ಬಿಜೆಪಿ ದ್ವೇಷದ ರಾಜಕಾರಣ ದೇಶದ ಜನತೆ ಗಹಿಸುತ್ತಿದೆ: ಸಲೀಂ ಅಹ್ಮದ್

| Published : Feb 19 2024, 01:30 AM IST

ಬಿಜೆಪಿ ದ್ವೇಷದ ರಾಜಕಾರಣ ದೇಶದ ಜನತೆ ಗಹಿಸುತ್ತಿದೆ: ಸಲೀಂ ಅಹ್ಮದ್
Share this Article
  • FB
  • TW
  • Linkdin
  • Email

ಸಾರಾಂಶ

ಬಜೆಟ್ ಮಂಡನೆಗೂ ಮೊದಲೇ ಬಿಜೆಪಿ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದು ದುರಂತ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕಿಡಿಕಾರಿದರು

ಕನ್ನಡಪ್ರಭ ವಾರ್ತೆ ಹಿರಿಯೂರು

ಲೋಕಸಭಾ ಚುನಾವಣೆಯ ಸೋಲಿನ ಭಯದಿಂದ ಕಾಂಗ್ರೆಸ್ ಪಕ್ಷದ ಖಾತೆ ಸೀಜ್ ಮಾಡುವ ಮೂಲಕ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದ್ದು ಇದನ್ನು ದೇಶದ ಜನತೆ ಗಮನಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.

ತಾಲೂಕಿನ ಗುಯಿಲಾಳು ಟೋಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಉತ್ತಮ ಬಜೆಟ್ ಮಂಡನೆ ಮಾಡಿದ್ದಾರೆ. ಆದರೆ ಬಜೆಟ್ ಮಂಡನೆಗೂ ಮೊದಲೇ ಬಿಜೆಪಿ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದು ದುರಂತ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಈ ಹಿಂದೆ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನಮ್ಮ ಪಕ್ಷ ಐದು ಗ್ಯಾರಂಟಿ ಯೋಜನೆ ಘೋಷಿಸಿತ್ತು. ಸರ್ಕಾರ ಜಾರಿಗೆ ಬಂದ ಕೂಡಲೇ 8ತಿಂಗಳಲ್ಲಿ ನುಡಿದಂತೆ ನಡೆಯುವ ಮೂಲಕ ಐದು ಐತಿಹಾಸಿಕ ಗ್ಯಾರಂಟಿ ಯೋಜನೆ ರಾಜ್ಯದ ಜನತೆಗೆ ತಲುಪಿಸುವಲ್ಲಿ ನಮ್ಮ ಸರ್ಕಾರ ಐತಿಹಾಸಿಕ ಸಾಧನೆ ಮಾಡಿದೆ. ಕೋಟಿಗಟ್ಟಲೆ ಮಹಿಳೆಯರು ಬಸ್ಸನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇಂತಹ ಕ್ರಾಂತಿಕಾರಿ ಯೋಜನೆಗಳಿಂದ ಜನತೆ ಸಂತೋಷವಾಗಿದ್ದಾರೆ. ಇದರಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು ಲೋಕಸಭಾ ಕ್ಷೇತ್ರದಿಂದ ಡಾಲಿ ಧನಂಜಯ್ ಅವರು ಸ್ಪರ್ಧೆ ಮಾಡುವ ಬಗ್ಗೆ ಚರ್ಚೆ ನಡೆಸಿಲ್ಲ. ಅಭ್ಯರ್ಥಿಗಳ ಆಯ್ಕೆಗೆ ಶಾರ್ಟ್ ಲಿಸ್ಟ್ ಸಿದ್ದವಾಗಿದೆ. ಮುಂದೆ ಸ್ಕ್ರೀನಿಂಗ್ ಕಮಿಟಿನಲ್ಲಿ ಚರ್ಚೆ ನಡೆಸಿ ಚುನಾವಣೆ ಸ್ಪರ್ಧೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ವೇಳೆ ಕೆಪಿಸಿಸಿ ಕೋ ಆರ್ಡಿನೇಟರ್ ಖಾಲೀದ್ ಹುಸೇನ್, ಕೆಪಿಸಿಸಿ ರಾಜ್ಯ ಓಬಿಸಿ ಪ್ರಧಾನ ಕಾರ್ಯದರ್ಶಿ ನಾಗರಾಜ್ ಗುಯಿಲಾಳು , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜೀಂ, ವಹಿದ್ ಉರ್ ರಹಮನ್, ಮೇಟಿಕುರ್ಕೆ ಗ್ರಾಪಂ ಸದಸ್ಯ ಶಿವಕುಮಾರ್, ತಿಪ್ಪೇಸ್ವಾಮಿ, ರಾಜಣ್ಣ ಮುಂತಾದವರಿದ್ದರು.