ಸಾರಾಂಶ
ದಾವಣಗೆರೆ ಮಹಾನಗರದಲ್ಲಿ ಮಾ.3ರಿಂದ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಉತ್ತಮ ಗುಣಮಟ್ಟದ, ಫುಲ್ ಹೆಲ್ಮೆಟ್ ಕಡ್ಡಾಯ ಧರಿಸಬೇಕು. ಹಾಫ್ ಹೆಲ್ಮೆಟ್, ಪ್ಲಾಸ್ಟಿಕ್ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡುವ ಸವಾರರಿಗೆ ಕಡ್ಡಾಯವಾಗಿ ದಂಡ ವಿಧಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಎಚ್ಚರಿಸಿದ್ದಾರೆ.
- ದಾವಣಗೆರೆ ದ್ವಿಚಕ್ರ ವಾಹನ ಸವಾರರಿಗೆ ಎಸ್‌ಪಿ ಉಮಾ ಪ್ರಶಾಂತ್ ಎಚ್ಚರಿಕೆ
- - - ಕನ್ನಡಪ್ರಭ ವಾರ್ತೆ ದಾವಣಗೆರೆ ದಾವಣಗೆರೆ ಮಹಾನಗರದಲ್ಲಿ ಮಾ.3ರಿಂದ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಉತ್ತಮ ಗುಣಮಟ್ಟದ, ಫುಲ್ ಹೆಲ್ಮೆಟ್ ಕಡ್ಡಾಯ ಧರಿಸಬೇಕು. ಹಾಫ್ ಹೆಲ್ಮೆಟ್, ಪ್ಲಾಸ್ಟಿಕ್ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡುವ ಸವಾರರಿಗೆ ಕಡ್ಡಾಯವಾಗಿ ದಂಡ ವಿಧಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಎಚ್ಚರಿಸಿದರು.ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ.ಸಂತೋಷ, ಜಿ.ಮಂಜುನಾಥ, ನಗರ ಡಿವೈಎಸ್ಪಿ ಶರಣ ಬಸವರೇಶ್ವರ ಮಾರ್ಗದರ್ಶನದಲ್ಲಿ ಸಂಚಾರ ಪೊಲೀಸ್ ಠಾಣೆ ಸಿಪಿಐ ಮಂಜುನಾಥ ನಲವಾಗಲು ನೇತೃತ್ವದಲ್ಲಿ ದಾವಣಗೆರೆ ಉತ್ತರ ಮತ್ತು ದಕ್ಷಿಣ ಸಂಚಾರ ಠಾಣೆಗಳ ಪಿಎಸ್ಐಗಳಾದ ಜಯಶೀಲ, ನಿರ್ಮಲಾ, ಶೈಲಜಾ ಹಾಗೂ ಮಂಜಪ್ಪ ಹಾಗೂ ಸಿಬ್ಬಂದಿ ಸೋಮವಾರದಿಂದ ಕಾರ್ಯಾಚರಣೆ ಕೈಗೊಳ್ಳುವರು ಎಂದು ತಿಳಿಸಿದ್ದಾರೆ.
ಹಾಫ್ ಹೆಲ್ಮೆಟ್, ಕಳಪೆ ಗುಣಮಟ್ಟದ ಹೆಲ್ಮೆಟ್ ಹಾಗೂ ಪ್ಲಾಸ್ಟಿಕ್ ಹೆಲ್ಮೆಟ್ ಹಾಕಿಕೊಂಡು ಸಂಚರಿಸುವ ಮೋಟಾರ್ ಸೈಕಲ್ ಚಾಲಕರಿಗೆ ಸುರಕ್ಷತಾ ದೃಷ್ಟಿಯಿಂದ ಅವುಗಳನ್ನು ಧರಿಸದಂತೆ ಮತ್ತು ಪ್ಲಾಸ್ಟಿಕ್ ಹೆಲ್ಮೆಟ್, ಹಾಫ್ ಹೆಲ್ಮೆಟ್‌ಗಳ ಬದಲಾಗಿ ಐಎಸ್ಐ ಮಾರ್ಕ್‌ನ ಗುಣಮಟ್ಟದ ಸುರಕ್ಷಿತ ಹೆಲ್ಮೆಟ್ ಧರಿಸಿಕೊಂಡು ದ್ವಿಚಕ್ರ ವಾಹನ ಚಲಾಯಿಸಿ, ಅಪಘಾತದಂತಹ ಸಂದರ್ಭದಲ್ಲಿ ತಮ್ಮ ಜೀವ ಹಾನಿ ತಡೆಯಬೇಕೆಂಬ ಬಗ್ಗೆ ಈಗಾಗಲೇ ಜಾಗೃತಿ, ಅರಿವು ಸಹ ಮೂಡಿಸಲಾಗಿದೆ ಎಂದು ಹೇಳಿದ್ದಾರೆ.- - -
-2ಕೆಡಿವಿಜಿ3: ಉಮಾ ಪ್ರಶಾಂತ.