ಸಾರಾಂಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್, ರಾಜ್ಯದಲ್ಲಿ ನಡೆಯುತ್ತಿರುವ ಅಮಾನುಷ ಹತ್ಯೆಗಳ ನೈತಿಕ ಹೊಣೆ ಹೊರಬೇಕು. ಈ ನಿಟ್ಟಿನಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಯಿರುವ ಗೃಹ ಸಚಿವರು ತಕ್ಷಣ ರಾಜೀನಾಮೆ ಸಲ್ಲಿಸಿ, ಈ ಹತ್ಯೆಯ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಕೆ.ಉದಯ್ ಕುಮಾರ್  ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಮಾದರಿಯಲ್ಲೇ, ಅಂಜಲಿ ಎಂಬ ಯುವತಿಯನ್ನು ಹುಬ್ಬಳ್ಳಿಯ ವೀರಪುರ ಓಣಿಯಲ್ಲಿ ಕೊಲೆ ಮಾಡಲಾಗಿದೆ. ಇದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದಕ್ಕೆ ಸಾಕ್ಷಿ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಜನತೆಗೆ ಅಸುರಕ್ಷತೆ ಕಾಡುತ್ತಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ್ ಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ.ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗ್ಯಾರಂಟಿಗಳನ್ನು ಜಾರಿಗೆ ತರುವುದರಲ್ಲಿ ಅರ್ಥಿಕವಾಗಿ ಸೋತಿರುವ ಸರ್ಕಾರ, ರಾಜ್ಯದ ಅಭಿವೃದ್ಧಿಯನ್ನು ಮರೆತಿದೆ. ಕನಿಷ್ಠ ಪಕ್ಷ ರಾಜ್ಯದ ಜನತೆಯ ಪ್ರಾಣ ರಕ್ಷಣೆಗೆ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ನೇಹಾ ಹತ್ಯೆ ಪ್ರಕರಣವನ್ನು ಸಾಮಾನ್ಯ ಘಟನೆ ಎಂದಿರುವ ಗೃಹ ಸಚಿವರು ಮತ್ತು ಸರ್ಕಾರದ ಲಘು ಹೇಳಿಕೆಗಳು ಹಾಗೂ ಆರೋಪಿಯ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಿರುವುದು, ಇಂತಹ ಹೇಯ ಕೃತ್ಯಗಳ ಪುನರಾವರ್ತನೆಗೆ ಮುಖ್ಯ ಕಾರಣವಾಗಿದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್, ರಾಜ್ಯದಲ್ಲಿ ನಡೆಯುತ್ತಿರುವ ಅಮಾನುಷ ಹತ್ಯೆಗಳ ನೈತಿಕ ಹೊಣೆ ಹೊರಬೇಕು. ಈ ನಿಟ್ಟಿನಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಯಿರುವ ಗೃಹ ಸಚಿವರು ತಕ್ಷಣ ರಾಜೀನಾಮೆ ಸಲ್ಲಿಸಿ, ಈ ಹತ್ಯೆಯ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಕಚೇರಿಯ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಮತ್ತು ವಕ್ತಾರ ವಿಜಯಕುಮಾರ್ ಉದ್ಯಾವರ ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))