ಪೆನ್‌ಡ್ರೈವ್ ಕೇಸ್: ಮನುಷ್ಯ ಕುಲಕ್ಕೆ ಅಪಚಾರ

| Published : May 03 2024, 01:07 AM IST

ಸಾರಾಂಶ

ಹಾಸನದಲ್ಲಿ ನಡೆದಿದೆ ಎನ್ನಲಾದ ಪೆನ್‌ಡ್ರೈವ್ ಪ್ರಕರಣದಲ್ಲಿ ಮಹಿಳೆಯರ ಮಾನ ಹರಾಜಾಗುತ್ತಿದ್ದು, ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಹಾಸನದಲ್ಲಿ ನಡೆದಿದೆ ಎನ್ನಲಾದ ಪೆನ್‌ಡ್ರೈವ್ ಪ್ರಕರಣದಲ್ಲಿ ಮಹಿಳೆಯರ ಮಾನ ಹರಾಜಾಗುತ್ತಿದ್ದು, ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಭುವನೇಶ್ವರಿ ವೃತ್ತದಲ್ಲಿ ಗುರುವಾರ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ರಸ್ತೆ ತಡೆ ನಡೆಸಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಹಾಸನದ ಪೆನ್‌ಡ್ರೈವ್ ಪ್ರಕರಣ ದೇಶ, ವಿದೇಶಗಳಲ್ಲಿ ತಲೆ ತಗ್ಗಿಸುವ ವಿಚಾರವಾಗಿದೆ. ಇದು ಮನುಷ್ಯ ಕುಲಕ್ಕೆ ಮಾಡಿದ ಅಪಚಾರವಾಗಿದೆ. ಮಹಿಳೆಯರ ಮೇಲೆ ದೌರ್ಜನ್ಯ ಮಾಡಿರುವವರ ವಿರುದ್ಧ ತನಿಖೆಯಾಗಿ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು. ಹಾಸನದಲ್ಲಿ ನೂರಾರು ಮಹಿಳೆಯರ ಮಾನ ಹರಾಜಾಗುತ್ತಿದೆ. ಕೂಡಲೇ ಸರ್ಕಾರ ಇದನ್ನು ನಿಲ್ಲಿಸುವ ಕೆಲಸ ಮಾಡಬೇಕು. ಕೇಂದ್ರ ಸರ್ಕಾರ ಕೂಡ ಮಧ್ಯ ಪ್ರವೇಶಿಸಿ ಹಾಸನ ಮಹಿಳೆಯರಿಗೆ ರಕ್ಷಣೆ ಕೊಡಬೇಕು. ಮಹಿಳೆಯರ ಮಾನ ಹರಾಜಿನಿಂದ ಆ ಕುಟುಂಬಗಳಲ್ಲಿ ಅಲ್ಲೋಲ ಕಲ್ಲೋಲ ಆಗುತ್ತಿದೆ ಎಂದರು.ಮಾನವೀಯ ದೃಷ್ಟಿಯಿಂದ ತೆಗೆದುಕೊಂಡು ಆ ಮಹಿಳೆಯರ ಮಾನ ಹಾನಿ ಮಾಡದಂತೆ ಕ್ರಮವಹಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳಿಗೆ ಕಡಿವಾಣ ಹಾಕಬೇಕು. ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ರಾಜಗೋಪಾಲ್, ಗು. ಪುರುಷೋತ್ತಮ್, ಪಣ್ಯದಹುಂಡಿ ರಾಜು, ಶಿವರಾಜ್, ನಾರಾಯಣಸ್ವಾಮಿ, ಶಿವಣ್ಣ, ತಾಂಡವಮೂರ್ತಿ, ಚಾ.ರ.ಕುಮಾರ್, ಆಟೋ ನಾಗೇಶ್, ರವಿಚಂದ್ರಪ್ರಸಾದ್ ಕಹಳೆ, ಪ್ರಕಾಶ್ ಇತರರು ಭಾಗವಹಿಸಿದ್ದರು.