ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಪ್ರಕರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಜಿಲ್ಲಾ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಅಪ್ಪಚ್ಚು ರಂಜನ್, ಹನುಮ ಧ್ವಜ ದಿಢೀರ್ ತೆರವು ಮಾಡುವ ಮೂಲಕ ರಾಜ್ಯದಲ್ಲಿ ಘರ್ಷಣೆ ಸೃಷ್ಟಿಸಲು ಸರಕಾರ ಮುಂದಾಗಿದೆ. 144 ಸೆಕ್ಷನ್ ಹಾಕುವ ಮೂಲಕ ದಮನಕಾರಿ ನೀತಿ ಅನುಸರಿಸುತ್ತಿದೆ. ಹಿಂದೂಗಳ ಮೇಲೆ ದೌರ್ಜನ್ಯ ನಡೆದ ಸಂದರ್ಭ ಕ್ರಮ ಕೈಗೊಳ್ಳದೆ ಕೈಕಟ್ಟಿ ಕುಳಿತ್ತಿರುವ ರಾಜ್ಯ ಸರಕಾರಕ್ಕೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಅಲ್ಪಸಂಖ್ಯಾತರನ್ನು ಮೆಚ್ಚಿಸುವ ಕೆಲಸಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಅಧಿಕಾರ ದುರುಪಯೋಗಪಡಿಸಿಕೊಂಡು ಹನುಮ ಧ್ವಜ ತೆರವು ಮಾಡಿರುವುದು ಖಂಡನೀಯ, ಘಟನೆಗೆ ಸಂಬಂಧಿಸಿದ ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ವಿಧಾನ ಪರಿಷತ್ತು ಮಾಜಿ ಸದಸ್ಯ ಮಂಡೇಪಂಡ ಸುನಿಲ್ ಸುಬ್ರಮಣಿ, ಮಾಜಿ ಅಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ, ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ನಗರಾಧ್ಯಕ್ಷ ಮನು ಮಂಜುನಾಥ್, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸದಸ್ಯರುಗಳಾದ ಅರುಣ್ ಶೆಟ್ಟಿ, ಕಾಳಚಂಡ ಅಪ್ಪಣ್ಣ, ಉಮೇಶ್ ಸುಬ್ರಮಣಿ, ಎಸ್.ಸಿ. ಸತೀಶ್, ಕೆ.ಎಸ್. ರಮೇಶ್, ಚಂದ್ರಶೇಖರ್, ಮಂಜುಳಾ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು