ಜನಪ್ರತಿನಿಧಿಗಳ ಕೋರ್ಟ್‌ ಸೂಚನೆ ವಿತ್ತಸಚಿವೆ ನಿರ್ಮಲಾ ವಿರುದ್ಧ ಬೆಂಗಳೂರಲ್ಲಿ ಎಫ್‌ಐಆರ್‌ಗೆ ಆದೇಶ

| Published : Sep 28 2024, 01:15 AM IST / Updated: Sep 28 2024, 05:46 AM IST

ಜನಪ್ರತಿನಿಧಿಗಳ ಕೋರ್ಟ್‌ ಸೂಚನೆ ವಿತ್ತಸಚಿವೆ ನಿರ್ಮಲಾ ವಿರುದ್ಧ ಬೆಂಗಳೂರಲ್ಲಿ ಎಫ್‌ಐಆರ್‌ಗೆ ಆದೇಶ
Share this Article
  • FB
  • TW
  • Linkdin
  • Email

ಸಾರಾಂಶ

ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರು. ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

 ಬೆಂಗಳೂರು :  ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರು. ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಜನಾಧಿಕಾರ ಸಂಘರ್ಷ ಪರಷತ್‌ನ ಆದರ್ಶ ಆರ್‌. ಐಯ್ಯರ್‌ ನೀಡಿದ ದೂರಿನ ಮೇರೆಗೆ ಶುಕ್ರವಾರ ನ್ಯಾಯಾಲಯ ಎಫ್ಐಆರ್‌ ದಾಖಲಿಸುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಮುಂದೂಡಿಕೆ ಮಾಡಿದೆ. ತಿಲಕ್‌ನಗರ ಪೊಲೀಸರಿಗೆ ಎಫ್‌ಐಆರ್‌ ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ.

ಸಚಿವೆ ನಿರ್ಮಲಾ ಸೀತಾರಾಮನ್‌ ಜತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡ ನಳಿನ್‌ ಕುಮಾರ್‌ ಕಟೀಲ್‌, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಕಚೇರಿ ಮತ್ತು ಇ.ಡಿ. ಇಲಾಖೆ ವಿರುದ್ಧ ದೂರು ದಾಖಲಿಸಲಾಗಿದೆ. 2019ರ ಏಪ್ರಿಲ್‌ ತಿಂಗಳಿನಿಂದ 2022ರ ಆಗಸ್ಟ್‌ ತಿಂಗಳವರೆಗೆ ಉದ್ಯಮಿ ಅನಿಲ್‌ ಅಗಲ್‌ವಾಲ್‌ ಅವರ ಸಂಸ್ಥೆಯ ಕಡೆಯಿಂದ ಸುಮಾರು 230 ಕೋಟಿ ರು. ಮತ್ತು ಅರೊಬಿಂದೋ ಫಾರ್ಮಸಿ ಸಂಸ್ಥೆಯಿಂದ 49 ಕೋಟಿ ರು.ನಷ್ಟು ಚುನಾವಣಾ ಬಾಂಡ್‌ಗಳ ಮೂಲಕ ವಸೂಲಿ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.