ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು ಕಾರಣ ಇತ್ತೀಚಿನ ದಿನಗಳಲ್ಲಿ ನಾವು ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದೇವೆ.

ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣಮಕ್ಕಳ ಬಗ್ಗೆ ಪೋಷಕರು ಆರೋಗ್ಯದ ಕಡೆ ಹೆಚ್ಚು ಗಮನ ವಹಿಸುವಂತೆ ತಾಪಂ ಮಾಜಿ ಸದಸ್ಯ ಎ.ಟಿ. ರಂಗಸ್ವಾಮಿ ತಿಳಿಸಿದರು.ತಾಲೂಕಿನ ಆಲನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್ ನಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು ಕಾರಣ ಇತ್ತೀಚಿನ ದಿನಗಳಲ್ಲಿ ನಾವು ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದೇವೆ ಇದಕ್ಕೆ ಕಾರಣ ಸರಿಯಾದ ಆಹಾರ ಸೇವನೆ ಮಾಡದೆ ಇರುವುದು ಮತ್ತು ಕುಡಿತಕ್ಕೆ ದಾಸರಾಗಿ ಸರಿಯಾಗಿ ಆಹಾರ ಸೇವನೆ ಮಾಡದೆ ಇರುವುದು ಮತ್ತು ಸ್ವಚ್ಛತೆ ಇಲ್ಲದಿರುವುದು ಇನ್ನು ಅನೇಕ ಕಾರಣಗಳಿಂದ ಮನುಷ್ಯನಿಗೆ ರೋಗ ಹರಡಿ ಅನಾರೋಗ್ಯಕ್ಕೆ ತುತ್ತಾಗಿ ಮರಣ ಹೊಂದುವ ಸನ್ನಿವೇಶಗಳು ಹೆಚ್ಚಾಗಿದೆ ಎಂದರು.ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕ ಮಂಡಿಗೌಡ, ವಲಯ ವ್ಯವಸ್ಥಾಪಕ ಮಧುಸೂದನ್, ಬ್ಯಾಂಕ್ ವ್ಯವಸ್ಥಾಪಕ ಮಹದೇವ್, ಡಾ. ವಿಜಯ್, ರೋಹಿತ್, ಪ್ರೀತಮ್, ಶಿವು, ಶಾಖೆಯ ಸಿಬ್ಬಂದಿಗಳಾದ ಎಸ್. ಲಕ್ಷ್ಮಿ, ಭರತ್, ಅಂಬಿಕಾ, ವಿಜಯ್, ಧನರಾಜ್, ಚೇತನ್, ಅಜಿತ್, ಶಾಲಾ ಶಿಕ್ಷಕರು ಮತ್ತು ಗ್ರಾಮಸ್ಥರು ಇದ್ದರು.