ಪರವಾನಗಿ ಇಲ್ಲದ, ಶುಚಿತ್ವವಿಲ್ಲದ ಅಂಗಡಿಗಳಿಗೆ ದಂಡ

| Published : Jun 20 2024, 01:06 AM IST

ಸಾರಾಂಶ

ಬೈಲಹೊಂಗಲ: ಪಟ್ಟಣದ ಹೊಟೇಲ್‌ ಹಾಗೂ ರೆಸ್ಟೋರೆಂಟ್‌ಗಳಿಗೆ ಬುಧವಾರ ದಿಢೀರ ಭೇಟಿ ನೀಡಿದ್ದ ಪುರಸಭೆ ಮುಖ್ಯಾಧಿಕಾರಿ ವೀರೇಶ ಹಸಬಿ ಸ್ವಚ್ಚತೆ ಕಾಪಾಡಿಕೊಳ್ಳುವಂತೆ ಎಚ್ಚರಿಕೆಯನ್ನು ನೀಡಿದರು. ಹೊಟೇಲ್‌, ರೆಸ್ಟೋರೆಂಟ್‌, ಬೇಕರಿಗಳಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಬೇಕು.

ಬೈಲಹೊಂಗಲ: ಪಟ್ಟಣದ ಹೊಟೇಲ್‌ ಹಾಗೂ ರೆಸ್ಟೋರೆಂಟ್‌ಗಳಿಗೆ ಬುಧವಾರ ದಿಢೀರ ಭೇಟಿ ನೀಡಿದ್ದ ಪುರಸಭೆ ಮುಖ್ಯಾಧಿಕಾರಿ ವೀರೇಶ ಹಸಬಿ ಸ್ವಚ್ಚತೆ ಕಾಪಾಡಿಕೊಳ್ಳುವಂತೆ ಎಚ್ಚರಿಕೆಯನ್ನು ನೀಡಿದರು. ಹೊಟೇಲ್‌, ರೆಸ್ಟೋರೆಂಟ್‌, ಬೇಕರಿಗಳಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಬೇಕು. ಮಳೆಗಾಲ ಆರಂಭವಾಗಿದ್ದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿದ್ದು, ಆರೋಗ್ಯದ ಹಿತದೃಷ್ಟಿಯಿಂದ ಗ್ರಾಹಕರಿಗೆ ಶುದ್ದ ಕುಡಿಯುವ ನೀರು ಒದಗಿಸಬೇಕು. ಅಡುಗೆ ಮನೆಗಳನ್ನು ಶುಚಿಯಾಗಿಟ್ಟುಕೊಳ್ಳಬೇಕು. ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯಬಾರದು. ತ್ಯಾಜ್ಯ ವಿಂಗಡಿಸಿ ಕಸ ಸಂಗ್ರಹಿಸುವ ವಾಹನಕ್ಕೆ ನೀಡಬೇಕು ಎಂದು ಸೂಚನೆ ನೀಡಿದರು.

ಶುಚಿತ್ವ ಕಾಪಾಡದ ಮತ್ತು ವ್ಯಾಪಾರ ಪರವಾನಿಗೆ ಪಡೆಯದಿರುವ, ಪರವಾನಗಿ ನವೀಕರಣ ಮಾಡಿಕೊಳ್ಳದ ಅಂಗಡಿ ಮಾಲೀಕರಿಗೆ ಈ ವೇಳೆ ದಂಡ ವಿಧಿಸಲಾಯಿತು. ನಿಷೇದಿತ ಪ್ಲಾಸ್ಟಿಕ್‌ ವಸ್ತುಗಳನ್ನು ಜಪ್ತಿ ಮಾಡಲಾಯಿತು.

ಕಿರಿಯ ಆರೋಗ್ಯ ನಿರೀಕ್ಷಕ ಸುರೇಶ ಪಾಟೀಲ, ಬಿ.ಐ.ಗುಡಿಮನಿ ಹಾಗೂ ಪುರಸಭೆ ಸಿಬ್ಬಂದಿ ಭಾಗವಹಿಸಿದ್ದರು.