ವಾಲ್ಮೀಕಿ ಉಪದೇಶ ಪಾಲಿಸಿದರೆ ಸಮಾಜದಲ್ಲಿ ಶಾಂತಿ

| Published : Oct 24 2024, 12:46 AM IST

ವಾಲ್ಮೀಕಿ ಉಪದೇಶ ಪಾಲಿಸಿದರೆ ಸಮಾಜದಲ್ಲಿ ಶಾಂತಿ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಮಹರ್ಷಿ ವಾಲ್ಮೀಕಿ ರಾಮಾಯಣ ಮಹಾಕಾವ್ಯದ ಮೂಲಕ ಸಾದರ ಪಡಿಸಿದ ಆದರ್ಶಗಳನ್ನು ಯುವ ಜನರು ತಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದು ಮಾಜಿ ಸಚಿವ ನರಸಿಂಹ ನಾಯಕ(ರಾಜುಗೌಡ) ಕರೆ ನೀಡಿದರು. ತಾಲೂಕಿನ ಕಡ್ಲೇವಾಡ ಪಿಸಿಎಚ್ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ವಾಲ್ಮೀಕಿ ಕುರಿತು ಹೆಚ್ಚು ಅಧ್ಯಯನ ಮಾಡಿ ಬೆಳಕು ಚೆಲ್ಲುವ ಅಗತ್ಯವಿದೆ.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ಮಹರ್ಷಿ ವಾಲ್ಮೀಕಿ ರಾಮಾಯಣ ಮಹಾಕಾವ್ಯದ ಮೂಲಕ ಸಾದರ ಪಡಿಸಿದ ಆದರ್ಶಗಳನ್ನು ಯುವ ಜನರು ತಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದು ಮಾಜಿ ಸಚಿವ ನರಸಿಂಹ ನಾಯಕ(ರಾಜುಗೌಡ) ಕರೆ ನೀಡಿದರು.ತಾಲೂಕಿನ ಕಡ್ಲೇವಾಡ ಪಿಸಿಎಚ್ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ವಾಲ್ಮೀಕಿ ಕುರಿತು ಹೆಚ್ಚು ಅಧ್ಯಯನ ಮಾಡಿ ಬೆಳಕು ಚೆಲ್ಲುವ ಅಗತ್ಯವಿದೆ. ಪ್ರತಿಯೊಬ್ಬರು ವಾಲ್ಮೀಕಿ ಬೋಧಿಸಿದ ಉಪದೇಶಗಳನ್ನು ಪರಿಪಾಲಿಸಿದರೆ ಕುಟುಂಬ ಹಾಗೂ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ. ಈ ಭಾಗದಲ್ಲಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ವಾಲ್ಮೀಕಿ ಸಮುದಾಯ ಹೆಚ್ಚು ಅಭಿವೃದ್ಧಿ ಹೊಂದಬೇಕು ಎಂದು ಹೇಳಿದರು. ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ್ದ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಜಯಪುರ ಅನುಗ್ರಹ ಆಸ್ಪತ್ರೆಯ ಮುಖ್ಯಸ್ಥ ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ)ಮಾತನಾಡಿ, ರಾಮಾಯಣ ಮಹಾಕಾವ್ಯ ರಚಿಸಿದವರು ಮಹರ್ಷಿ ವಾಲ್ಮೀಕಿ. ಅವರು ರಾಮಾಯಣದಲ್ಲಿ ಉಲ್ಲೇಖಿಸಿರುವ ಅಂಶಗಳು ಇಂದಿಗೂ ಎಂದೆಂದಿಗೂ ಪ್ರಸ್ತುತವಾಗಿವೆ. ರಾಮಾಯಣದ ಮೌಲ್ಯಗಳು ಭವಿಷ್ಯಕ್ಕೆ ದಾರಿದೀಪವಾಗಿವೆ. ಆದಿಕವಿ ಹೇಳಿಕೊಟ್ಟ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಸಮುದಾಯಕ್ಕೆ ಅಭಿನಂದನೆಗಳು ತಿಳಿಸಿದರು.ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ಶಾಸಕ ವೇಣುಗೋಪಾಲ ನಾಯಕರ ಸಹೋದರರಾದ ರಾಜ ಸಂತೋಷ ನಾಯಕ, ಉತ್ತರ ಕರ್ನಾಟಕ ವಾಲ್ಮೀಕಿ ಮಹಾಸಭಾದ ಅಧ್ಯಕ್ಷರಾದ ಮರಿಯಪ್ಪ ನಾಯಕ ಅವರು ಮಾತನಾಡಿದರು.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ವಹಿಸಿದ್ದರು. ಕಾರ್ಯಕ್ರಮದ ಸಾನಿಧ್ಯವನ್ನು ವೀರಗೊಟ ಅಡವಿಲಿಂಗ ಮಹಾರಾಜರು, ಆಲಮೇಲದ ಮಲ್ಲಿಬೊಮ್ಮಯ್ಯ ಸ್ವಾಮೀಜಿ ವಹಿಸಿದ್ದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ರವಿಕುಮಾರ ಬಿಸನಾಳ, ಸಿಂದಗಿ ಪುರಸಭೆಯ ಸದಸ್ಯರಾದ ಶರಣಗೌಡ ಪಾಟೀಲ, ಮುಖಂಡರಾದ ವಿಠ್ಠಲ ಸಾಹುಕಾರ ಕನ್ನೊಳ್ಳಿ, ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ ದೊರೆ, ಸಿದ್ದಲಿಂಗ ನಾಯಕ, ಸದಾಶಿವ ಕಡ್ಲೆವಾಡ, ಮಂಜುನಾಥ್ ನಾಯ್ಕೋಡಿ, ವಿಜಯಕುಮಾರ ಮಲಕಟ್ಟಿ, ಪ್ರಭುದೇವ ನಾಯಕ್ ಸೇರಿ ಸಮುದಾಯದ ಮುಖಂಡರು, ಗ್ರಾಮದ ಪ್ರಮುಖರು, ಗಣ್ಯರು ಭಾಗಿಯಾಗಿದ್ದರು.