ಸಾರಾಂಶ
-ತುಮಕೂರು ಗ್ರಾಮದ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿದ ಹಸಿರು ಸೇನೆ ಜಿಲ್ಲಾಧ್ಯಕ್ಷ
-ಕೋರ್ ಗ್ರೀನ್ ಶುಗರ್ ಫ್ಯಾಕ್ಟರಿಗೆ ಭೇಟಿ ನೀಡಿದ ರೈತ ಮುಖಂಡ-10 ದಿನಗಳೊಳಗೆ ರೈತರ ಬಾಕಿ ಹಣ ಪಾವತಿಸುವಂತೆ ಒತ್ತಾಯ
----ಕನ್ನಡಪ್ರಭ ವಾರ್ತೆ ವಡಗೇರಾ
ರೈತರ ಕಬ್ಬಿನ ಬಾಕಿ ಹಣವನ್ನು 10 ದಿನಗಳ ಒಳಗಡೆ ಪಾವತಿಸುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಮಲ್ಲನಗೌಡ ಹಗರಟಗಿ ಒತ್ತಾಯಿಸಿದ್ದಾರೆ.ಗುರುವಾರ ತಾಲೂಕಿನ ತುಮಕೂರು ಗ್ರಾಮದ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಅವರು ಮಾತನಾಡಿದರು.
ಜಿಲ್ಲೆ ಹಾಗೂ ಹೊರ ಜಿಲ್ಲೆಯ ರೈತರು ಇಲ್ಲಿನ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಗೆ ಕಬ್ಬನ್ನು ಮಾರಾಟ ಮಾಡಿದ್ದು, ಮೂರ್ನಾಲ್ಕು ತಿಂಗಳಗಳು ಕಳೆದರೂ ಕೂಡ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರು ಸರಿಯಾದ ಸಮಯಕ್ಕೆ ಕಬ್ಬಿನ ಹಣ ಪಾವತಿ ಮಾಡದೆ ಕಾಲಹರಣ ಮಾಡುತ್ತಿದೆ ಎಂದು ಅವರು ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ರೈತರು ಸಾಲ ಮಾಡಿ ಕಬ್ಬಿನ ಬೆಳೆ ಬೆಳೆದಿದ್ದಾರೆ. ಸಕಾಲಕ್ಕೆ ಹಣ ಪಾವತಿ ಮಾಡುತ್ತಾರೆ ಎಂದು ತಿಳಿದು ಇಲ್ಲಿಯೆ ಕಬ್ಬು ಮಾರಾಟ ಮಾಡಿದ್ದಾರೆ. ಆದರೆ, ಕಾರ್ಖಾನೆ ಮಂಡಳಿಯವರು ಸರಿಯಾದ ಸಮಯಕ್ಕೆ ಹಣ ನೀಡದೆ ಸತಾಯಿಸುತ್ತಿದ್ದು, ಇದರಿಂದ ರೈತರ ಉಪಜೀವನಕ್ಕೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಆಡಳಿತ ಮಂಡಳಿಯವರು ರೈತರ ಕಬ್ಬಿನ ಬಾಕಿ ಹಣವನ್ನು ಪಾವತಿಸಬೇಕು. ಒಂದು ವೇಳೆ ನಿರ್ಲಕ್ಷ ವಹಿಸಿದ್ದಲ್ಲಿ ರೈತ ಸಂಘದ ವತಿಯಿಂದ ಸಕ್ಕರೆ ಕಾರ್ಖಾನೆಗೆ ಬೀಗ ಜಡಿದು ಉಗ್ರ ಹೋರಾಟ ಮಾಡುವುದಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಶರಣಪ್ಪ ಸಾಹುಕಾರ ತಡಿಬಿಡಿ, ತಾಲೂಕು ಅಧ್ಯಕ್ಷ ವಿದ್ಯಾಧರ್ ಜಾಕಾ, ಗೌರವಾಧ್ಯಕ್ಷ ಶರಣು ಜಡಿ, ಹಳ್ಳೆಪ್ಪ ತೇಜೇರ, ತಿರುಮಲ ಮುಸ್ತಾಜೀರ್, ಮುಕ್ಕಣ್ಣ ಮುನಮುಟಗಿ ಇನ್ನಿತರ ರೈತ ಸಂಘದ ಮುಖಂಡರು ಎಚ್ಚರಿಸಿದರು.
ಪ್ರತಿಭಟನೆ: ಕೆಲವು ದಿನಗಳ ಹಿಂದೆ ಕಲಬುರಗಿ ಭಾಗದ ಕೆಲವು ಕಬ್ಬು ಬೆಳೆಗಾರರು ಬಾಕಿ ಹಣ ಪಾವತಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಕೋರ್ ಗ್ರೀನ್ ಶುಗರ್ ಫ್ಯಾಕ್ಟರಿ ಅನೇಕ ರೈತರ ಬಾಕಿ ಹಣವನ್ನು ನೀಡಬೇಕಿದ್ದು, ವಿನಾಕಾರಣ ವಿಳಂಬ ಮಾಡುತ್ತಿದ್ದಾರೆಂದು ದೂರಿದ್ದರು.-----
ಸಕ್ಕರೆ ಕಾರ್ಖಾನೆಗೆ ಬೀಗ ಜಡಿದು ಉಗ್ರ ಹೋರಾಟರೈತರು ಸಾಲ ಮಾಡಿ ಕಬ್ಬಿನ ಬೆಳೆ ಬೆಳೆದಿದ್ದಾರೆ. ಸಕಾಲಕ್ಕೆ ಹಣ ಪಾವತಿ ಮಾಡುತ್ತಾರೆ ಎಂದು ತಿಳಿದು ಇಲ್ಲಿಯೆ ಕಬ್ಬು ಮಾರಾಟ ಮಾಡಿದ್ದಾರೆ. ಆದರೆ, ಕಾರ್ಖಾನೆ ಮಂಡಳಿಯವರು ಸರಿಯಾದ ಸಮಯಕ್ಕೆ ಹಣ ನೀಡದೆ ಸತಾಯಿಸುತ್ತಿದ್ದು, ಇದರಿಂದ ರೈತರ ಉಪಜೀವನಕ್ಕೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಆಡಳಿತ ಮಂಡಳಿಯವರು ರೈತರ ಕಬ್ಬಿನ ಬಾಕಿ ಹಣವನ್ನು ಪಾವತಿಸಬೇಕು. ಒಂದು ವೇಳೆ ನಿರ್ಲಕ್ಷ ವಹಿಸಿದ್ದಲ್ಲಿ ರೈತ ಸಂಘದ ವತಿಯಿಂದ ಸಕ್ಕರೆ ಕಾರ್ಖಾನೆಗೆ ಬೀಗ ಜಡಿದು ಉಗ್ರ ಹೋರಾಟ.
-----ವಡಗೇರಾ ತಾಲೂಕಿನ ತುಮಕೂರು ಗ್ರಾಮದ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಗೆ ರೈತ ಸಂಘದ ಮುಖಂಡರು ಭೇಟಿ ನೀಡಿದರು.
10ವೈಡಿಆರ್10