ಕನ್ನಡಪ್ರಭ ವಾರ್ತೆ ವಿಜಯಪುರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ರವರ ನೇತೃತ್ವದಲ್ಲಿ ನಡೆದ ರಾಜ್ಯದ ಎರಡು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ರವರ ನೇತೃತ್ವದಲ್ಲಿ ನಡೆದ ರಾಜ್ಯದ ಎರಡು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಹೇಳಿದರು.ಈ ಕುರಿತು ಪ್ರಕಟಣೆ ನೀಡಿದ ಅವರು, ಯಾರು ಏನೇ ಹೇಳಿದರು ಕಾಂಗ್ರೆಸ್ ಪಕ್ಷದ ಮೇಲೆ ರಾಜ್ಯದ ಜನರು ನಂಬಿಕೆಯಿಟ್ಟಿದ್ದಾರೆ ಎಂಬುದಕ್ಕೆ ಈ ಎರಡೂ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿರುವುದೇ ಸಾಕ್ಷಿಯಾಗಿವೆ. ಬಾಗಲಕೋಟೆ ಹಾಗೂ ದಾವಣಗೆರೆ ಈ ಎರಡೂ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್ ನ ಕೈ ಬಿಟ್ಟಿಲ್ಲ. ಚುನಾವಣೆ ವೇಳೆ ಯಾರೇ ಏನೇ ಕಿತಾಪತಿ ಮಾಡಿದರೂ ಸಹ ಅಲ್ಪಸಂಖ್ಯಾತರು ಕಾಂಗ್ರೆಸ್ ಕಡೆಗೆ ಇದ್ದಾರೆ ಎಂಬುದು ಸಾಬೀತಾಗಿದೆ. ರಾಜ್ಯದ ಜನರು ಆಶೀರ್ವದಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಕೈ ಬಲಪಡಿಸಿದ್ದಾರೆ ಎಂದು ಎಸ್.ಎಂ.ಪಾಟೀಲ ಗಣಿಹಾರ ತಿಳಿಸಿದ್ದಾರೆ.