ಧಾರ್ಮಿಕ ಆಚರಣೆಗಳಿಂದ ಮನುಷ್ಯನಿಗೆ ಶಾಂತಿ, ನೆಮ್ಮದಿ ಲಭಿಸುತ್ತದೆ ಎಂಬ ನಂಬಿಕೆ ಹಿಂದಿನಿಂದಲೂ ನಡೆದು ಬಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಆರ್‌.ರಾಜೇಂದ್ರ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಮಧುಗಿರಿ

ಧಾರ್ಮಿಕ ಆಚರಣೆಗಳಿಂದ ಮನುಷ್ಯನಿಗೆ ಶಾಂತಿ, ನೆಮ್ಮದಿ ಲಭಿಸುತ್ತದೆ ಎಂಬ ನಂಬಿಕೆ ಹಿಂದಿನಿಂದಲೂ ನಡೆದು ಬಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಆರ್‌.ರಾಜೇಂದ್ರ ಅಭಿಪ್ರಾಯಪಟ್ಟರು.

ಮಂಗಳವಾರ ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಿದ್ದ 28ನೇ ವರ್ಷದ ಅದ್ಧೂರಿ ವೈಕುಂಠ ಏಕಾದಶಿ ಪ್ರಯುಕ್ತ ದೇವಸ್ಥಾನಕ್ಕೆ ಬೇಟಿ ನೀಡಿ ವಿವಿಧ ಪೂಜಾ ಕಂಕೈರ್ಯಗಳಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಿ ಜನತೆಯ ಹಿತ ,ಸಂರಕ್ಷಣೆ ,ಸುಖ,ಶಾಂತಿ ,ನೆಮ್ಮದಿ ನೆಲಸಲೆಂದು ಮತ್ತು ಮಳೆ ,ಬೆಳೆ ಚನ್ನಾಗಿ ಆಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ಈ ವೇಳೆ ಪುರಸಭೆ ಮಾಜಿ ಅಧ್ಯಕ್ಷರಾದ ಎಂ.ಕೆ.ನಂಜುಂಡರಾಜು,ಎನ್‌.ಗಂಗಣ್ಣ, ಲಾಲಪೇಟೆ ಮಂಜುನಾಥ್, ಎಂ.ವಿ.ಗೋವಿಂದರಾಜು,ಧಾರ್ಮಿಕ ಮುಖಂಡ ಡಾ.ಎಂ.ಜಿ.ಶ್ರೀನಿವಾಸಮೂರ್ತಿ,ಮುಖಂಡರಾದ ದೋಲಿಬಾಬು,ರಘು ಯಾದವ್ ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಬೆಳಗಿನ ಜಾವ 4 ರಿಂದಲೇ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನಿತರಾಗುವ ದೃಶ್ಯ ಕಂಡು ಬಂದಿತು. ಭಕ್ತಾದಿಗಳಿಗೆ ಪ್ರಸಾದ ಲಡ್ಡು ವಿತರಿಸಿದರು.