ಸಾರಾಂಶ
ದಾಬಸ್‌ಪೇಟೆ: ತೋಟದ ಮನೆಯಲ್ಲಿ ನೀರು ಕುಡಿಯಲು ಮಾಜಿ ಶಾಸಕರು ಗ್ರಾಪಂ ಅನುದಾನ ಬಳಕೆ ಮಾಡಿಕೊಂಡು ನೀರಿನ ಬಾಟಲ್ ತರಿಸಿಕೊಂಡಿರುವ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮಟ್ಟಕ್ಕೆ ಸಾರ್ವಜನಿಕ ಅನುದಾನ ದುರ್ಬಳಕೆ ಮಾಡಿಕೊಂಡ ವ್ಯಕ್ತಿ ನಮ್ಮ ಅಭಿವೃದ್ಧಿ ಕೆಲಸಗಳ ಬಗ್ಗೆ ಟೀಕೆ ಮಾಡುತ್ತಾರೆ ಎಂದು ಶಾಸಕ ಎನ್.ಶ್ರೀನಿವಾಸ್ ತಿರುಗೇಟು ನೀಡಿದರು. ತ್ಯಾಮಗೊಂಡ್ಲು ಹೋಬಳಿಯ ಬಳ್ಳಗೆರೆ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಮಾಜಿ ಶಾಸಕರು ನಮ್ಮ ಅಭಿವೃದ್ಧಿ ಕೆಲಸಗಳ ಬಗ್ಗೆ ಟೀಕೆ ಮಾಡಿ ಅನುದಾನದ ಪ್ರಶ್ನೆ ಮಾಡಿದ್ದರು. ಆದರೆ ಸಾಮಾಜಿಕ ಜಾಲತಾಣದಲ್ಲಿ ಜನರು ಅವರಿಗೆ ಕುಡಿಯುವ ನೀರಿನ ಬಾಟಲ್‌ಗಳಿಗೂ ಪಂಚಾಯಿತಿ ಅನುದಾನ ಪಡೆದಿರುವ ಮಾಹಿತಿ ನೀಡಿ ಅವರ 10 ವರ್ಷದ ಆಡಳಿತ ವೈಖರಿ ಬಗ್ಗೆ ತಿಳಿಸಿದ್ದಾರೆ. ನಾವು ಯಾರ ಬಗ್ಗೆಯೂ ಮಾತನಾಡುವುದಿಲ್ಲ, ಜನರು ಕೂಡ ಯಾರು ಜನಪರ ಕೆಲಸ ಮಾಡುತ್ತಾರೆ ಎಂಬುದನ್ನು ಸೂಕ್ತವಾಗಿ ನೋಡಿ ತೀರ್ಪು ನೀಡುತ್ತಾರೆ ಎಂದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್, ಗ್ರಾಪಂ ಅಧ್ಯಕ್ಷ ಅಂಜನಮೂರ್ತಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.ಪೋಟೋ 5 :
ತ್ಯಾಮಗೊಂಡ್ಲು ಹೋಬಳಿಯ ಬಳ್ಳಗೆರೆ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಶ್ರೀನಿವಾಸ್ ಗುದ್ದಲಿಪೂಜೆ ನೆರವೇರಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))