ಸಕಾರಾತ್ಮ ಭಾವನೆಗಳಿಂದ ನೆಮ್ಮದಿ ಸಾಧ್ಯ

| Published : May 02 2024, 12:15 AM IST

ಸಕಾರಾತ್ಮ ಭಾವನೆಗಳಿಂದ ನೆಮ್ಮದಿ ಸಾಧ್ಯ
Share this Article
  • FB
  • TW
  • Linkdin
  • Email

ಸಾರಾಂಶ

ದಾಬಸ್‌ಪೇಟೆ: ಧಾರ್ಮಿಕ ಕಾರ್ಯಕ್ರಮಗಳಿಂದಾಗಿ ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ಬೆಳೆದು ಜೀವನದಲ್ಲಿ ನೆಮ್ಮದಿ ಪಡೆಯಲು ಸಹಕಾರಿಯಾಗುತ್ತದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ದಾಬಸ್‌ಪೇಟೆ: ಧಾರ್ಮಿಕ ಕಾರ್ಯಕ್ರಮಗಳಿಂದಾಗಿ ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ಬೆಳೆದು ಜೀವನದಲ್ಲಿ ನೆಮ್ಮದಿ ಪಡೆಯಲು ಸಹಕಾರಿಯಾಗುತ್ತದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಬೂದಿಹಾಳ್ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮಹಾಲಕ್ಷ್ಮೀ ಹಾಗೂ ಮಾರಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜತೆಗೆ ಶಾಂತಿ, ನೆಮ್ಮದಿ ಸಿಗುತ್ತದೆ. ಭಕ್ತಿ ಮನುಷ್ಯನಲ್ಲಿ ಇದ್ದರೆ ಸಾಕು. ನಿತ್ಯ ಒಳ್ಳೆಯ ಮನಸ್ಸಿನಿಂದ ಪೂಜಿಸಿದರೆ, ದೇವರು ಒಲಿಯುತ್ತಾನೆ. ನಾವು ಒಳ್ಳೆಯತನ ರೂಢಿಸಿಕೊಂಡರೆ, ಇತರರಿಗೂ ಉತ್ತಮ. ನಮ್ಮಿಂದ ಸಕಾರಾತ್ಮಕ ಭಾವನೆಗಳು ಸಮಾಜಕ್ಕೆ ರವಾನೆಯಾದರೆ, ಆರೋಗ್ಯಕರ ಸಮಾಜ ನಿರ್ಮಿಸಲು ಸಾಧ್ಯ ಎಂದು ತಿಳಿಸಿದರು.

ಎಪಿಎಂಸಿ ಮಾಜಿ ನಿರ್ದೇಶಕ ಗೋವಿಂದರಾಜು ಮಾತನಾಡಿ, ಆಧುನಿಕ ವ್ಯವಸ್ಥೆಯಲ್ಲಿ ನಾವೆಲ್ಲರೂ ಒತ್ತಡದ ಜೀವನ ನಡೆಸುತ್ತಿದ್ದೇವೆ. ಮನಸ್ಸಿಗೆ ಶಾಂತಿ ನೆಮ್ಮದಿ ಇಲ್ಲದಂತಾಗಿದೆ. ನಮ್ಮ ಮನಸ್ಸು ಹಗುರವಾಗಲು ಸಮಾಧಾನ ಜೀವನ ಸಾಗಿಸಲು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಅವಶ್ಯವಿದೆ ಎಂದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಅಕ್ಕಪಕ್ಕದ ಗ್ರಾಮಸ್ಥರು ಉಪಸ್ಥಿತರಿದ್ದರು.ಪೋಟೋ 5 : ಬೂದಿಹಾಳ್ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮಹಾಲಕ್ಷ್ಮೀ ಹಾಗೂ ಮಾರಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಶಾಸಕ ಎನ್.ಶ್ರೀನಿವಾಸ್ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.