ಸಾರಾಂಶ
ಬೆಂಗಳೂರು : ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಉಜಿನಿ ಜಲಾಶಯದಿಂದ ಭೀಮಾ ನದಿಗೆ 3.55 ಲಕ್ಷ ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ. ಇದರಿಂದಾಗಿ ಭೀಮಾನದಿಯಲ್ಲಿ ಪ್ರವಾಹ ಉಂಟಾಗಿದ್ದು, ತೀರದ ಜನತೆಯ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಈ ಮಧ್ಯೆ, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಗುರುವಾರ ತಡರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಜನರು ಮತ್ತಷ್ಟು ಆತಂಕಕ್ಕೆ ಸಿಲುಕಿದ್ದಾರೆ. ಇಲ್ಲಿನ ಜನರು ಆತಂಕದಲ್ಲಿ ಕಳೆಯುವಂತಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ದೇವಣಗಾಂವ ಸಮೀಪದ ಸೊನ್ನ ಬ್ಯಾರೇಜ್‌ನಿಂದ 28 ಗೇಟ್ ಮೂಲಕ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಇದರಿಂದಾಗಿ ವಿಜಯಪುರ ಜಿಲ್ಲೆಯಲ್ಲಿ 13ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದ್ದು, 55ಕ್ಕೂ ಹೆಚ್ಚು ಕುಟುಂಬಗಳನ್ನು ರಕ್ಷಿಸಿ, ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.
ಕಲಬುರಗಿ ಜಿಲ್ಲೆಯಲ್ಲೂ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ಭೀಮಾ ನದಿಯ ಕೆಳ ದಂಡೆಯಲ್ಲಿರುವ ಕಲಬುರಗಿಯ ಸಂಭಾವ್ಯ ನೆರೆ ಪೀಡಿತ 94 ಹಳ್ಳಿಗಳಲ್ಲಿ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ. 100 ಕಾಳಜಿ ಕೇಂದ್ರ, 40 ಗೋಶಾಲೆ ತೆರೆಯಲು ಮುಂದಾಗಿದೆ.
ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದ ಭೀಮಾ, ಅಮರ್ಜಾ ನದಿ ಸಂಗಮ ಕ್ಷೇತ್ರ ಸಂಪೂರ್ಣ ಜಲಾವೃತಗೊಂಡಿವೆ. ಈ ಮಧ್ಯೆ, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಗುರುವಾರ ತಡರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ.
;Resize=(128,128))
;Resize=(128,128))