ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದ ಪಿಡಿಒ, ಕಾರ್ಯದರ್ಶಿಗಳು

| Published : Jul 05 2024, 12:48 AM IST

ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದ ಪಿಡಿಒ, ಕಾರ್ಯದರ್ಶಿಗಳು
Share this Article
  • FB
  • TW
  • Linkdin
  • Email

ಸಾರಾಂಶ

ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಪಾಂಡವಪುರ ತಾಲೂಕಿನ ಕೆಲವು ಗ್ರಾಮ ಪಂಚಾಯ್ತಿಗಳ ಪಿಡಿಒ ಹಾಗೂ ಕಾರ್‍ಯದರ್ಶಿಗಳು ಕೆಲಸ ಮಾಡುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಗುರುವಾರ ಪಟ್ಟಣದ ತಾಲೂಕು ಪಂಚಾಯ್ತಿ ಕಚೇರಿಗೆ ತೆರಳಿ ಇಒ ಲೋಕೇಶ್‌ಮೂರ್ತಿ ಅವರನ್ನು ತರಾಟೆಗೆ ತೆಗೆದುಕೊಂಡರು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ತಾಲೂಕಿನ ಕೆಲವು ಗ್ರಾಮ ಪಂಚಾಯ್ತಿಗಳ ಪಿಡಿಒ ಹಾಗೂ ಕಾರ್‍ಯದರ್ಶಿಗಳು ಕೆಲಸ ಮಾಡುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಗುರುವಾರ ಪಟ್ಟಣದ ತಾಲೂಕು ಪಂಚಾಯ್ತಿ ಕಚೇರಿಗೆ ತೆರಳಿ ಇಒ ಲೋಕೇಶ್‌ಮೂರ್ತಿ ಅವರನ್ನು ತರಾಟೆಗೆ ತೆಗೆದುಕೊಂಡರು.

ತಾಲೂಕಿನ ಸುಂಕಾತೊಣ್ಣೂರು ಗ್ರಾಪಂನಲ್ಲಿ ಅಲ್ಲಿನ ಪಿಡಿಒ ಹಾಗೂ ಕಾರ್‍ಯದರ್ಶಿಗಳು ಸಾರ್ವಜನಿಕರಿಗೆ ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ. ಸಾರ್ವಜನಿಕರು ಪರವಾನಿಗೆ(ಲೈಸೆನ್ಸ್) ರಿನಿವಲ್, ಇ- ಸ್ವತ್ತು ಸೇರಿದಂತೆ ವಿವಿಧ ಕೆಲಸಗಳಿಗೆ ತೆರಳಿದೆ ಅಧಿಕಾರಿಗಳು ಲಂಚ ಕೇಳಿ ಲಂಚ ನೀಡದಿದ್ದರೆ ಕೆಲಸ ಮಾಡಿಕೊಡದೆ ಸಬೂಬು ಹೇಳಿ ವಾಪಸ್ ಕಳುಹಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿವೆ.

ಗ್ರಾಪಂನಲ್ಲಿಯೇ ಇಷ್ಟೊಂದು ಭ್ರಷ್ಟಾಚಾರ ತುಂಬಿ ತುಳುಕಿದರೆ ಜನಸಾಮಾನ್ಯರ ಕಷ್ಟಕಾರ್ಪಣ್ಯಗಳಿಗೆ ಸ್ಪಂದನೆ ಮಾಡೋರು ಯಾರು ಎಂದು ತರಾಟೆಗೆ ತೆಗೆದುಕೊಂಡರು.

ಸುಂಕಾತೊಣ್ಣೂರು ಗ್ರಾಪಂ ಹಾಲಿ ಸದಸ್ಯ ಎನ್.ಮಹೇಶ್ ಅಧ್ಯಕ್ಷರಾಗಿ ತಾಲೂಕಿನಲ್ಲಿಯೇ ಮಾದರಿಯಾಗಿ ಕೆಲಸ ಮಾಡಿದ್ದಾರೆ. ಅಂತಹ ವ್ಯಕ್ತಿಗಳೇ ಹೋದರೆ ಸರಿಯಾಗಿ ಸ್ಪಂದನೆ ನೀಡಲಿಲ್ಲ ಎಂದು ಸ್ಥಳೀಯ ಚುನಾಯಿತಿ ಪ್ರತಿನಿಧಿಗಳು ಹೇಗೆ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಕಿಡಿಕಾರಿದರು.

ತಾಲೂಕಿನಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಅಧಿಕಾರಿಗಳಿಗೆ ಹೇಳೋರು ಕೇಳೋರು ಯಾರು ಇಲ್ಲದಂತಾಗಿದೆ. ಅಧಿಕಾರಿಗಳು ಜವಾಬ್ದಾರಿ ಹೊತ್ತು ಕೆಲಸ ಮಾಡಬೇಕು. ಇಲ್ಲವಾದರೆ ತಕ್ಕಪಾಠ ಕಲಿಸಬೇಕಾಗುತ್ತಿದೆ ಎಂದು ಎಚ್ಚರಿಸಿದರು.

ಗ್ರಾಪಂ ಮಾಜಿ ಅಧ್ಯಕ್ಷ ಎನ್.ಮಹೇಶ್ ಮಾತನಾಡಿ, ಸುಂಕಾತೊಣ್ಣೂರು ಪಿಡಿಒ ಹಾಗೂ ಕಾರ್‍ಯದರ್ಶಿ ಸದಸ್ಯರಿಗೂ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿದರು. ಹೊಸಕನ್ನಂಬಾಡಿ ಕೃಷ್ಣಮೂರ್ತಿ ಮಾತನಾಡಿ, ಕಟ್ಟೇರಿ ಗ್ರಾಪಂನಲ್ಲೂ ಸಹ ಪಿಡಿಒ ಜನಸಾಮಾನ್ಯರ ಸಮಸ್ಯೆ ಕೇಳುತ್ತಿಲ್ಲ ಎಂದು ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಇಓ ಲೋಕೇಶ್‌ಮೂರ್ತಿ, ಈ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಪಿಡಿಒ ಹಾಗೂ ಕಾರ್‍ಯದರ್ಶಿಗಳನ್ನು ಕರೆಸಿ ಅಥವಾ ನಾನೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಇದೇವೇಳೆ ಜೆಡಿಎಸ್ ಪಕ್ಷದ ಹಲವು ಮುಖಂಡರು ಹಾಜರಿದ್ದರು.