ಕಾಂಗ್ರೆಸ್ ತತ್ವ, ಸಿದ್ಧಾಂತಗಳಿಗೆ ನಂಬಿಕೆ ಇಟ್ಟು ಯಾವುದೇ ಪಕ್ಷದವರು ಕಾಂಗ್ರೆಸ್‌ಗೆ ಮುಕ್ತವಾಗಿ ಆಹ್ವಾನಿಸುತ್ತೇನೆ. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದ ಜನಪರ ಆಡಳಿತ, ಅಭಿವೃದ್ಧಿ ಕೆಲಸ ಮೆಚ್ಚಿ ಅನ್ಯ ಪಕ್ಷದವರು ಕಾಂಗ್ರೆಸ್ ಸೇರಿದ್ದಾರೆ.

ಕನ್ನಡಪ್ರಭ ವಾರ್ತೆ ಕೆ.ಎಂ ದೊಡ್ಡಿ

ಮದ್ದೂರು ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಹಲವು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.

ಭಾರತಿನಗರ ಜಿಲ್ಲಾ ವ್ಯಾಪ್ತಿಯ ಎಸ್.ಐ.ಹೊನ್ನಲಗೆರೆ ಗ್ರಾಪಂ ವ್ಯಾಪ್ತಿಯ ಎಚ್.ಹೊಸೂರು ಗ್ರಾಮದ ಜೆಡಿಎಸ್ ಮುಖಂಡ ಮಹೇಶ್ ನೇತೃತ್ವದಲ್ಲಿ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ಹಾಗೂ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದರು.

ಕಾಂಗ್ರೆಸ್ ತತ್ವ, ಸಿದ್ಧಾಂತಗಳಿಗೆ ನಂಬಿಕೆ ಇಟ್ಟು ಯಾವುದೇ ಪಕ್ಷದವರು ಕಾಂಗ್ರೆಸ್‌ಗೆ ಮುಕ್ತವಾಗಿ ಆಹ್ವಾನಿಸುತ್ತೇನೆ. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದ ಜನಪರ ಆಡಳಿತ, ಅಭಿವೃದ್ಧಿ ಕೆಲಸ ಮೆಚ್ಚಿ ಅನ್ಯ ಪಕ್ಷದವರು ಕಾಂಗ್ರೆಸ್ ಸೇರಿದ್ದಾರೆ ಎಂದರು.

ತಾಲೂಕಿನ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ಸರ್ಕಾರದಿಂದ ಸಾವಿರಾರು ಕೋಟಿ ಅನುದಾನ ತಂದು ಕೆಲಸ ಮಾಡುತ್ತಿದ್ದೇನೆ. ಕಾರ್ಯಕರ್ತರು, ಮುಖಂಡರು ತಳ ಮಟ್ಟದಲ್ಲಿ ಪಕ್ಷ ಸಂಘಟಿಸಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯಪ್ರವತ್ತರಾಗಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಎಚ್.ಹೊಸೂರು ಗ್ರಾಪಂ ಮಾಜಿ ಅಧ್ಯಕ್ಷರಾದ ಮಹೇಶ್ ನಾಗರಾಜು, ಚಿಕ್ಕಿರಯ್ಯ, ರಾಮಣ್ಣ, ಬಸವಲಿಂಗ, ಈರೇಗೌಡ, ಶಿವು, ಎಸ್.ಐ ಹೊನ್ನಲಗೆರೆ ಗ್ರಾಮದ ರಾಜು, ಪುನಿ, ಮರಿಸ್ವಾಮಿ, ಚಿನ್ನಸ್ವಾಮಿ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣೂರು ರಾಜೀವ್, ಮನ್ಮುಲ್ ನಿರ್ದೇಶಕ ಹರಿಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಮುಖಂಡ ಹರೀಶ್ ಪಾಪಣ್ಣ, ಸಿದ್ದರಾಜು ,ನಂದೀಶ್,ಸೇರಿದಂತೆ ಹಲವರು ಉಪಸ್ಥಿತರಿದ್ದರು.