ಪಾವಂಜೆ ಶ್ರೀ ಜ್ಞಾನ ಶಕ್ತಿ ಸುಬ್ರಹ್ಮಣ್ಯ ದೇವಸ್ಥಾನ ಜಾತ್ರೆ, ಧ್ವಜಾರೋಹಣ

| Published : Apr 15 2024, 01:15 AM IST

ಸಾರಾಂಶ

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ನಡೆದು ತೋರಣ ಮುಹೂರ್ತ, ಅಂಕುರಾರ್ಪಣೆ, ಮಹಾ ರಂಗ ಪೂಜೆ ನಡೆಯಿತು.

ಮೂಲ್ಕಿ: ಹಳೆಯಂಗಡಿ ಸಮೀಪದ ಪಾವಂಜೆ ಶ್ರೀ ಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಧ್ವಜಾರೋಹಣ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ನಡೆದು ತೋರಣ ಮುಹೂರ್ತ, ಅಂಕುರಾರ್ಪಣೆ, ಮಹಾ ರಂಗ ಪೂಜೆ ನಡೆಯಿತು. ಭಾನುವಾರ ಬೆಳಗ್ಗೆ ಶ್ರೀ ದೇವರ ಧ್ವಜಾರೋಹಣ ನಡೆದು, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ಸಂಜೆ ಶ್ರೀ ದೇವರಪೇಟೆ ಸವಾರಿ ನಡೆಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು. ಕ್ಷೇತ್ರದಲ್ಲಿ ಏ.17ರಂದು ಬಾಕಿ ಮಾರು ದೀಪ ಕೆರೆ ದೀಪ, 18ರಂದು ಬೆಳಿಳ 10 ಗಂಟೆಗೆ ಹಗಲು ರಥೋತ್ಸವ, ರಾತ್ರಿ 7 ಗಂಟೆಗೆ ಮಹಾರಥೋತ್ಸವ, ಶ್ರೀ ದೇವರ ಉತ್ಸವ ಬಲಿ ನಡೆಯಲಿದೆ.ಬಪ್ಪನಾಡು ದೇವಳ: ಸೌರಮಾನ ಯುಗಾದಿ ಆಚರಣೆ ಮೂಲ್ಕಿ: ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೌರಮಾನ ಯುಗಾದಿ ಆಚರಣೆ ವಿಜೃಂಭಣೆಯಿಂದ ನಡೆಯಿತು.ಪ್ರಾತಃ ಕಾಲ ಕ್ಷೇತ್ರದ ಅರ್ಚಕ ನರಸಿಂಹ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ವಿಶು ಕಣಿ (ಸೌರಮಾನ ಯುಗಾದಿ ಆಚರಣೆ)ಗೆ ಚಾಲನೆ ನೀಡಿ ವಿಶೇಷ ಪೂಜೆ ನಡೆದು, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ಈ ಸಂದರ್ಭ ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಆಡಳಿತ ಮೊಕ್ತೇಸರ ಮನೋಹರ್‌ ಶೆಟ್ಟಿ, ಕ್ಷೇತ್ರದ ಕಾರ್ಯನಿರ್ವಹಣಾ ಅಧಿಕಾರಿ ಜಯಮ್ಮ ಪಿ. ಮತ್ತಿತರರು ಉಪಸ್ಥಿತರಿದ್ದರು.