ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಿ: ವಾಣಿ ಶ್ರೀನಿವಾಸ್

| Published : Jun 26 2024, 12:38 AM IST

ಸಾರಾಂಶ

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಕೊಡಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಅವರ ಪತ್ನಿ ವಾಣಿ ಶ್ರೀನಿವಾಸ್ ಹೇಳಿದರು. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ತರೀಕೆರೆಯಿಂದ ಸಮೀಪದ ಹಳಿಯೂರುನಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿ, ಆರೋಗ್ಯ ಶಿಬಿರದಲ್ಲಿ ಕಣ್ಣು ತಪಾಸಣೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಹಳಿಯೂರುನಲ್ಲಿ ಆರೋಗ್ಯ ತಪಾಸಣಾ ಶಿಬಿರಕನ್ನಡಪ್ರಭ ವಾರ್ತೆ, ತರೀಕೆರೆ

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಕೊಡಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಅವರ ಪತ್ನಿ ವಾಣಿ ಶ್ರೀನಿವಾಸ್ ಹೇಳಿದರು.

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ತರೀಕೆರೆಯಿಂದ ಸಮೀಪದ ಹಳಿಯೂರುನಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿ, ಆರೋಗ್ಯ ಶಿಬಿರದಲ್ಲಿ ಕಣ್ಣು ತಪಾಸಣೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು.ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್.ನ ತಾಲೂಕು ಯೋಜನಾಧಿಕಾರಿ ಕುಸುಮಾಧರ್ ಮಾತನಾಡಿ, ರಾಜ್ಯದಲ್ಲಿ 6 ಲಕ್ಷ ಸ್ವಸಹಾಯ ಸಂಘಗಳು ಇದ್ದು, 40 ಲಕ್ಷ ಸದಸ್ಯರನ್ನು ಹೊಂದಿದೆ, ಯೋಜನೆಯಿಂದ ಸಮಾಜ ಕಟ್ಟುವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ತಾಲೂಕಿನಲ್ಲಿ 140 ಜನರಿಗೆ ಮಾಸಾಶನ ವಿತರಿಸಲಾಗುತ್ತಿದೆ. ಪ್ರಗತಿನಿಧಿ, ಜನ ಮಂಗಳ, ವಾತ್ಸಲ್ಯ ಯೋಜನೆ, ಸುಜ್ಞಾನ ನಿಧಿ, ಕೆರೆಗಳ ಹೂಳೆತ್ತುವ ಕಾರ್ಯ ಇತ್ಯಾದಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕಣ್ಣು ಬಹಳ ಮುಖ್ಯವಾದದ್ದು, ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆಯಬೇಕು ಎಂದು ಹೇಳಿದರು.

ಸಮುದಾಯ ಆರೋಗ್ಯ ಅಧಿಕಾರಿ ಹರ್ಷವರ್ಧನ್ ಮಾತನಾಡಿದರು. ಗ್ರಾಮಸ್ಥರು, ಪುರಸಭೆ ಮಾಜಿ ಸದಸ್ಯ ಆನಂದ್, ಮಹಿಳಾ ಜ್ಞಾನವಿಕಾಸ ಸಮನ್ವಯಾಧಿಕಾರಿ ನಂದಿನಿ, ವಲಯ ಮೇಲ್ವಿಚಾರಕ ಹೋಮ್ಯಾ ನಾಯ್ಕ, ಸೇವಾ ಪ್ರತಿನಿಧಿ ಸರಳ, ಶಿವಮೊಗ್ಗ ಮೈತ್ರಿ ಸ್ಪೆಷಾಲಿಟಿ ಆಸ್ಪತ್ರೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಜ್ಞಾನವಿಕಾಸ ಕೇಂದ್ರ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಹಿಳಾ ಜ್ಞಾನವಿಕಾಸ ಸಮನ್ವಯಾಧಿಕಾರಿ ನಂದಿನಿ ನಿರೂಪಿಸಿದರು.-----------------

24ಕೆಟಿಆರ್.ಕೆ.9ಃ

ತರೀಕೆರೆ ಸಮೀಪದ ಹಳಿಯೂರುನಲ್ಲಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಪತ್ನಿ ವಾಣಿ ಶ್ರೀನಿವಾಸ್ ಉದ್ಘಾಟಿಸಿದರು, ಪುರಸಭೆ ಮಾಜಿ ಸದಸ್ಯ ಆನಂದ್, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಯೋಜನಾಧಿಕಾರಿ ಕುಸುಮಾಧರ್, ಮಹಿಳಾ ಜ್ಞಾನವಿಕಾಸ ಸಮನ್ವಯಾಧಿಕಾರಿ ನಂದಿನಿ ಮತ್ತಿತರರು ಇದ್ದರು.