ಆರೋಗ್ಯ ಇಲಾಖೆ ಪರಿಶ್ರಮದಿಂದ ಜನರಿಗೆ ಆರೋಗ್ಯ ಭಾಗ್ಯ: ಸುಮ ಭರಮಣ್ಣ

| Published : Apr 27 2025, 01:30 AM IST

ಆರೋಗ್ಯ ಇಲಾಖೆ ಪರಿಶ್ರಮದಿಂದ ಜನರಿಗೆ ಆರೋಗ್ಯ ಭಾಗ್ಯ: ಸುಮ ಭರಮಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ತಾಲ್ಲೂಕಿನಾದ್ಯಂತ ಈಗಾಗಲೇ ಮಳೆಗಾಲ ಆರಂಭವಾಗುತ್ತಿದ್ದು, ಸುಲಭವಾಗಿ ರೋಗಗಳು ಹರಡಲು ಆರಂಭಿಸಿವೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ರೋಗಗಳು ವ್ಯಾಪಿಸದಂತೆ ಜಾಗ್ರತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರ ಆರೋಗ್ಯವನ್ನು ಸದೃಢಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ.

ನಗರಸಭೆ ಉಪಾಧ್ಯಕ್ಷೆ ಹೇಳಿಕೆ । ವಿಶ್ವ ಮಲೇರಿಯಾ ನಿಯಂತ್ರಣ ಸಂಬಂಧ ಜಾಗೃತಿ ಜಾಥಾ ಕಾರ್‍ಯಕ್ರಮ

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ತಾಲ್ಲೂಕಿನಾದ್ಯಂತ ಈಗಾಗಲೇ ಮಳೆಗಾಲ ಆರಂಭವಾಗುತ್ತಿದ್ದು, ಸುಲಭವಾಗಿ ರೋಗಗಳು ಹರಡಲು ಆರಂಭಿಸಿವೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ರೋಗಗಳು ವ್ಯಾಪಿಸದಂತೆ ಜಾಗ್ರತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರ ಆರೋಗ್ಯವನ್ನು ಸದೃಢಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಆರೋಗ್ಯ ಇಲಾಖೆಯ ಪರಿಶ್ರಮದಿಂದ ನಾವೆಲ್ಲರೂ ಉತ್ತಮ ಆರೋಗ್ಯ ಹೊಂದಿದ್ದೇವೆ ಎಂದು ನಗರಸಭೆ ಉಪಾಧ್ಯಕ್ಷೆ ಸುಮಭರಮಣ್ಣ ತಿಳಿಸಿದರು.

ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶ್ವ ಮಲೇರಿಯಾ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರತಿವರ್ಷ ಆರೋಗ್ಯ ಇಲಾಖೆ ಇಂತಹ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನಡೆಸುವುದರಿಂದ ಎಲ್ಲರೂ ಆರೋಗ್ಯವಂತರಾಗಿದ್ದಾರೆ. ಆರೋಗ್ಯ ಇಲಾಖೆಯ ಸಲಹೆ, ಸೂಚನೆಗಳನ್ನು ಪಾಲಿಸಬೇಕೆಂದರು.

ಎನ್.ಜಯಣ್ಣ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜು ಪ್ರಾಂಶುಪಾಲ ದೇವರಾಜ್ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗ ಈ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ನಗರ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮಲೇರಿಯ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲಾಗಿದೆ. ಜನರ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಬಿ.ತಿಪ್ಫೇಸ್ವಾಮಿ, ಜಿಲ್ಲಾ ಮೇಲ್ವಿಚಾರಕ ಎಂ.ಲೋಕೇಶ್, ಪ್ರತೀಪ್‌ಕುಮಾರ್, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಸಿ.ಎಂ.ಅಮೃತ್‌ರಾಜ್, ಬಿ.ಎಸ್.ರಾಜು, ಸಂಜಯ್‌ಕುಮಾರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೆಂಕಟೇಶ್, ಆಶಾ ಮೆಂಟರ್ ರಶ್ಮಿ, ಒ.ಸೌಭಾಗ್ಯಮ್ಮ, ಭಾಗ್ಯಮ್ಮ, ಅನಿತಾ, ವಿದ್ಯಾಶ್ರೀ, ಸುಶೀಲಮ್ಮ ಮುಂತಾದವರು ಇದ್ದರು.