ಸೇವಾ ಸಾಪ್ತಾಹದ ಅಂಗವಾಗಿ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ, ಸ್ವಚ್ಛತಾ ಅಭಿಯಾನ, ಮಾದಕವಸ್ತು ವಿರೋಧಿ ಜಾಗೃತಿ, ರಸ್ತೆ ಅಪಘಾತ ತಡೆ ಹಾಗೂ ಮಾಜಿ ಸೈನಿಕರ ಸನ್ಮಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಯೋಧರ ಸ್ಮಾರಕಗಳನ್ನು ಸ್ವಚ್ಛಗೊಳಿಸಿ ಗೌರವಿಸುವ ಮೂಲಕ ಅವರ ತ್ಯಾಗವನ್ನು ಸ್ಮರಿಸಲಾಗುತ್ತಿದೆ ಎಂದು ಹೇಳಿದರು. ದೇಶ ಮತ್ತು ಸಮಾಜಕ್ಕೆ ತಮ್ಮಿಂದಲೂ ಕೊಡುಗೆ ನೀಡಬೇಕು ಎಂಬ ಆಶಯದಿಂದ ಪರಿಸರ ಸಂರಕ್ಷಣೆ ಹಾಗೂ ಅಗತ್ಯವಿರುವವರಿಗೆ ನೆರವು ನೀಡುವಂತಹ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಹಾಸನ ಜಿಲ್ಲಾ ಬಿಜೆಪಿ ವತಿಯಿಂದ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸಲಾಗುತ್ತಿದೆ ಎಂದರು.
ಕನ್ನಡಪ್ರಭ ವಾರ್ತೆ ಸಕಲೇಶಪುರ
ಪ್ರಧಾನಿ ನರೇಂದ್ರ ಮೋದಿ ಅವರ ೨೫ ವರ್ಷಗಳ ರಾಜಕೀಯ ಸೇವೆಯ ಸ್ಮರಣಾರ್ಥ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ‘ಸೇವಾ ಸಂಕಲ್ಪ ಅಭಿಯಾನ’ದಡಿ ‘ಮೇರಾ ಯೋಗದಾನ್’ ಕಾರ್ಯಕ್ರಮದ ಅಂಗವಾಗಿ ನಗರದ ಬಸ್ ನಿಲ್ದಾಣದ ಎದುರಿನ ಕಾರ್ಗಿಲ್ ಯುದ್ಧದ ಹುತಾತ್ಮ ಯೋಧ ಎ.ಕೆ. ಸಾಗರ್ ಅವರ ಸ್ಮಾರಕವನ್ನು ಸ್ವಚ್ಛಗೊಳಿಸಿ, ಪುಷ್ಪನಮನ ಸಲ್ಲಿಸಲಾಯಿತು.ಕಾರ್ಯಕ್ರಮದಲ್ಲಿ ಶಾಸಕ ಸಿಮೆಂಟ್ ಮಂಜು ಮಾತನಾಡಿ, ಮೋದಿ ಅವರ ೨೫ ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಸೂಚನೆಯಂತೆ ಪ್ರತಿ ಮಂಡಲದಲ್ಲೂ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಸೇವಾ ಸಾಪ್ತಾಹದ ಅಂಗವಾಗಿ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ, ಸ್ವಚ್ಛತಾ ಅಭಿಯಾನ, ಮಾದಕವಸ್ತು ವಿರೋಧಿ ಜಾಗೃತಿ, ರಸ್ತೆ ಅಪಘಾತ ತಡೆ ಹಾಗೂ ಮಾಜಿ ಸೈನಿಕರ ಸನ್ಮಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಯೋಧರ ಸ್ಮಾರಕಗಳನ್ನು ಸ್ವಚ್ಛಗೊಳಿಸಿ ಗೌರವಿಸುವ ಮೂಲಕ ಅವರ ತ್ಯಾಗವನ್ನು ಸ್ಮರಿಸಲಾಗುತ್ತಿದೆ ಎಂದು ಹೇಳಿದರು. ದೇಶ ಮತ್ತು ಸಮಾಜಕ್ಕೆ ತಮ್ಮಿಂದಲೂ ಕೊಡುಗೆ ನೀಡಬೇಕು ಎಂಬ ಆಶಯದಿಂದ ಪರಿಸರ ಸಂರಕ್ಷಣೆ ಹಾಗೂ ಅಗತ್ಯವಿರುವವರಿಗೆ ನೆರವು ನೀಡುವಂತಹ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಹಾಸನ ಜಿಲ್ಲಾ ಬಿಜೆಪಿ ವತಿಯಿಂದ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸಲಾಗುತ್ತಿದೆ ಎಂದರು.ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ ನಾಗೇಂದ್ರ, ಪ್ರಧಾನ ಕಾರ್ಯದರ್ಶಿಗಳಾದ ರಾಜಕುಮಾರ್, ಅಮಿತ್ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ತಾಲೂಕು ಬಿಜೆಪಿ ಅಧ್ಯಕ್ಷ ವಳಲಹಳ್ಳಿ ಅಶ್ವಥ್, ಪ್ರಧಾನ ಕಾರ್ಯದರ್ಶಿಗಳಾದ ಅಗ್ನಿ ಸೋಮಶೇಖರ್, ಮಧು ಸೇರಿದಂತೆ ಬಿಜೆಪಿ ಮುಖಂಡರು, ಮಂಡಲ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.