ಮಹಿಳೆಯರು ಆರೋಗ್ಯದ ಕಡೆ ಗಮನ ನೀಡಿ: ಸಿಇಒ ರಾಹುಲ್ ತುಕಾರಾಮ ಪಾಂಡ್ವೆ

| Published : Dec 23 2023, 01:46 AM IST

ಮಹಿಳೆಯರು ಆರೋಗ್ಯದ ಕಡೆ ಗಮನ ನೀಡಿ: ಸಿಇಒ ರಾಹುಲ್ ತುಕಾರಾಮ ಪಾಂಡ್ವೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಯಚೂರಿನ ಐಎಂಎ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಆರೋಗ್ಯ ತಪಾಸಣೆ ಶಿಬಿರದಲ್ಲಿ ಸಿಇಒ ಪಾಂಡ್ವೆ ಸಲಹೆ

ಕನ್ನಡಪ್ರಭ ವಾರ್ತೆ ರಾಯಚೂರು

ಮಹಿಳೆಯರು ಸದೃಢವುಳ್ಳ ಜೀವನ ರೂಪಿಸಕೊಳ್ಳಬೇಕಾದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಅದಕ್ಕಾಗಿ ಆರೋಗ್ಯ ರಕ್ಷಣೆ ಕಡೆಗೆ ಹೆಚ್ಚಿನ ಗಮನ ಕೊಡಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಸಲಹೆ ನೀಡಿದರು.

ಸ್ಥಳೀಯ ಐಎಂಎ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಿಳೆಯರಿಗಾಗಿ ವಿಶೇಷ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆರೋಗ್ಯ ಇಲಾಖೆಯು ಬಡ ಜನರ ಆರೋಗ್ಯ ಮಟ್ಟ ಸುಧಾರಿಸಲು ಹಲವು ಜನ ಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ಇಂದಿನಿಂದ ಜಿಲ್ಲೆಯಾದ್ಯಂತ ನಡೆಯಲಿರುವ ಆರೋಗ್ಯ ತಪಾಸಣೆ ಶಿಬಿರದ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.

ಮಹಿಳೆಯರ ಆರೋಗ್ಯದಲ್ಲಿ ಏನಾದರು ಸಮಸ್ಯೆ ಕಂಡುಬಂದಲ್ಲಿ ತಕ್ಷಣವೇ ನುರಿತ ವೈದ್ಯರ ಸಂಪರ್ಕಿಸಿ, ಅವರ ಸಲಹೆ ಸೂಚನೆಗಳನ್ನು ಪಾಲನೆ ಮಾಡುವುದರ ಮೂಲಕ ಆರೋಗ್ಯ ರಕ್ಷಣೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ಶಿಬಿರದಲ್ಲಿ ಸ್ತ್ರೀ ರೋಗ ತಜ್ಞರ ತಂಡದಿಂದ 133 ಮಹಿಳೆಯರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು, ಫಿಜೀಸಿಯನ್ ತಜ್ಞರ ತಂಡದಿಂದ 94 ಮಹಿಳೆಯರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ನೇತ್ರ ತಜ್ಞರ ತಂಡದಿಂದ 93 ಮಹಿಳೆಯರಿಗೆ ತಪಾಸಣೆ ಮಾಡಿ 48 ಕನ್ನಡಕಗಳನ್ನು ವಿತರಣೆ ಮಾಡಲಾಯಿತು, ದಂತ ವೈದ್ಯರ ತಂಡದಿಂದ 22 ಮಹಿಳೆಯರಿಗೆ ಹಲ್ಲಿನ ಪರೀಕ್ಷೆ ಮಾಡಲಾಯಿತು. ಮಾನಸಿಕ ಆರೋಗ್ಯ ತಜ್ಞರ ತಂಡದಿಂದ 5 ಜನ ಮಹಿಳೆಯರಿಗೆ ತಪಾಸಣೆ ಮಾಡಲಾಯಿತು. ಎನ್ಸಿಡಿ ಕ್ಲಿನಿಕ್ ತಂಡದಿಂದ 236 ಜನರಿಗೆ ಬಿಪಿ, ಶುಗರ್, ತಪಾಸಣೆ ಮಾಡಲಾಯಿತು. 65 ಫಲಾನುಭಾವಿಗಳಿಗೆ ಸೃಜನೆ ಮಾಡಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಐಎಎಸ್ ಪ್ರೋಬೇಷನರಿ ಅಧಿಕಾರಿಗಳಾದ ಸಾಹಿತ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಡಾ.ಗಣೇಶ, ಡಾ.ಶಾಕೀರ್, ಡಾ.ಚಂದ್ರಶೇಖರಯ್ಯ, ಡಾ.ಶಿವಕುಮಾರ, ಡಾ.ನಂದೀತಾ, ಡಾ.ಯಶೋಧ, ಡಾ.ಜಯಂತಿ, ಡಾ.ವೆಂಕಟೇಶ ನಾಯಕ ಹಾಗೂ ಎಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಹಾಗೂ ತಜ್ಞ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ, ಓಉಔ ರವರು ಹಾಜರಿದ್ದರು.

ಜಿಲ್ಲೆ ವಿವಿಧ ತಾಲೂಕುಗಳಲ್ಲಿ ಶಿಬಿರ: ಡಿ.27ರಂದು ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ, ಡಿ.30ರಂದು ಸಿಂಧನೂರು ತಾಲೂಕಿನ ಆಯುಷ್ ಆಸ್ಪತ್ರೆಯಲ್ಲಿ, ಜ.3ರಂದು ಲಿಂಗಸೂಗೂರು ತಾಲೂಕಿನ ಗುರುಭವನ, ಜ.6 ರಂದು ಮಾನ್ವಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಜ.10ರಂದು ಸಿರವಾರ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸಲಾಗಿದೆ.