ಮೀಸಲಾತಿ ಬಳಸಿ ಸಾಧನೆ ಮಾಡಿ ಅಂಬೇಡ್ಕರ್‌ಗೆ ಗೌರವ ಸಲ್ಲಿಸಿ

| Published : Apr 15 2025, 12:58 AM IST

ಮೀಸಲಾತಿ ಬಳಸಿ ಸಾಧನೆ ಮಾಡಿ ಅಂಬೇಡ್ಕರ್‌ಗೆ ಗೌರವ ಸಲ್ಲಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬುದನ್ನು ತಿಳಿಸುವ ಮೂಲಕ ವಿಶ್ವಕ್ಕೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ ಮತ್ತು ಸಂವಿಧಾನದ ಸಹಾಯದಿಂದ ಸಮಾಜದಲ್ಲಿ ಎಲ್ಲರೂ ಅನುಕೂಲ ಪಡೆದಿದ್ದಾರೆ. ಇಂತಹ ಸಂವಿಧಾನ ನೀಡಿದ ಡಾ. ಬಿ.ಆರ್.ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಗೌರವ ಸಲ್ಲಿಸಲು ಬಹಳ ಸಂತೋಷವಾಗುತ್ತದೆ ಎಂದು ತಿಳಿಸಿ, ಹಲವಾರು ವಿಷಯಗಳ ಕುರಿತು ಮಾತನಾಡಿದರು. ಉಪನ್ಯಾಸಕ ರತ್ನಾಕರ್ ಎಂ.ಜೆ. ಪ್ರಧಾನ ಭಾಷಣ ಮಾಡಿದರು. ಪುಣ್ಯವತಿ ಅವರು ಸಂವಿಧಾನ ಪೀಠಿಕೆಯ ಪ್ರಮಾಣವಚನ ಬೋಧಿಸಿದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ಪರಿಶಿಷ್ಟ ಸಮಾಜಕ್ಕೆ ಮೀಸಲಿಟ್ಟ ಹಣವನ್ನು ಪರಿಶಿಷ್ಟ ಅಭಿವೃದ್ಧಿಗೆ ಮಾತ್ರ ಬಳಸಬೇಕು ಎಂದು ಶಾಸಕ ರೇವಣ್ನ ಸಲಹೆ ನೀಡಿದರು.

ತಾಲೂಕು ಮಟ್ಟದಲ್ಲಿಯೂ ಪರಿಶಿಷ್ಟ ಸಮಾಜದ ವಿದ್ಯಾರ್ಥಿಗಳ ಏಳಿಗೆಗೆ ಅಗತ್ಯವಾದ ಸಕಲ ಸೌಲಭ್ಯಗಳನ್ನು ಒದಗಿಸಿಕೊಟ್ಟು, ಒಂದೇ ಸೂರಿನಡಿಯಲ್ಲಿ ಒಂದನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಉತ್ತಮ ಶಿಕ್ಷಣ ನೀಡಬೇಕು, ನಂತರ ಉನ್ನತ ವ್ಯಾಸಂಗಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಡಾ. ಬಿ.ಆರ್‌.ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಬೇಕು ಎಂದು ಶಾಸಕ ಎಚ್.ಡಿ.ರೇವಣ್ಣ ಅಭಿಪ್ರಾಯಪಟ್ಟರು.

ಪಟ್ಟಣದ ಸಾರ್ವಜನಿಕ ಸಮುದಾಯ ಭವನ ಆವರಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಡಾ. ಬಿ.ಆರ್‌.ಅಂಬೇಡ್ಕರ್ ಅವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬುದನ್ನು ತಿಳಿಸುವ ಮೂಲಕ ವಿಶ್ವಕ್ಕೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ ಮತ್ತು ಸಂವಿಧಾನದ ಸಹಾಯದಿಂದ ಸಮಾಜದಲ್ಲಿ ಎಲ್ಲರೂ ಅನುಕೂಲ ಪಡೆದಿದ್ದಾರೆ. ಇಂತಹ ಸಂವಿಧಾನ ನೀಡಿದ ಡಾ. ಬಿ.ಆರ್.ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಗೌರವ ಸಲ್ಲಿಸಲು ಬಹಳ ಸಂತೋಷವಾಗುತ್ತದೆ ಎಂದು ತಿಳಿಸಿ, ಹಲವಾರು ವಿಷಯಗಳ ಕುರಿತು ಮಾತನಾಡಿದರು. ಉಪನ್ಯಾಸಕ ರತ್ನಾಕರ್ ಎಂ.ಜೆ. ಪ್ರಧಾನ ಭಾಷಣ ಮಾಡಿದರು. ಪುಣ್ಯವತಿ ಅವರು ಸಂವಿಧಾನ ಪೀಠಿಕೆಯ ಪ್ರಮಾಣವಚನ ಬೋಧಿಸಿದರು.

ತಹಸೀಲ್ದಾರ್ ವೈ.ಎಂ.ರೇಣುಕುಮಾರ್, ಪುರಸಭಾಧ್ಯಕ್ಷ ಎಚ್.ಕೆ.ಪ್ರಸನ್ನ, ಉಪಾಧ್ಯಕ್ಷೆ ಸಾವಿತ್ರಮ್ಮ, ಡಿವೈಎಸ್ಪಿ ಶಾಲು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ, ತಾ.ಪಂ. ಇಒ ಮುನಿರಾಜು, ವೃತ್ತ ನಿರೀಕ್ಷಕ ಪ್ರದೀಪ್ ಬಿ.ಆರ್‌, ಉಪ ನೋಂದಣಾಧಿಕಾರಿ ರಾಕೇಶ್, ಬಿಇಒ ಸೋಮಲಿಂಗೇಗೌಡ, ಪುರಸಭೆ ಮುಖ್ಯಾಧಿಕಾರಿ ಶಿವಶಂಕರ್, ಅಗ್ನಿಶಾಮಕ ಠಾಣಾಧಿಕಾರಿ ಸೋಮಶೇಖರ್, ಶಿರೆಸ್ತೇದಾರ್ ಲೋಕೇಶ್, ಸಮಾಜ ಕಲ್ಯಾಣ ಇಲಾಖೆಯ ಚಿಕ್ಕಲಿಂಗೇಗೌಡ, ವಿಶ್ವಜ್ಞಾನಿ ಡಾ.ಅಂಬೇಡ್ಕರ್‌ ಸೇವಾ ಸಮಿತಿ ಟ್ರಸ್ಟ್ ಹಾಗೂ ತಾಲೂಕಿನ ವಿವಿಧ ದಲಿತ ಸಂಘಟನೆಗಳ ಅಧ್ಯಕ್ಷರು ಹಾಗೂ ಸದಸ್ಯರು, ಹಿತೈಷಿಗಳು ಇದ್ದರು.