ಈಗಾಗಲೇ ವರ್ಷ ಪೂರೈಸಿರುವ ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ಸಮರಕ್ಕೆ ಕೂಡಲೇ ಕದನ ವಿರಾಮ ಘೋಷಿಸಬೇಕು. ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಮತ್ತು ಉಭಯ ದೇಶಗಳು ಮಾತುಕತೆ ಮತ್ತು ರಾಜತಾಂತ್ರಿಕತೆ ಹಾದಿಗೆ ಮರಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಆಗ್ರಹಿಸಿದ್ದಾರೆ.

ಪಿಟಿಐ ನ್ಯೂಯಾರ್ಕ್‌

ಈಗಾಗಲೇ ವರ್ಷ ಪೂರೈಸಿರುವ ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ಸಮರಕ್ಕೆ ಕೂಡಲೇ ಕದನ ವಿರಾಮ ಘೋಷಿಸಬೇಕು. ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಮತ್ತು ಉಭಯ ದೇಶಗಳು ಮಾತುಕತೆ ಮತ್ತು ರಾಜತಾಂತ್ರಿಕತೆ ಹಾದಿಗೆ ಮರಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಆಗ್ರಹಿಸಿದ್ದಾರೆ.

ಸೋಮವಾರ ಇಲ್ಲಿ ಪ್ಯಾಲೆಸ್ತೀನ್‌ ಅಧ್ಯಕ್ಷ ಮಹಮೂದ್‌ ಅಬ್ಬಾಸ್‌ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾನಿ, ಗಾಜಾ ಪಟ್ಟಿ ಪ್ರದೇಶದಲ್ಲಿನ ಮಾನವೀಯ ಬಿಕ್ಕಟ್ಟು ಮತ್ತು ವಲಯದಲ್ಲಿನ ಭದ್ರತಾ ಪರಿಸ್ಥಿತಿ ಕುಸಿಯುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಜೊತೆಗೆ ಪ್ಯಾಲೆಸ್ತೀನ್‌ ಜನರಿಗೆ ಭಾರತದ ಅಚಲ ಬೆಂಬಲ ವ್ಯಕ್ತಪಡಿಸಿದರಲ್ಲದೆ, ಮಾನವೀಯ ನೆರವು ಮುಂದುವರೆಸುವ ಭರವಸೆ ನೀಡಿದರು.

ಜೊತೆಗೆ, ಇಸ್ರೇಲ್‌- ಪ್ಯಾಲೆಸ್ತೀನ್‌ ಬಿಕ್ಕಟ್ಟು ಇತ್ಯರ್ಥ ಪಡಿಸಿ ಶಾಂತಿ ಪುನರ್‌ಸ್ಥಾಪನೆಯಲ್ಲಿ ಎರಡು- ದೇಶ ರಚನೆಗಳ ತತ್ವವನ್ನು ಭಾರತ ಈಗಲೂ ಬೆಂಬಲಿಸುತ್ತದೆ. ಜೊತೆಗೆ ಕೂಡಲೇ ಕದನ ವಿರಾಮಕ್ಕೆ ಆಗ್ರಹಿಸುತ್ತದೆ. ಸಂಘರ್ಷದ ವೇಳೆ ಒತ್ತೆಯಾಳಾಗಿರುವವರನ್ನು ಕೂಡಲೇ ಬಿಡುಗಡೆ ಮಾಡಬೇಕು, ಸಂವಾದ ಮತ್ತು ರಾಜತಾಂತ್ರಿಕ ಮಾರ್ಗಕ್ಕೆ ಮರಳಬೇಕು ಎಂದು ಒತ್ತಾಯಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

ಜೊತೆಗೆ ಪ್ರತ್ಯೇಕ ಪ್ಯಾಲೆಸ್ತೀನ್‌ ದೇಶಕ್ಕೆ ಮಾನ್ಯತೆ ನೀಡಿದ ಮೊದಲಿಗ ದೇಶಗಳ ಪೈಕಿ ಭಾರತ ಕೂಡಾ ಒಂದು. ಅಲ್ಲದೆ, ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್‌ ಸದಸ್ಯತ್ವಕ್ಕೆ ಭಾರತ ತನ್ನ ಬೆಂಬಲ ಮುಂದುವರೆಸುತ್ತದೆ ಎಂದು ಇದೇ ವೇಳೆ ಮೋದಿ ನೆನಪಿಸಿಕೊಂಡರು.

==

ಮೋದಿಗೆ ಅಮೆರಿಕ ಸಿಖ್ಖರ ಧನ್ಯವಾದ: ರಾಹುಲ್‌ಗೆ ಟಾಂಗ್‌

ವಾಷಿಂಗ್ಟನ್‌: ‘ಭಾರತದಲ್ಲಿ ಸಿಖ್ಖರ ಧಾರ್ಮಿಕ ಸ್ವಾತಂತ್ರ್ಯ ಕಸಿದುಕೊಳ್ಳಲಾಗಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಇತ್ತೀಚೆಗೆ ಅಮೆರಿಕದ ಭೇಟಿ ವೇಳೆ ಆರೋಪ ಮಾಡಿದ್ದರೆ, ಅಮೆರಿಕದ ಸಿಖ್‌ ಸಮುದಾಯದ ನಿಯೋಗವೊಂದು ಸೋಮವಾರ ಇಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಅವರಿಗೆ ಧನ್ಯವಾದ ಸಮರ್ಪಿಸಿತು.‘ಮೋದಿ ಅವರು ಹಿಂದಿನ ಯಾವುದೇ ಪ್ರಧಾನಿ ಮಾಡದಷ್ಟು ಕೆಲಸವನ್ನು ಸಿಖ್‌ ಸಮುದಾಯಕ್ಕೆ ಮಾಡಿದ್ದಾರೆ. ಅದು ಕರ್ತಾರ್‌ಪುರ ಕಾರಿಡಾರ್ ನಿರ್ಮಾಣ ಇರಬಹುದು, ಗುರುನಾನಕ್‌ರ 550 ಜನ್ಮದಿನಾಚರಣೆ ಇರಬಹುದು, ಕಪ್ಪುಪಟ್ಟಿಯಿಂದ ಸಿಖ್ಖರ ಹೆಸರು ತೆಗೆದು ಹಾಕುವ ಕ್ರಮವಿರಬಹುದು, 1984ರ ಸಿಖ್‌ ವಿರೋಧಿ ಹತ್ಯಾಕಾಂಡದಲ್ಲಿ ಮಡಿದವರಿಗೆ ನೆರವಾಗುವುದರಿರಬಹುದು. ಅವರು ಸಿಖ್ ಸಮುದಾಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ’ ಎಂದು ನಿಯೋಗದ ಭಾಗವಾಗಿದ್ದ ಹಲವು ನಾಯಕರು ಕೃತಜ್ಞತೆ ಸಲ್ಲಿಸಿದ್ದಾರೆ.