ರೇಬಿಸ್‌ ನಿರ್ಮೂಲನೆಗೆ ಜನರ ಸಹಕಾರ ಅಗತ್ಯ

| Published : Sep 16 2025, 12:03 AM IST

ರೇಬಿಸ್‌ ನಿರ್ಮೂಲನೆಗೆ ಜನರ ಸಹಕಾರ ಅಗತ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಹುಚ್ಚುನಾಯಿ ರೋಗ ನಿರ್ಮೂಲನೆ ಮಾಡಲು ಸಾರ್ವಜನಿಕರ ಸಹಕಾರ ಮತ್ತು ಸಹಭಾಗಿತ್ವ ಬಹಳ ಅತ್ಯವಶ್ಯಕ ಆದರಿಂದ ಸಾರ್ವಜನಿಕರು ತಮ್ಮ ಸಾಕು ಪ್ರಾಣಿಗಳಾದ ನಾಯಿಗಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸಬೇಕು ಎಂದು ಶಾಸಕ ಶಾಸಕ ಸಿ. ಬಿ. ಸುರೇಶ್ ಬಾಬು ತಿಳಿದರು.

ಚಿಕ್ಕನಾಯಕನಹಳ್ಳಿ: ಹುಚ್ಚುನಾಯಿ ರೋಗ ನಿರ್ಮೂಲನೆ ಮಾಡಲು ಸಾರ್ವಜನಿಕರ ಸಹಕಾರ ಮತ್ತು ಸಹಭಾಗಿತ್ವ ಬಹಳ ಅತ್ಯವಶ್ಯಕ ಆದರಿಂದ ಸಾರ್ವಜನಿಕರು ತಮ್ಮ ಸಾಕು ಪ್ರಾಣಿಗಳಾದ ನಾಯಿಗಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸಬೇಕು ಎಂದು ಶಾಸಕ ಶಾಸಕ ಸಿ. ಬಿ. ಸುರೇಶ್ ಬಾಬು ತಿಳಿದರು.

ಪಟ್ಟಣದ ತಾಲೂಕು ಕಚೇರಿಯಲ್ಲಿ ವಿಶ್ವ ರೇಬೀಸ್ ದಿನಾಚರಣೆ ಪ್ರಯುಕ್ತ ರೇಬೀಸ್ ರೋಗದ ಬಗ್ಗೆ ಸಾರ್ವಜನಿಕರು ಹಾಗು ಶಾಲಾ ಮಕ್ಕಳಲ್ಲಿ ಅರಿವು ಮೂಡಿಸಲು ಪಶುಪಾಲನಾ ಇಲಾಖೆಯು ಹೊರತಂದಿರುವ ಭಿತ್ತಿಪತ್ರ ಮತ್ತು ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು, ಮಾರಣಾಂತಿಕ ರೋಗವಾದ ರೇಬೀಸ್ /ಹುಚ್ಚುನಾಯಿ ರೋಗವನ್ನು ನಿರ್ಮೂಲನೆ ಮಾಡಲು ಸಾರ್ವಜನಿಕರ ಸಹಕಾರ ಮತ್ತು ಸಹಭಾಗಿತ್ವ ಬಹಳ ಅತ್ಯವಶ್ಯಕ ಆದರಿಂದ ಸಾರ್ವಜನಿಕರು ತಮ್ಮ ಸಾಕು ಪ್ರಾಣಿಗಳಾದ ನಾಯಿಗಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸಬೇಕು ಮತ್ತು ಸಂಬಂಧಪಟ್ಟ ಇಲಾಖೆಗಳು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡುವುದರ ಮೂಲಕ ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಾಸ್ತಾವಿಕಾವಾಗಿ ಮಾತನಾಡಿದ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ )ಡಾ. ವೈ. ಜಿ ಕಾಂತರಾಜು ಪ್ರತಿವರ್ಷ ವಿಶ್ವದಲ್ಲಿ ಸುಮಾರು 60000 ಮತ್ತು ಭಾರತದಲ್ಲಿ ಸುಮಾರು ಇಪ್ಪತ್ತು ಸಾವಿರ ಜನ ರೇಬೀಸ್ ರೋಗಕ್ಕೆ ಬಲಿಯಾಗುತ್ತಿದ್ದು ಸರ್ಕಾರ ಈ ರೋಗವನ್ನು 2030 ರೊಳಗೆ ನಿರ್ಮೂಲನೆ ಮಾಡುವ ಗುರಿ ಇಟ್ಟುಕೊಂಡು ಕಾರ್ಯ ಕಾರ್ಯಕ್ರಮ ರೂಪಿಸಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಪುರಂದರ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದೊಡ್ಡಸಿದ್ದಪ್ಪ ಉಪಸ್ಥಿತರಿದ್ದರು.