ಸಾರಾಂಶ
ತುರುವೇಕೆರೆ: ಪಟ್ಟಣಕ್ಕೆ ಹೊಂದಿಕೊಂಡಂತಿರುವ ಹಾವಾಳ ಗ್ರಾಮದಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಗುದ್ದಿದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ತುರುವೇಕೆರೆ: ಪಟ್ಟಣಕ್ಕೆ ಹೊಂದಿಕೊಂಡಂತಿರುವ ಹಾವಾಳ ಗ್ರಾಮದಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಗುದ್ದಿದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಹಾವಾಳ ಗ್ರಾಮದ ಕೃಷ್ಣೇಗೌಡ(೫೦) ಎಂದು ಗುರುತಿಸಲಾಗಿದೆ. ಮೃತರು ಮಂಗಳವಾರ ಮುಂಜಾನೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವಾಗ ತುರುವೇಕೆರೆಯಿಂದ ತಿಪಟೂರು ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಅಡ್ಡವಾಗಿ ನಾಯಿ ಬಂದಿದೆ. ನಾಯಿಯನ್ನು ತಪ್ಪಿಸುವ ಭರದಲ್ಲಿ ಬೈಕ್ ಸವಾರ ರಸ್ತೆ ಬದಿಯಲ್ಲಿ ತೆರಳುತ್ತಿದ್ದ ಪಾದಚಾರಿ ಕೃಷ್ಣೇಗೌಡರಿಗೆ ಗುದ್ದಿದ್ದಾನೆ. ಪರಿಣಾಮ ಕೆಳಕ್ಕೆ ಬಿದ್ದ ಕೃಷ್ಣೇಗೌಡರ ತಲೆಗೆ ತೀವ್ರಪೆಟ್ಟು ಬಿದ್ದು ರಕ್ತಸ್ರಾವವಾಗಿದೆ.ಸಾರ್ವಜನಿಕರು ಕೂಡಲೇ ಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದಾದರೂ ಮಾರ್ಗ ಮಧ್ಯೆ ಕೃಷ್ಣೇಗೌಡ ಸಾವನ್ನಪ್ಪಿದರು. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.