ಸಾರಾಂಶ
- ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ- ಸನ್ಮಾನ ಸಮಾರಂಭದಲ್ಲಿ ಶಾಸಕ ಬಸವಂತಪ್ಪ - - - ಕನ್ನಡಪ್ರಭ ವಾರ್ತೆ ಚನ್ನಗಿರಿ
ಸರ್ಕಾರಿ ಹುದ್ದೆಯಲ್ಲಿದ್ದುಕೊಂಡು ಜನ ಮೆಚ್ಚುವಂತಹ ಸೇವೆಯನ್ನು ಮಾಡಿದಾಗ ನಿವೃತ್ತಿ ಹೊಂದಿದರೂ ಅವರು ಸ್ಮರಣೆಗೆ ಯೋಗ್ಯವಾಗಿರುತ್ತಾರೆ ಎಂದು ಮಾಯಕೊಂಡ ವಿಧಾನಸಭಾ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು.ಗುರುವಾರ ಸಂಜೆ ಶ್ರೀ ಮೌದ್ಗಲ್ ಆಂಜನೇಯಸ್ವಾಮಿ ಸಮುದಾಯ ಭವನದಲ್ಲಿ ಶಿಕ್ಷಣ ಇಲಾಖೆಯಿಂದ ಏರ್ಪಡಿಸಿದ್ದ ನಿವೃತ್ತ ತವರಿನ ಸಿರಿಗಳಿಗೆ ಸನ್ಮಾನ, ಅತ್ಯುತ್ತಮ ಶಾಲೆ, ಅತ್ಯುತ್ತಮ ಎಸ್.ಡಿ.ಎಂ.ಸಿ, ಹಳೆಯ ವಿದ್ಯಾರ್ಥಿಗಳ ಸಂಘ, ಕ್ರಿಯಾಶೀಲ ಶಿಕ್ಷಕ ಮತ್ತು ರಾತ್ರಿ ಶಾಲೆಗಳನ್ನು ನಡೆಸಿದ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡರೂ ಅವರ ಅನನ್ಯ ಸೇವೆಯನ್ನು ಪರಿಗಣಿಸಿ, ಸನ್ಮಾನ ಮಾಡುತ್ತಿರುವುದು ಇಲಾಖೆ ಅಧಿಕಾರಿಗಳ ದೊಡ್ಡ ಗುಣವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಾಸಕ ಬಸವರಾಜ ವಿ. ಶಿವಗಂಗಾ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಮಹತ್ವವನ್ನು ತಂದು ಕೊಟ್ಟ ಡಾ.ಸರ್ವೆಪಲ್ಲಿ ರಾಧಕೃಷ್ಣನ್ ಅವರ ಜನ್ಮದಿನ ಸಮಾರಂಭದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ವಿವಿಧ ಭಾಗಗಳಲ್ಲಿ ಉತ್ತಮ ಸೇವೆಗಳನ್ನು ಸಲ್ಲಿಸಿದ ಶಾಲೆಗಳಿಗೆ, ಶಿಕ್ಷಕರಿಗೆ ಹಾಗೂ ಅಧಿಕಾರಿಗಳಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನಗಳನ್ನು ಮಾಡಲಾಗುತ್ತಿದೆ. ಇದು ಶಿಕ್ಷಣ ಇಲಾಖೆಗೆ ಸಂದ ಗೌರವವಾಗಿದೆ ಎಂದರು.ಸಮಾರಂಭದಲ್ಲಿ ಉತ್ತಮ ಶಾಲಾ ಪ್ರಶಸ್ತಿಯನ್ನು ಆಗರಬನ್ನಿಹಟ್ಟಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಎಕ್ಕೆಗೊಂದು ಗ್ರಾಮದ ಪ್ರಾಥಮಿಕ ಶಾಲೆ, ನಲ್ಲೂರು ಗ್ರಾಮದ ಸರ್ಕಾರಿ ಬಾಲಿಕಾ ಪ್ರೌಢಶಾಲೆ, ಬಸವಾಪಟ್ಟಣದ ಜನತಾ ಪ್ರೌಢಶಾಲೆ, ಸಂತೆಬೆನ್ನೂರಿನ ಗುರುಕುಲ ಶಾಲೆ, ವಿಜಯ ಪ್ರೌಢಶಾಲೆಗೆ ಪ್ರಶಸ್ತಿ ನೀಡಿ, ಗೌರವಿಸಲಾಯಿತು.
ಉತ್ತಮ ಕಲಾ ಸೌರಭ ಶಾಲಾ ಪ್ರಶಸ್ತಿಯನ್ನು ಮಾವಿನಕಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ನೀಡಲಾಯಿತು. ಉತ್ತಮ ಶಾಲಾ ಎಸ್‌ಡಿಎಂಸಿ ಪ್ರಶಸ್ತಿಯನ್ನು ಬೆಳಲಗೆರೆ, ಚನ್ನಗಿರಿ, ಹಿರೇಕೋಗಲೂರಿನ ಶಾಲೆಗಳಿಗೆ ನೀಡಲಾಯಿತು. ಉತ್ತಮ ಹಳೇ ವಿದ್ಯಾರ್ಥಿ ಸಂಘದ ಪ್ರಶಸ್ತಿಯನ್ನು ತಿಮ್ಲಾಪುರ, ವಡ್ನಾಳ್ ಗ್ರಾಮದ ಪ್ರಾಥಮಿಕ ಶಾಲೆಗಳಿಗೆ ನೀಡಲಾಯಿತು. ಉತ್ತಮ ಕ್ರಿಯಾಶೀಲ ಶಿಕ್ಷಕ ಪ್ರಶಶ್ತಿಯನ್ನು ತಾಲೂಕಿನ 25 ಶಾಲೆಗಳ ಶಿಕ್ಷಕರಿಗೆ ನೀಡಲಾಯಿತು.ನಿವೃತ್ತ ತವರಿನ ಸಿರಿಗಳಾದ ಶಾಲಾ ಶಿಕ್ಷಣ ಇಲಾಖೆ ನಿವೃತ್ತ ನಿರ್ದೇಶಕ ಎಂ.ಎಸ್. ಪ್ರಸನ್ನಕುಮಾರ್, ನಿವೃತ್ತ ಜಂಟಿ ನಿರ್ದೇಶಕರಾದ ಎಚ್.ಮಂಜುನಾಥ್, ಜಿ.ಆರ್. ತಿಪ್ಪೇಶಪ್ಪ, ನಿವೃತ್ತ ಉಪ ನಿರ್ದೇಶಕ ಜಿ.ಎಂ. ಬಸವಲಿಂಗಪ್ಪ ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಡಾ. ಎಸ್.ಶಂಕರಪ್ಪ, ಶಿಕ್ಷಕರ ಸಂಘದ ಪ್ರಮುಖರಾದ ರಾಮಚಂದ್ರಪ್ಪ, ವಸಂತ್, ನೇತ್ರಾವತಿ, ಶಿವಪ್ರಕಾಶ್ ಉಪಸ್ಥಿತರಿದ್ದರು.- - - -6ಕೆಸಿಎನ್‌ಜಿ1:
ಸಮಾರಂಭದ ಉದ್ಘಾಟನೆಯನ್ನು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ನೆರವೇರಿಸಿದರು. ಚನ್ನಗಿರಿ ಕ್ಷೇತ್ರ ಶಾಸಕ ಬಸವರಾಜ ವಿ. ಶಿವಗಂಗಾ ಸೇರಿದಂತೆ ಮೊದಲಾದವರು ಇದ್ದಾರೆ.