣ್ಣಿಸಿದರು.ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ತಾಲೂಕು ಆಡಳಿತ, ಮೈ ಭಾರತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಎನ್‌ಎಸ್‌ಎಸ್ ಘಟಕ ಮತ್ತು ಆದಿಚುಂಚನಗಿರಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಸರ್ದಾರ್ ವಲ್ಲಭಾಯಿ ಪಟೇಲ್ ಅವರ 150ನೇ ಜನ್ಮದಿನೋತ್ಸವದ ಪ್ರಯುಕ್ತ ಜಿಲ್ಲಾ ಮಟ್ಟದ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.
ಭಾರತವು ಐಕ್ಯತೆ ಮತ್ತು ಸಮಗ್ರತೆ ಬೆಳೆಸಿಕೊಳ್ಳುವಲ್ಲಿ, ಆದರ್ಶ ರಾಷ್ಟ್ರದ ಕನಸು ಹೊತ್ತಿದ್ದ ಸ್ವಾತಂತ್ರ್ಯ ಸೇನಾನಿ ಹಾಗೂ ಪ್ರಥಮ ಉಪಪ್ರಧಾನಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಸ್ಮರಿಸುವ ಪುಣ್ಯ ದಿನ. ಇವರ ಸ್ಮರಣಾರ್ಥ ಕೇಂದ್ರ ಸರ್ಕಾರವು ಘೋಷಿಸಿದ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲು ಉತ್ಸುಕರಾಗಿದ್ದೇವೆ. ಈ ಹಿನ್ನೆಲೆಯಲ್ಲಿ ಪಟೇಲ್ ಅವರ ಗೌರವಾರ್ಥ ಜಿಲ್ಲಾ ಮಟ್ಟದ ಏಕತಾ ನಡಿಗೆ ಯಶಸ್ವಿಯಾಗಲಿ ಎಂದರು.ಜಿಲ್ಲಾ ಯುವಜನಾಧಿಕಾರಿ ಎಸ್.ಶೃತಿ ಮಾತನಾಡಿ, ಸರ್ದಾರ್ ವಲ್ಲಭಭಾಯಿ ಪಟೇಲ ಅವರ ಕೊಡುಗೆಗಳು ದೇಶದ ಇತಿಹಾಸದಲ್ಲಿ ಅವಿಸ್ಮರಣೀಯ ಪಾತ್ರ ವಹಿಸುತ್ತವೆ. ಗುಜರಾತ್‌ನಲ್ಲಿ ಇವರ ಏಕತಾ ಪ್ರತಿಮೆಯನ್ನು ಸ್ಥಾಪಿಸಿ ಒಂದೇ ಭಾರತ ಆತ್ಮ ನಿರ್ಭರ ಭಾರತ ಎಂದು ಅಭಿಮಾನದ ನುಡಿಗಳನ್ನು ಘೋಷಿಸಿದೆ ಎಂದರು.
ಭಾರತದ 500ಕ್ಕೂ ಹೆಚ್ಚು ರಾಜ ಮನೆತನದ ರಾಜ್ಯಗಳನ್ನು ಭಾರತದ ಒಕ್ಕೂಟಕ್ಕೆ ವಿಲೀನಗೊಳಿಸಿದ ಕೀರ್ತಿ ವಲ್ಲಭಭಾಯಿ ಪಟೇಲ್ ಅವರಿಗೆ ಸಲ್ಲುತ್ತದೆ. ಇಂತಹ ಮಹಾನ್ ವ್ಯಕ್ತಿಯ 150ನೇ ಜನ್ಮ ದಿನೋತ್ಸವದ ಪ್ರಯುಕ್ತ ಪಾದಯಾತ್ರೆ ಪಾಲ್ಗೊಂಡಿರುವುದು ಹೆಮ್ಮೆಯ ವಿಷಯ ಎಂದರು.ಆದಿಚುಂಚನಗಿರಿ ವಿವಿ ಎನ್‌ಎಸ್‌ಎಸ್ ಘಟಕದ ಮುಖ್ಯ ಸಂಯೋಜನಾಧಿಕಾರಿ ಡಾ.ಎ.ಟಿ.ಶಿವರಾಮು, ಉಪಕುಲಪತಿ ಡಾ.ಎಸ್.ಎನ್.ಶ್ರೀಧರ ಮಾತನಾಡಿದರು. ತಹಸೀಲ್ದಾರ್ ಜಿ.ಆದರ್ಶ ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞಾವಿಧಿ ಬೋಧಿಸಿದರು.
ನಂತರ ಆದಿಚುಂಚನಗಿರಿ ವಿವಿ ಕ್ರೀಡಾಂಗಣದಿಂದ ಬೆಳ್ಳೂರು ಕ್ರಾಸ್ ವರೆಗಿನ ಸುಮಾರು ಐದು ಕಿ.ಮೀ. ಏಕತಾ ಪಾದಯಾತ್ರೆ ಯಶಸ್ವಿಯಾಗಿ ಸಂಪನ್ನಗೊಂಡಿತು. 1200ಕ್ಕೂ ಹೆಚ್ಚು ಸ್ವಯಂಸೇವಕರ ಜೊತೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಭಾಗಿಯಾಗಿದ್ದು ವಿಶೇಷವಾಗಿತ್ತು.ಈ ವೇಳೆ ಜಿಲ್ಲಾ ಯುವಜನ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಓಂಪ್ರಕಾಶ್, ವಿಶ್ವವಿ ರಿಜಿಸ್ಟ್ರಾರ್ ಡಾ.ಸಿ.ಕೆ.ಸುಬ್ಬರಾಯ, ಪರೀಕ್ಷಾಂಗ ರಿಜಿಸ್ಟ್ರಾರ್ ಡಾ.ನಾಗರಾಜು, ಪಿಆರ್‌ಒ ಧಮೇಂದ್ರ, ಮೈ ಭಾರತ್ ಸಂಸ್ಥೆಯ ಹರ್ಷ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಸಿ.ಎಲ್.ಶಿವಣ್ಣ, ಎಸ್.ಕಾಂತರಾಜು ಸೇರಿದಂತೆ ಹಲವರು ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))