ಸಾರಾಂಶ
ಇಡಿ ವಿಶ್ವದಲ್ಲಿ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ಅನುಸರಿಸುತ್ತಿರುವ ಏಕೈಕ ಅತಿದೊಡ್ಡ ರಾಜಕೀಯ ಪಕ್ಷ ಎಂದರೆ ಅದು ಬಿಜೆಪಿ. ದೇಶದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎನ್ನುವುದು ಸ್ಪಷ್ಟವಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿದರು.
ಕಾರವಾರ: ಬಿಜೆಪಿ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿರುವುದರಿಂದ ಜನತೆ ಪಕ್ಷದ ಮೇಲೆ ಭರವಸೆ ಇಟ್ಟಿದ್ದಾರೆ. ಸದಸ್ಯತ್ವವನ್ನು ಹೆಚ್ಚಿಸುವ ಮೂಲಕ ಪಕ್ಷವನ್ನು ಮತ್ತಷ್ಟು ಪ್ರಬಲಗೊಳಿಸುವ ಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆ ನೀಡೋಣ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ವಿನಂತಿಸಿದರು.
ಸೋಮವಾರ ಅವರು ಭಟ್ಕಳ, ಹೊನ್ನಾವರ ಹಾಗೂ ಕುಮಟಾ ತಾಲೂಕುಗಳಲ್ಲಿ ಬಿಜೆಪಿಯ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು. ಇಡಿ ವಿಶ್ವದಲ್ಲಿ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ಅನುಸರಿಸುತ್ತಿರುವ ಏಕೈಕ ಅತಿದೊಡ್ಡ ರಾಜಕೀಯ ಪಕ್ಷ ಎಂದರೆ ಅದು ಬಿಜೆಪಿ. ದೇಶದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎನ್ನುವುದು ಸ್ಪಷ್ಟವಾಗಿದೆ. ದೇಶದ ಕೋಟಿ ಕೋಟಿ ಜನರು ಬಿಜೆಪಿಗೆ ತಮ್ಮ ಹೃದಯದಲ್ಲಿ ಸ್ಥಾನ ನೀಡಿದ್ದಾರೆ. ಪಕ್ಷ ನಮಗೆ ಒಂದು ಕುಟುಂಬ ಇದ್ದಂತೆ. ಆ ಕುಟುಂಬವನ್ನು ಇನ್ನಷ್ಟು ಹಿರಿದಾಗಿಸಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.ಪ್ರಧಾನಿ ನರೇಂದ್ರ ಮೋದಿ ಅವರ ಅವಿಶ್ರಾಂತ ದುಡಿಮೆ, ದೇಶಕ್ಕಾಗಿ ಸಲ್ಲಿಸುತ್ತಿರುವ ಸೇವೆಯಿಂದ ಇಡಿ ಜಗತ್ತು ಭಾರತದತ್ತ ನೋಡುತ್ತಿದೆ. ಪಕ್ಷವನ್ನು ಅಭೂತಪೂರ್ವವಾಗಿ ಸಂಘಟಿಸಿ ಮೋದಿ ಅವರಿಗೆ ಮತ್ತಷ್ಟು ಶಕ್ತಿ ತುಂಬೋಣ ಎಂದು ತಿಳಿಸಿದರು.
ಕಾರ್ಯಕರ್ತರೇ ಪಕ್ಷಕ್ಕೆ ದೊಡ್ಡ ಆಸ್ತಿ. ಕಾರ್ಯಕರ್ತರು ಉತ್ಸಾಹದಿಂದ ಈ ಅಭಿಯಾನದಲ್ಲಿ ತೊಡಗಿಕೊಂಡಿದ್ದಾರೆ. ಸದಸ್ಯತ್ವ ಅಭಿಯಾನದಲ್ಲಿ ಕಾರ್ಯಕರ್ತರ ಜವಾಬ್ದಾರಿ ತುಂಬ ದೊಡ್ಡದು. ಸದಸ್ಯತ್ವ ಸಂಖ್ಯೆಯನ್ನು ಹೆಚ್ಚಿಸಲು ನಿರಂತರವಾಗಿ ತೊಡಗಿಕೊಳ್ಳುವಂತೆ ವಿನಂತಿಸಿದರು.ಕುಮಟಾ ಶಾಸಕ ದಿನಕರ ಶೆಟ್ಟಿ, ಭಟ್ಕಳ ಮಂಡಲದ ಅಧ್ಯಕ್ಷ ಲಕ್ಷ್ಮೀನಾರಾಯಣ, ಜಿಲ್ಲಾ ಮುಖಂಡರಾದ ಗೋವಿಂದ ನಾಯ್ಕ, ಸಂಜಯ ನಾಯ್ಕ, ಜಿ.ಐ. ಹೆಗಡೆ ಮತ್ತಿತರರು ಇದ್ದರು.